ದಾವಣಗೆರೆ | ಜಾತಿ ಗಣತಿ ಸಮೀಕ್ಷೆ ಮಂಡಿಸಿ, ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಿ; ದಲಿತ ಸಂಘರ್ಷ ಸಮಿತಿ

Date:

“ನ್ಯಾ.ಹೆಚ್.ಎನ್.ನಾಗಮೋಹನ್‌ದಾಸ್ ರವರ ಜಾತಿಗಣತಿ ಸಮೀಕ್ಷಾ ವರದಿ ಜುಲೈ ಒಳಗೆ ಸಲ್ಲಿಸಬೇಕು. ವಿರೋಧ ಪಕ್ಷಗಳು ಅಧಿವೇಶನದಲ್ಲಿ ಒಳಮೀಸಲಾತಿ ಈಡೇರಿಕೆಗಾಗಿ ತಮ್ಮ ಬದ್ಧತೆಯನ್ನು ಪ್ರಕಟಿಸಿ, ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸಬೇಕು” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದರು.

- Advertisement -

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಸಂಸ ರಾಜ್ಯ ಸಂಚಾಲಕ ಎನ್ ಮಲ್ಲೇಶ್ “ಆಗಸ್ಟ್ 01-2024 ರಂದು ಘನ ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರಗಳು ಆದ್ಯತೆಯ ಮೇರೆಗೆ ಜಾರಿಗೊಳಿಸಬಹುದು ಎಂಬ ಐತಿಹಾಸಿಕ ತೀರ್ಪನ್ನು ನೀಡಿ ಒಂದು ವರ್ಷ ಗತಿಸುತ್ತಿದೆ. ಎರಡೇ ತಿಂಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯಾ ಸಮೀಕ್ಷೆಯನ್ನು ಪೂರ್ಣಗೊಳಿಸಿ ತಮ್ಮ ನೈತಿಕ ಜವಾಬ್ದಾರಿಯನ್ನು ಪೂರೈಸಿದ್ದರೆ, 30ವರ್ಷಗಳ ಒಳಮೀಸಲಾತಿ ಹೋರಾಟವು ಮತ್ತೊಂದು ಸುತ್ತಿನ ಹೋರಾಟವಾಗಿ ಪರಿವರ್ತನೆಯಾಗುವ ಅಗತ್ಯವಿರಲಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಈಗಲಾದರೂ ಇಂತಹ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರೆಸದೇ, ಆಡಳಿತರೂಢ ಸರ್ಕಾರವು ಪ್ರಸಕ್ತ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ತಮ್ಮ ಬದ್ಧತೆಯನ್ನು ಪ್ರಕಟಿಸಬೇಕಾಗಿದೆ. ಏಕೆಂದರೆ, ನ್ಯಾ. ನಾಗಮೋಹನ್ ದಾಸ್‌ರವರ ನೇತೃತ್ವದಲ್ಲಿ ನೇಮಕವಾದ ಏಕಸದಸ್ಯ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವೈಜ್ಞಾನಿಕ ಹಾಗೂ ವಸ್ತುನಿಷ್ಠ ವರದಿಯನ್ನು ಜುಲೈ 30 ರೊಳಗಡೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ. ಹಾಗಾಗಿ ವರದಿಯನ್ನು ಆದಷ್ಟು ಬೇಗ ಪಡೆದು ಆಗಸ್ಟ್ 11 ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಸರ್ವಪಕ್ಷಗಳ ಅನುಮೋದನೆಯೊಂದಿಗೆ ಒಳಮೀಸಲಾತಿ ಬೇಡಿಕೆಯನ್ನು ಅಂಗೀಕರಿಸಿದರೆ, ನೇಮಕಾತಿ ಆಗಬೇಕಾದ 30 ಸಾವಿರಕ್ಕೂ ಅಧಿಕ ಹುದ್ದೆಗಳು ಸಮುದಾಯದ ನಿರುದ್ಯೋಗಿ ಯುವಕ, ಯುವತಿಯರು ಪಡೆಯಬಹುದಾಗಿದೆ” ಎಂದು ಅಭಿಪ್ರಾಯಪಟ್ಟರು.

“ವಿಷಾದಕರ ಸಂಗತಿ ಎಂದರೆ ಕಳೆದ 30 ವರ್ಷಗಳಲ್ಲಿ ಆಯೋಗ ನೇಮಕವಾಗಲು, ನೇಮಕವಾದ ಆಯೋಗಕ್ಕೆ ಅನುದಾನ ನೀಡಲು, ಸರ್ಕಾರಕ್ಕೆ ಒಪ್ಪಿಸಿದ ವರದಿಯನ್ನು ಅನುಷ್ಠಾನಗೊಳಿಸಲು 3 ದಶಕಗಳ ವಿಳಂಬ ಮುಂದುವರೆದಿರುವುದರಿಂದ ನೊಂದ ಸಮುದಾಯಗಳು ಯಾವುದೇ ಸರ್ಕಾರಗಳನ್ನು ನಂಬುವ ಸ್ಥಿತಿಯಲ್ಲಿಲ್ಲ. ಈ ಎಲ್ಲಾ ಕಹಿ ಅನುಭವಗಳು ಮುಂದುವರೆಯದಂತೆ ಸರ್ಕಾರವು ಆಗಸ್ಟ್ 11 ರಿಂದ ಆರಂಭವಾಗಲಿರುವ ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವನ್ನು ಕೈಗೊಳ್ಳುವ ಮೂಲಕ ನುಡಿದಂತೆ ನಡೆಯಲು ಆಗ್ರಹಿಸಿ ಆಗಸ್ಟ್ 11, 2025 ರಿಂದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಅನಿರ್ಧಿಷ್ಟ ಆಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರುಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಈ ಹೋರಾಟದಲ್ಲಿ ಭಾಗವಹಿಸಲು ಕರೆ ನೀಡುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯೂರಿಯಾ ರಸಗೊಬ್ಬರ ಪೂರೈಕೆಗೆ ಜಗಳೂರಿನ ಹಲವೆಡೆ ರೈತಸಂಘ ರಸ್ತೆ ತಡೆದು ಪ್ರತಿಭಟನೆ

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಜಿಎಸ್ ಲೋಕೇಶ್ ಹಾಲೇಕಲ್ಲು, ಜಿಲ್ಲಾ ಸಂ.ಸಂಚಾಲಕ ಸಮಾದೆಪ್ಪ, ಬಿಎಸ್ ಚನ್ನಬಸಪ್ಪ, ಮಂಜುನಾಥ ಕಬ್ಬೂರು, ಹೆಚ್ ಸಿ ಮಲ್ಲಪ್ಪ, ಲಿಂಗರಾಜು, ಪರಶುರಾಮ, ಗಿರೀಶ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.‌
‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...