ದಾವಣಗೆರೆ | ಪಂಜಾಬ್ ನಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ.

Date:

ಪಂಜಾಬ್ ರಾಜ್ಯದಲ್ಲಿ ರೈತರ ಮೇಲೆ ನಡೆಸಿದ ದಾಳಿಯು ಅಮಾನುಷವಾಗಿದ್ದು ಹಲ್ಲೆಯನ್ನು ಖಂಡಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ವಿವಿಧ ಸಂಘಟನೆಗಳ ರೈತ ಹೋರಾಟಗಾರರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹಲ್ಲೆ ನಡೆಸಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಪಂಜಾಬ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

- Advertisement -

ಇತ್ತೀಚಿಗೆ ಪಂಜಾಬ್ ರಾಜ್ಯದಲ್ಲಿ ರೈತರ ಮೇಲೆ ನಡೆದ ದಾಳಿಯು ಅಮಾನುಷವಾಗಿದೆ.‌ ಈ ನಿಟ್ಟಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮಾರ್ಚ್ 28 ರಂದು ಪ್ರತಿಭಟನಾ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.‌ ಅಂತಹ ದಾಳಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಖಂಡಿಸುತ್ತದೆ. ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಸರ್ಕಾರಗಳು ಅದನ್ನು ಗಮನಿಸುತ್ತಿಲ್ಲ. ರೈತ ಚಳುವಳಿ ಮತ್ತೊಮ್ಮೆ ಪುಟ್ಟಿದೇಳುವ ನಿಟ್ಟಿನಲ್ಲಿ ಹೊರಟಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1001749575
ಜಯದೇವ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟ

ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ಸುನಿತ್ ಕುಮಾರ್ “ಪಂಜಾಬ್ ನಲ್ಲಿ, ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಪಂಜಾಬ್ ಸರ್ಕಾರವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪೊಲೀಸರ ಮೂಲಕ ದಬ್ಬಾಳಿಕೆಯನ್ನು ನಡೆಸುತ್ತಿದೆ. ದೇಶದ ಸಂವಿಧಾನದ ಪ್ರಕಾರ, ದೇಶದ ನಾಗರಿಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಪ್ರತಿಭಟಿಸುವ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕನ್ನು ಹೊಂದಿದ್ದಾರೆ. ರೈತರಿಗೆ ಮಾರಕವಾದ ವಿದ್ಯುತ್ ಬಿಲ್ ತಂದಿದ್ದಾರೆ.‌ ಈಗಿರುವ ವಿದ್ಯುತ್ ಬಿಲ್ ಕಟ್ಟುವುದಕ್ಕೆಯೇ ರೈತರಿಗೆ ಸಾದ್ಯವಿಲ್ಲ. ರೈತರಿಗೆ ವಿದ್ಯುತ್ ಬಿಲ್ ಅಗತ್ಯವಿಲ್ಲ. ರೈತರನ್ನು ಶೋಷಿಸುವ ಗುತ್ತಿಗೆ ಆಧಾರಿತ ಕೃಷಿ ಬೇಡ. ಎಪಿಎಂಸಿ ಗಳಲ್ಲಿ ದಲ್ಲಾಳಿಗಳು, ಮಧ್ಯವರ್ತಿಗಳು ರೈತರನ್ನು ದೋಚುತ್ತಿದ್ದಾರೆ. ಅದನ್ನು ಸರಿಪಡಿಸಿ ಎಂದರೆ ಮತ್ತೆ ರೈತರ ಶೋಷಣೆಯ ಕೃಷಿ ಕಾಯ್ದೆ ತರುತ್ತಿದ್ದಾರೆ. ಇಂತಹ ಸರ್ಕಾರಗಳಿಂದ ರೈತರಿಗೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ರೈತ ಸಮುದಾಯ ಒಟ್ಟಾಗಿ ಬೀದಿಗಿಳಿಯುವುದು ಅನಿವಾರ್ಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಅರುಣ್ ಕುಮಾರ್ ಕುರುಡಿ ಮಾತನಾಡಿ, “ಮಾರ್ಚ್ 19 ರಂದು, ಕೇಂದ್ರ ಸರ್ಕಾರದ ಮಂತ್ರಿಗಳೊಂದಿಗೆ ಮಾತನಾಡಿ ಹಿಂತಿರುಗುತ್ತಿದ್ದ ರೈತ ನಾಯಕರನ್ನು ಬಂಧಿಸಲಾಗಿದೆ. ಶಂಭು ಮತ್ತು ಖಾನೌರಿಯಲ್ಲಿ ಡೇರೆಗಳು ಮತ್ತು ವಸ್ತುಗಳನ್ನು ಬುಲ್ಡೋಜರ್ ಮೂಲಕ ಧ್ವಂಸಗೊಳಿಸಿ ರೈತರ ಧರಣಿಯನ್ನು ಬಲವಂತವಾಗಿ ಹತ್ತಿಕ್ಕಲಾಯಿತು. ಟ್ರ್ಯಾಕ್ಟರ್ ಟ್ರಾಲಿಗಳು ಸೇರಿದಂತೆ ರೈತರ ಉಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ಮತ್ತು ರೈತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಈ ಮೂಲಕ ಪಂಜಾಬ್ ಸರ್ಕಾರ ರೈತರ ಮೇಲೆ ದೌರ್ಜನ್ಯವೆಸಗಿದೆ” ಎಂದು ಆಪಾದಿಸಿದರು.‌

