ದಾವಣಗೆರೆ | ಕನ್ನಡ ಪರ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

Date:

ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಒತ್ತಾಯಿಸಿ ಜೈ ಕರುನಾಡ ವೇದಿಕೆ ಮತ್ತು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರರು, ಕಳೆದ ಡಿ.27ರಂದು ಬೆಂಗಳೂರಿನಲ್ಲಿ ಇಂಗ್ಲಿಷ್ ಫಲಕಗಳನ್ನು ತೆರವುಗೊಳಿಸಲು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಆಂಗ್ಲ ಫಲಕಗಳಿಗೆ ಮಸಿ ಬಳಿಯಲು ಪ್ರಯತ್ನಿಸಿದಾಗ, ಬೆಂಗಳೂರಿನ ಪೊಲೀಸರು ಕನ್ನಡ ಪರ ಸಂಘಟನೆಗಳ ಹೋರಾಟಗಾರರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದು ಖಂಡನೀಯ ಕನ್ನಡದ ನೆಲ, ಜಲ, ಭಾಷೆ, ಗಡಿ ಸಂಸ್ಕೃತಿಗಾಗಿ ಹೋರಾಟ ಮಾಡುತ್ತಿರುವ ಕನ್ನಡಿಗರನ್ನು ಏಕಾಏಕಿ ಬಂಧಿಸಿರುವುದು ಸರಿಯಲ್ಲ. ಈ ಕೂಡಲೇ ಕನ್ನಡ ಪರ ಸಂಘಟನೆಗಳ ಹೋರಾಟಗಾರರನ್ನು ಬಿಡುಗಡೆಗೊಳಿಸ ಬೇಕೆಂದು ಆಗ್ರಹಿಸಿದರು.

ನಂತರ, ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮುಖಾಂತರ ತೆರಳಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಬಂಧನದಲ್ಲಿರುವ ಕನ್ನಡಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಮನವಿ ಮಾಡಿದರು.

ಮತ್ತೊಂದು ಪ್ರತಿಭಟನೆಯಲ್ಲಿ ಕನ್ನಡೇತರ ನಾಮಫಲಕ  ತೆರವಿಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರನ್ನು  ಕೂಡಲೇ ಬಿಡುಗಡೆ ಮಾಡದಿದ್ದರೆ ಜನೇವರಿ 2ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ಬೆಳಗ್ಗೆ 8ಗಂಟೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ. ಶಿವಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕನ್ನಡಕ್ಕಾಗಿ ಹೋರಾಡಿದ ಹೋರಾಟಗಾರರನ್ನು ಬಂಧಿಸಿ ಜೈಲಿನಲ್ಲಿಟ್ಟಿರುವುದು ತಪ್ಪು. ಆಂಗ್ಲ ಫಲಕ ತೆಗೆಯಲು ಹೇಳಿದ ಕನ್ನಡಪರ ಹೋರಾಟಗಾರರನ್ನು ಅಪರಾಧಿಗಳಂತೆ  ಬಿಂಬಿಸಬಾರದು ಎಂದರು. ನಾಡು-ನುಡಿ, ಜಲಕ್ಕಾಗಿ  ಹೋರಾಟ ಮಾಡುವ ಕನ್ನಡದ ಹೋರಾಟಗಾರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜೇಂದ್ರ ಬಂಗೇರ, ಕೆ.ಎನ್. ವೆಂಕಟೇಶ್, ನಾಗೇಂದ್ರ ಬಂಡೀಕರ್, ಕೆ.ಜಿ ರಾಮೇಗೌಡ, ಕೆ.ಟಿ. ಗೋಪಾಲಗೌಡ, ಎಸ್.ಜಿ. ಸೋಮಶೇಖರ್, ಐಗೂರು  ಸುರೇಶ್, ರುದ್ರೇಶ್, ಶುಭಮಂಗಳ, ಟಿ. ಮಂಜುನಾಥ ಗೌಡ, ಶೇರ್ ಅಲಿ, ನಾರಾಯಣ, ಅರುಣ್ ಕುಮಾರ್, ಗಿರೀಶ್, ಸಮೀರ್, ಮೋಹನ್ ಸೇರಿದಂತೆ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...