ದಾವಣಗೆರೆ | ಕಂದಾಯ ದಾಖಲೆ ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ,ಸಾರ್ವಜನಿಕರಿಗೆ ಆನ್‍ಲೈನಲ್ಲಿ ಲಭ್ಯ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Date:

Advertisements


“ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ” ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗಳ ಸೇವೆಗಳ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಸಾರ್ವಜನಿಕರು ಕಂದಾಯ ಇಲಾಖೆಯಲ್ಲಿನ ಹಳೇ ಪಹಣಿ, ಮುಟೇಷನ್, ಲ್ಯಾಂಡ್ ಗ್ರಾಂಟ್ ರಿಜಿಸ್ಟರ್, ಬಗರ್ಹುಕುಂ ಕಡತ ಸೇರಿದಂತೆ ಭೂಮಿಯ ಎಲ್ಲಾ ದಾಖಲೆಗಳನ್ನು ಪಡೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿಯೇ ಎಲ್ಲಾ ತಾಲ್ಲೂಕುಗಳಲ್ಲಿನ ಅಭಿಲೇಖಾಲಯದ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕೆಲಸ ನಡೆಯುತ್ತಿದ್ದು ಇಲ್ಲಿಯವರೆಗೆ 1.13 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಅಪ್‍ಲೋಡ್ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಲು ದಾವಣಗೆರೆ ತಾಲ್ಲೂಕನ್ನು ಮಾದರಿ ತಾಲ್ಲೂಕಾಗಿ ತೆಗೆದುಕೊಳ್ಳಲಾಗಿತ್ತು. ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿರುವ ಒಟ್ಟು 105466 ಕಡತಗಳಲ್ಲಿ 83802 ಕಡತಗಳ 52,80,765 ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ಮಾದರಿಯಲ್ಲಿ ಅಪ್‍ಲೋಡ್ ಮಾಡಲಾಗಿದೆ. ಮತ್ತು ಇತರೆ ತಾಲ್ಲೂಕುಗಳಾದ ಹರಿಹರ 11,06,372, ಜಗಳೂರು 13,23.129, ಹೊನ್ನಾಳಿ 12,98,228, ಚನ್ನಗಿರಿ 11,48,183, ನ್ಯಾಮತಿ ತಾಲ್ಲೂಕು ಕಚೇರಿಯಲ್ಲಿನ 11,51,723 ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಅಪ್‍ಲೋಡ್ ಮಾಡಲಾಗಿದೆ. ಬಾಕಿ ಇರುವ ಕಡತಗಳನ್ನು ಮುಂದಿನ ಒಂದು ವರ್ಷದೊಳಗಾಗಿ ಎಲ್ಲಾ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕೆಲಸ ಪೂರ್ಣಗೊಳ್ಳಲಿದೆ. ಇದರಿಂದ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ವಿಳಂಬವಿಲ್ಲದೇ ಬೆರಳತುದಿಯಲ್ಲಿ ಪಡೆಯಲು ಸಾಧ್ಯವಾಗಲಿದೆ. ಮತ್ತು ರೆಕಾರ್ಡ್ ರೂಂನಲ್ಲಿ ಕೆಲವರು ಕಂದಾಯ ದಾಖಲೆಗಳನ್ನು ತಿದ್ದುವ ಕೆಲಸವನ್ನು ಮಾಡುತ್ತಿದ್ದರು, ಇದು ಸಹ ಮುಂದಿನ ದಿನಗಳಲ್ಲಿ ತಪ್ಪಲಿದ್ದು ಸರಳ, ಸುಲಲಿತವಾಗಿ ದಾಖಲೆಗಳನ್ನು ಪಡೆಯಲು ಸರ್ಕಾರ ಜನರಿಗೆ ಅನುಕೂಲ ಮಾಡಿಕೊಟ್ಟಿದೆ” ಎಂದರು.

