ದಾವಣಗೆರೆ | ಸವಾಲು ಸ್ವೀಕರಿಸಿ ಪ್ರದೀಪ್ ಈಶ್ವರ್ ಎಂಟ್ರಿ: ಹುಚ್ಚ… ಹುಚ್ಚ… ಎಂದ ಬಿಜೆಪಿಗರು

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಕಿದ ಸವಾಲನ್ನು ಸ್ವೀಕರಿಸಿ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಶನಿವಾರ ದಾವಣಗೆರೆಗೆ ಭೇಟಿ ನೀಡಿದ್ದು, ಭರ್ಜರಿ ರೋಡ್‌ ಶೋ ನಡೆಸಿದರು.

- Advertisement -

ಸವಾಲಿನ ಹಿನ್ನೆಲೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಪ್ರದೀಪ್ ಈಶ್ವರ್ ಅವರು ಈ ಹಿಂದೆ, ʼಬಿಜೆಪಿಯವರು ʼಅಯೋಗ್ಯರುʼ ಎಂಬ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರೆಂಬ ಆರೋಪಕ್ಕೆ ಪ್ರತಿಕ್ರಿಯೆಯಾಗಿ ದಾವಣಗೆರೆ ಬಿಜೆಪಿ ನಾಯಕರು, ವಿಶೇಷವಾಗಿ ಮಾಜಿ ಮೇಯರ್ ಅಜಯ್ ಕುಮಾರ್ ಅವರು ʼಪ್ರದೀಪ್‌ ಈಶ್ವರ್‌ಗೆ ತಾಕತ್ತಿದ್ದರೆ ದಾವಣಗೆರೆಗೆ ಬರಲಿʼ ಎಂದು ಸವಾಲು ಹಾಕಿದ್ದರು. ಈ ಸವಾಲು ಸ್ವೀಕರಿಸಿ ಬಂದ ಪ್ರದೀಪ್ ಈಶ್ವರ್ ದಾವಣಗೆರೆಯಲ್ಲಿ ಣರ್ಜರಿ ರೋಡ್‌ ಶೋ ನಡೆಸಿದ್ದಾರೆ.

ಏನು ನಡೆಯಿತು?

ಪ್ರದೀಪ್ ಈಶ್ವರ್ ಅವರು ದಾವಣಗೆರೆಗೆ ಭೇಟಿ ನೀಡಿ ಪಿ ಬಿ ರಸ್ತೆಯಿಂದ ಬಂದು ಕೆಬಿ ಬಡಾವಣೆ ಬಿಜೆಪಿ ಕಚೇರಿ ಮುಂದೆ ಬಂದು ನಿಂತ ಅವರು ತೊಡೆತಟ್ಟಿ ಸವಾಲು ಎದುರಿಸಿದರು. ʼಕಾಂಗ್ರೆಸ್‌ನಲ್ಲಿ ಹೊಸ ಪೀಳಿಗೆ ಬಂದಿದೆʼ ಎಂದ ಅವರು ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ನಡೆಸುವ ರೀತಿಯನ್ನು ಟೀಕಿಸಿದರು.

ದಾವಣಗೆರೆಯಲ್ಲಿ ಪ್ರದೀಪ್‌ ಈಶ್ವರ್‌ ರೋಡ್‌ ಶೋ

‌ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರದೀಪ್ ಈಶ್ವರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಮತ್ತು ಪೊರಕೆ ತೋರಿಸಿ ʼಹುಚ್ಚ… ಹುಚ್ಚ…ʼ ಎಂಬ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರೂ ಕೂಡ ಧಿಕ್ಕಾರ ಕೂಗಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಯಾಗಿ ಸವಾಲು ಹಾಕುವ ರೀತಿಯಲ್ಲಿ ಕೈಸನ್ನೆ ಮಾಡುವ ಬಿಜೆಪಿಯನ್ನು ಎದುರಿಸಿದರು.‌

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಗ್ಯಾರೆಂಟಿ ಅಭಿವೃದ್ಧಿಗೆ ಕೈ ಬಲಪಡಿಸಿ: ಮಾಜಿ ಸಚಿವ ಅಜಯಕುಮಾರ್ ಸರನಾಯಕ

ಜಮಾವಣೆಗೊಂಡ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ದಾವಣಗೆರೆ ರೋಡ್‌ ಶೋ

ಈ ಘಟನೆಯು ದಾವಣಗೆರೆ ಉಪಚುನಾವಣೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು (ಶಾಮನೂರು ಶಿವಶಂಕರಪ್ಪರ ವಂಶದವರು) ಅವರ ಪರವಾಗಿ ಪ್ರದೀಪ್ ಈಶ್ವರ್ ಪ್ರಚಾರ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...