ದಾವಣಗೆರೆ | ಕಾರ್ಲ್ ಮಾರ್ಕ್ಸ್ ನಗರದ ಘಟನೆಗೆ  ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಠ್‌; ಪೊಲೀಸ್‌ ಇಲಾಖೆ ಎಚ್ಚರಿಕೆ

Date:

Advertisements

ದಾವಣಗೆರೆ ನಗರದ ಎರಡು ಕೋಮುಗಳ ಮುಖಂಡರಿಗೆ, ನಾಗರೀಕರಿಗೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸೂಚನೆ ನೀಡಲಾಗಿದ್ದು, ಎರಡು ಕೋಮಿನ ಮುಖಂಡರುಗಳು, ನಾಗರೀಕರು ದಾವಣಗೆರೆ ಜಿಲ್ಲಾ ಪೊಲೀಸ್ ಜೊತೆಯಲ್ಲಿ ಸಹಕರಿಸಬೇಕು, ಹಾಗೂ  ಯಾವುದೇ ಕೋಮಿನ ಮುಖಂಡರುಗಳು, ನಾಗರೀಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ, ಪೋಸ್ಟರ್ ಗಳನ್ನು ಮಾಡಬಾರದು. ಒಂದು ವೇಳೆ ಹಾಗೇನಾದರೂ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ.

WhatsApp Image 2025 09 23 at 6.51.33 PM
ಪಥಸಂಚಲನ ವೇಳೆ ಎಸ್ಪಿ ಹಾಗೂ ಪೊಲೀಸ್‌ ಸಿಬ್ಬಂದಿ

ಸೆಪ್ಟಂಬರ್ 24, 2025 ರಂದು ರಾತ್ರಿ ದಾವಣಗೆರೆ ನಗರದ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಪ್ಲೆಕ್ಸ್  ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಕೋಮುಗಳ ನಡುವೆ ವಾಗ್ವಾದ ನಡೆದ ಘಟನಾ ಸ್ಥಳಕ್ಕೆ  ಪೂರ್ವವಲಯ ಐಜಿಪಿ ಡಾ. ರವಿಕಾಂತೇಗೌಡ ಹಾಗೂ ಎಸ್ಪಿ ಉಮಾ ಪ್ರಶಾಂತ್‌ ಭೇಟಿ ನೀಡಿ, ಎರಡು ಕೋಮಿನ ದೂರುಗಳ ಮೇಲೆ ಪರಿಶೀಲನೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎರಡು ಕಡೆ ಮುಖಂಡರಿಗೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ. ಸದರಿ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಈಗಾಗಲೇ 7 ಆರೋಪಿತರನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ದಲಿತರು,ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಮಾಜಿ ಶಾಸಕ ರಾಮಪ್ಪ

ಸೆಪ್ಟಂಬರ್ 24, 2025 ರಂದು ರಾತ್ರಿ ದಾವಣಗೆರೆ ನಗರದ ಕಾರ್ಲ್ ಮಾರ್ಕ್ಸ್ ನಗರದಲ್ಲಿ  ಪ್ಲೆಕ್ಸ್ ಕಟ್ಟುವ ವಿಚಾರದಲ್ಲಿ  ನಡೆದಂತಹ ಒಂದು  ಘಟನೆ ಸಂಬಂಧ ದಾವಣಗೆರೆ ಅಜಾದ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ 4 ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈ ಸಂಬಂಧ ತನಿಖೆ ನಡೆಸುತ್ತಿರುವ ತಂಡ ಏಳು ಆರೋಪಿಗಳನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದೆ.  

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X