Advertisements

“ತಹಶೀಲ್ದಾರರ ಕಚೇರಿ ಸೇರಿದಂತೆ ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇ-ಕಚೇರಿಯಲ್ಲಿಯೇ ಕಡತಗಳ ನಿರ್ವಹಣೆ ಮಾಡಲಾಗುತ್ತದೆ. ಈಗಾಗಲೇ ಕಂದಾಯ ದಾಖಲೆಗಳ ಸ್ಯ್ಕಾನಿಂಗ್ ಮಾಡಲಾಗುತ್ತಿದ್ದು ಸಾರ್ವಜನಿಕರು ಕೇಳುವ ಎಲ್ಲಾ ದಾಖಲೆಗಳನ್ನು ಡಿಜಿಟಲ್, ಆನ್‍ಲೈನ್ ಮೂಲಕವೇ ವಿತರಣೆ ಮಾಡಲಾಗುತ್ತದೆ. ದಾಖಲೆಗಳನ್ನು ಪಡೆಯಲು ಭೂ ಸುರಕ್ಷಾ ವೆಬ್‍ಸೈಟ್ ಸೇವಾ ಪೋರ್ಟಲ್ ಮೂಲಕ ಲಾಗಿನ್ ಆಗಿ ತಾವು ಬಯಸಿದ ದಾಖಲೆ ಆಯ್ಕೆ ಮಾಡಿ ಅದಕ್ಕೆ ಪ್ರತಿ ಪುಟಕ್ಕೆ ತಗಲುವ ರೂ.8 ಹಣವನ್ನು ಪಾವತಿ ಮಾಡಿ ದಾಖಲೆಗಳನ್ನು ಪಡೆಯಬಹುದು” ಎಂದು ತಿಳಿಸಿದರು.

“ಆನ್‍ಲೈನ್‍ನಲ್ಲಿ ದಾಖಲೆಗಳು ಇಲ್ಲದಿದ್ದಲ್ಲಿ 7 ದಿನಗಳಲ್ಲಿ ಸ್ಕ್ಯಾನ್ ಮಾಡಿ ನೀಡಲಾಗುತ್ತದೆ. ಇದರಿಂದ ಸಾರ್ವಜನಿಕರು ತಾಲ್ಲೂಕು ಕಚೇರಿಗಳನ್ನು ಅಲೆದಾಡುವಂತಿಲ್ಲ. ಡಿಜಿಟಲ್ ದಾಖಲೆಗಳಿಗೆ ಮೂಲ ದಾಖಲೆಗಳ ಪ್ರತಿಗೆ ಇದ್ದ ಮೌಲ್ಯವೇ ಇರಲಿದ್ದು ನ್ಯಾಯಾಲಯ ಸೇರಿದಂತೆ ಎಲ್ಲಾ ಅಗತ್ಯವಿರುವ ಕಡೆ ಮಾನ್ಯ ಮಾಡಲಾಗುತ್ತದೆ ಇದಕ್ಕೆ ಸರ್ಕಾರ ಆದೇಶ ನೀಡಿದೆ” ಎಂದರು.  

“ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುವ ಕೆಲಸದಲ್ಲಿ ದಾವಣಗೆರೆ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಮತ್ತು ಪಹಣಿಯೊಂದಿಗೆ ಆಧಾರ್ ಜೋಡಣೆಯಲ್ಲಿಯು ಮೊದಲ ಸ್ಥಾನದಲ್ಲಿದ್ದು ಅಧಿಕಾರಿಗಳು ತಂಡವಾಗಿ ಕೆಲಸ ಮಾಡುತ್ತಿದ್ದಾರೆ” ಎಂದರು.

“ದಾವಣಗೆರೆ ಜಿಲ್ಲೆಯಲ್ಲಿ ಈಗಾಗಲೇ 104 ಕಂದಾಯ ಗ್ರಾಮಗಳನ್ನು ರಚನೆ ಮಾಡುವ ಮೂಲಕ ಕಂದಾಯ ಗ್ರಾಮದಿಂದ 25 ಸಾವಿರ ಜನರಿಗೆ  ಹಕ್ಕುಪತ್ರ ನೀಡಲಾಗಿದೆ. ದರಖಾಸ್ತು ಪೋಡಿ ಅಭಿಯಾನದ ಮೂಲಕ ಒಟ್ಟುಗೂಡಿದ್ದ ಪಹಣಿಗಳನ್ನು ಬೇರ್ಪಡಿಸಲಾಗುತ್ತಿದೆ. ಆಧಾರ್ ಸೀಡಿಂಗ್ ಮಾಡುವ ವೇಳೆ ಪೌತಿ ಖಾತೆಯ 96 ಸಾವಿರ ಪಹಣಿಗಳು ಉಳಿದಿರುವುದು ಕಂಡು ಬಂದಿದೆ. ಕಂದಾಯ ಸಚಿವರ ಸೂಚನೆಯಂತೆ ಪೌತಿಖಾತೆ ಆಂದೋಲನ ಮಾಡುವ ಮೂಲಕ ವಾರಸುದಾರರಿಗೆ ಖಾತೆ ಮಾಡಿಕೊಡಲಾಗುತ್ತದೆ. ಜನರು ಈ ಆಂದೋಲನದ ಪ್ರಯೋಜನ ಪಡೆಯಬೇಕು” ಎಂದು ತಿಳಿಸಿದರು.