1001749563
ಪಂಜಾಬನಲ್ಲರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಕಾರ್ಮಿಕ ಮುಖಂಡ ಮಂಜುನಾಥ ಕೈದಾಳ ಮಾತನಾಡಿ, “ಪಂಜಾಬ್‌ನಲ್ಲಿ ಪೊಲೀಸ್ ರಾಜ್ಯವನ್ನು ಸ್ಥಾಪಿಸುವ ಮೂಲಕ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ತುಳಿದು ಹಾಕಲಾಗುತ್ತಿದೆ. ಕರ್ನಲ್ ಪುಷ್ಪಿಂದರ್ ಸಿಂಗ್ ಬಾತ್ ವಿರುದ್ಧದ ಪೊಲೀಸ್ ದೌರ್ಜನ್ಯ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಸ್ಪಷ್ಟ ಸೂಚನೆಗಳ ಹೊರತಾಗಿಯೂ ಬುಲ್ಡೋಜರ್‌ಗಳಿಂದ ಜನರ ಮನೆಗಳನ್ನು ಕೆಡವಿದ್ದಾರೆ.‌ ಗೂಂಡಾಗಳ ರೀತಿ ರೈತರ ಮೇಲೆ ವರ್ತಿಸುತ್ತಿದ್ದಾರೆ. ಈ ಕೂಡಲೇ ರೈತರನ್ನು ಬಿಡುಗಡೆಗೊಳಿಸಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ವಿವಿಧ ಸಂಘಟನೆಗಳು, ಹಕ್ಕೊತ್ತಾಯಗಳ ಈಡೇರಿಕೆಗೆ ಕೇಂದ್ರ ಮತ್ತು ಪಂಜಾಬ್ ರಾಜ್ಯಪಾಲರನ್ನು ಒತ್ತಾಯಿಸಿದರು.‌

ಹಕ್ಕೊತ್ತಾಯಗಳು;

ರೈತರ ಮೇಲೆ ಪೊಲೀಸರು ಬಳಸುತ್ತಿರುವ ಕುರುಡು ಬಲವನ್ನು ನಿಲ್ಲಿಸಬೇಕು ಮತ್ತು ಪ್ರತಿಭಟಿಸುವ ಜನರ ಪ್ರಜಾಸತ್ತಾತ್ಮಕ ಹಕ್ಕನ್ನು ಪುನಃಸ್ಥಾಪಿಸಬೇಕು. ಬಂಧಿಸಲ್ಪಟ್ಟ ಅಥವಾ ಜೈಲಿನಲ್ಲಿರುವ ಎಲ್ಲಾ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು.ರೈತರ ಟ್ರ್ಯಾಕ್ಟರ್-ಟ್ರಾಲಿಗಳು ಸೇರಿದಂತೆ ಎಲ್ಲಾ ಉಪಕರಣಗಳನ್ನು ಹಿಂತಿರುಗಿಸಬೇಕು. ಹಾನಿಗೊಳಗಾದ ಅಥವಾ ಕದ್ದ ಸರಕುಗಳಿಗೆ ಪರಿಹಾರ ನೀಡಬೇಕು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ, ಕ್ರಮಕ್ಕೆ ಮಹಿಳಾ ಒಕ್ಕೂಟ ಆಗ್ರಹ.

  1. ಪ್ರತಿಭಟನೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡರಾದ ಹೊನ್ನೂರು ಮುನಿಯಪ್ಪ, ಮಧು ತೊಗಲೇರಿ, ಐರಣಿ ಚಂದ್ರು, ಸತೀಶ್ ಅರವಿಂದ್, ಆವರಗೆರೆ ಚಂದ್ರು , ಶ್ರೀನಿವಾಸ್ ಇ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...