ದಾವಣಗೆರೆ | ಬ್ಯಾಂಕ್ ಸಿಬ್ಬಂದಿ ನೇಮಕಾತಿಗೆ ಒತ್ತಾಯಿಸಿ ಪ್ರತಿಭಟನೆ

Date:

ಬ್ಯಾಂಕ್‌ಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿಗಳ ನೇಮಕಾತಿ, ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು-ಅನುಷ್ಠಾನಗೊಳಿಸಲು ಒತ್ತಾಯಿಸಿ ಹಾಗೂ ಬ್ಯಾಂಕಿನ ಖಾಯಂ ಉದ್ಯೋಗಗಳ ನೇಮಕಾತಿಗೆ ಹೊರಗುತ್ತಿಗೆ ನೀಡುವುದನ್ನು ವಿರೋಧಿಸಿ ದೇಶದಾದ್ಯಂತ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರತಿಭಟನಾ ಮತ ಪ್ರದರ್ಶನಕ್ಕೆ ಕರೆ ನೀಡಿತ್ತು.

- Advertisement -

ಇದರ ಅಂಗವಾಗಿ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ನೇತೃತ್ವದಲ್ಲಿ ನ.16 ಬ್ಯಾಂಕ್ ಉದ್ಯೋಗಿಗಳು ನಗರದ ಪಿ.ಬಿ.ರಸ್ತೆಯ ಕರ್ಣಾಟಕ ಬ್ಯಾಂಕಿನ ಮುಂಭಾಗ ಶಕ್ತಿ ಪ್ರದರ್ಶನ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸಿಬ್ಬಂದಿಗಳ ನೇಮಕಾತಿ ಮಾಡುವುದರ ಮೂಲಕ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ಸಿಗುವಂತೆ ಮಾಡಬೇಕು ಮತ್ತು ಸಾರ್ವಜನಿಕ ಸ್ವಾಮ್ಯದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಬೇಕು. ಸಿಬ್ಬಂದಿಗಳ ಕೊರತೆಯಿಂದ ಗ್ರಾಹಕರಿಗೆ ಸಮರ್ಪಕ ಸೇವೆ ಸಿಗದಿದ್ದಲ್ಲಿ ಅವರು ಹೊಸ ತಲೆಮಾರಿನ ಖಾಸಗಿ ಬ್ಯಾಂಕುಗಳತ್ತ ಮುಖ ಮಾಡುವ ಸಾಧ್ಯತೆಯಿದೆ.

ಹಾಗಾದಲ್ಲಿ ಗ್ರಾಹಕರ ಠೇವಣಿ ಹಣದ ಭದ್ರತೆಗೆ ಅಪಾಯ ಆಗುವುದರ ಜೊತೆಗೆ ರಾಷ್ಟ್ರೀಕೃತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಾಳುಗೆಡವಿದಂತಾಗುವುದು ಎಂದು ಪ್ರತಿಭಟನಾಕಾರರು ಸರಕಾರವನ್ನು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದಮೂರ್ತಿ, ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ, ಕೆ.ವಿಶ್ವನಾಥ ಬಿಲ್ಲವ, ಹೆಚ್.ಎಸ್.ತಿಪ್ಪೇಸ್ವಾಮಿ, ಆರ್.ಆಂಜನೇಯ, ಎಂ.ಸತೀಶ್, ಎಂ.ಎಂ.ಸಿದ್ದಲಿಂಗಯ್ಯ, ಸುಮಂತ್ ಎಸ್ ಭಟ್, ಪರಶುರಾಮ, ಕೆ.ಶಶಿಶೇಖರ್, ಶ್ರೀನಿವಾಸ್ ನಾಡಿಗ್, ಕಿರಣ್ ಜಿ ಎಸ್, ನಾಗಭೂಷಣ್ ಎನ್ ಪಿ,  ಸುಜಾತಾ ರೆಡ್ಡಿ, ಉಷಾ, ಅನುಷಾ, ಶಿಲ್ಪ ಎಚ್, ಗಂಗು ಸತ್ಯಾನಂದ, ಅಮೃತಾ, ಸುಷ್ಮಾ ದೇಸಾಯಿ, ಅಶ್ವಿನಿ, ಸುನಂದಮ್ಮ, ಮತ್ತಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...