“ಕಂದಾಯ ಇಲಾಖೆಯ ಡಿಜಿಟಲೀಕರಣಗೊಳಿಸಿ ಕಡತಗಳನ್ನು ಇ-ಕಚೇರಿಯ ಮೂಲಕವೇ ನಿರ್ವಹಣೆ ಮಾಡಲಾಗುತ್ತಿದೆ. ಅಂಗನವಾಡಿಯಲ್ಲಿ ಖಾಲಿ ಇದ್ದು 50 ಕಾರ್ಯಕರ್ತೆಯರ ಮತ್ತು 282 ಸಹಾಯಕಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಯಲಿದೆ. ಯಾರು ಸಹ ಮಧ್ಯವರ್ತಿಗಳಿಗೆ ಹಣವನ್ನು ನೀಡಿ ಮೋಸ ಹೋಗಬಾರದು. ಅರ್ಜಿ ಹಾಕಿದವರಿಗೆ ಮಾತ್ರ ಅವರ ಅರ್ಜಿಯಲ್ಲಿ ಲೋಪದೋಷ ಸರಿಪಡಿಸಲು, ದಾಖಲೆಗಳನ್ನು ಅಪ್‍ಲೋಡ್ ಮಾಡಲು ಅವಕಾಶ ನೀಡಿ ಸಹಾಯ ನೀಡಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆನ್ಲೈನ್ ಗೇಮಿಂಗ್ ಗೆ ಯುವಕ ಬಲಿ; ಕ್ರಮಕ್ಕೆ ಡೆತ್ ನೋಟಿನಲ್ಲಿ ಸಿಎಂ, ಡಿಸಿಎಂ, ಸಂಸದೆ, ನ್ಯಾಯಾಧೀಶರಿಗೆ ಮನವಿ

“ಪರಿಸರ ಸಂರಕ್ಷಣೆ ಮಾಡಲು ದಾವಣಗೆರೆಯಲ್ಲಿ ಮಳೆಗಾಲ ಮುಗಿಯುವವರೆಗೆ ಪ್ರತಿ 15 ದಿನಗಳಿಗೊಮ್ಮೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ಸಸಿಗಳನ್ನು ಸಂರಕ್ಷಿಸುವ ಕೆಲಸ ಮಾಡಲಾಗುತ್ತದೆ. ಪ್ಲಾಸ್ಟಿಕ್ ಬಳಕೆಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಸಿಇಓ ಕಚೇರಿ ಸೇರಿದಂತೆ ಅನೇಕ ಕಡೆ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಅದೇ ರೀತಿ ಕಲ್ಯಾಣ ಮಂಟಪ, ಬಾರ್ ಅಂಡ್ ರೆಸ್ಟೋರೆಂಟ್, ವೈದ್ಯರ ಸಂಘ, ಬಟ್ಟೆ ಅಂಗಡಿ ಮಾಲೀಕರುಗಳ ಜೊತೆಗೆ ಸಭೆ ನಡೆಸಿ ಪ್ಲಾಸ್ಟಿಕ್ ಬಳಕೆಯನ್ನು ಗಣನೀಯವಾಗಿ ತಗ್ಗಿಸಲು ಮತ್ತು ವೈಜ್ಞಾನಿಕವಾಗಿ ವಿಲೇ ಮಾಡಲು ಚರ್ಚೆ ಮಾಡಲಾಗುತ್ತದೆ” ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ತಹಶೀಲ್ದಾರ್ ಡಾ; ಎಂ.ಬಿ.ಅಶ್ವಥ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X