ದಾವಣಗೆರೆ | ಆವರಗೆರೆ ವಸತಿರಹಿತರ ಪುನರ್ವಸತಿಗಾಗಿ ಸತ್ಯಾಗ್ರಹ: ದಸಂಸ ಸಂಚಾಲಕ ಮಲ್ಲೇಶ್

Date:

“ಆವರಗೆರೆ ವಸತಿ, ನಿವೇಶನ ರಹಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಅಂಬೇಡ್ಕರ್ ವಾದ)(ದಸಂಸ)ದಾವಣಗೆರೆ ಜಿಲ್ಲಾ ಸಮಿತಿ ಮತ್ತು ತಾಲ್ಲೂಕು ಸಮಿತಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ” ಎಂದು ಸಂಚಾಲಕ ಎಚ್ ಮಲ್ಲೇಶ್ ತಿಳಿಸಿದರು.

- Advertisement -

ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಾ. ಅಂಬೇಡ್ಕಾರ್ ವಾದ ದಾವಣಗೆರೆ ಜಿಲ್ಲಾ ಸಮಿತಿ ಮತ್ತು ತಾಲ್ಲೂಕು ಸಮಿತಿ ಅಡಿಯಲ್ಲಿ 2025, ಅಕ್ಟೋಬರ್ 9ರಂದು ಆವರಗೆರೆ ವಸತಿ, ನಿವೇಶನ ರಹಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಉಪವಿಭಾಗಾಧಿಕಾರಿ ಕಛೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು. ನಂತರ ಉಪ ವಿಭಾಗಾಧಿಕಾರಿಗಳಿಗೆ ಕೂಡಲೇ ವಸತಿ ಸೌಕರ್ಯ ಕಲ್ಪಿಸಲು ಮನವಿ ಪತ್ರ ಸಲ್ಲಿಸಲಾಗುವುದು‌” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ದಾವಣಗೆರೆ ಮಹಾನಗರ ಪಾಲಿಕೆಯ ದನವಿನ ಓಣಿ ಹತ್ತಿರ ಗೋಮಾಳದಲ್ಲಿ ಕಳೆದ 2022ರಲ್ಲಿ
ನೂರಾರು ಸಂಖ್ಯೆಯ ವಸತಿ ನಿವೇಶನ ರಹಿತರು ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿದ್ದರು.‌ ದಾವಣಗೆರೆ ಜಿಲ್ಲಾಡಳಿತದ ಮೌಖಿಕ ನಿರ್ದೇಶನದಂತೆ ರಾತ್ರಿಯ ಬೆಳಗಿನ ಜಾವದ 2:00 ಗಂಟೆ ಸಮಯದಲ್ಲಿ ನಿವಾಸಿಗಳಿಗೆ ಯಾವುದೇ ಮಾಹಿತಿ ಸೂಚನೆ ನೀಡದೇ ಏಕಾಏಕಿ ಮಹಾನಗರ ಪಾಲಿಕೆ ಮತ್ತು ತಾಲ್ಲೂಕು ತಹಶೀಲ್ದಾರರು ಪೊಲೀಸ್ ಬಲದೊಂದಿಗೆ ಜೆ.ಸಿ.ಬಿ. ಯಂತ್ರಗಳ ಸಹಾಯದಿಂದ ವಸತಿ ಗುಡಿಸಲು ಧ್ವಂಸ ಕಾರ್ಯಚರಣೆ ನಡೆಸಿ ಅಮಾಯಕ ಕುಟುಂಬಗಳನ್ನು ಬೀದಿ ಪಾಲುಮಾಡಿ ದೌರ್ಜನ್ಯ ಮೆರೆದಿದ್ದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇಂತಹ ಆಕಸ್ಮಿಕ ಘಟನೆಯಿಂದ ವಿಚಲಿತಗೊಂಡ ನಿವಾಸಿಗಳ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು ಎಂದು ಆರೋಪಿಸಿ ಬಂಧನಕ್ಕೆ ಒಳಪಡಿಸಿದ್ದರು. ಇಂತಹ ಅಕ್ರಮ, ದೌರ್ಜನ್ಯದಿಂದ ಕುಟುಂಬಗಳು ಅಲ್ಲಲ್ಲಿ ಅನುಕೂಲ ಸ್ಥಳದಲ್ಲಿ ವಾಸವಾಗಿದ್ದ ಆವರಗೆರೆ ದನವಿನ ಓಣಿಯಲ್ಲಿ ನಿವಾಸಿಗಳನ್ನು ಪುನಃ ಒಕ್ಕಲೆಬ್ಬಿಸುವ ಹುನ್ನಾರ ಮುಂದುವರೆದಿರುತ್ತದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 9ರಂದು ಧರಣಿ ಸತ್ಯಾಗ್ರಹ ನಡೆಸಲಾಗುವುದು. ಈ ವೇಳೆ ತಾಲ್ಲೂಕು ಸಂಚಾಲಕರು, ಜಿಲ್ಲಾ ಸಂಘಟನಾ ಸಂಚಾಲಕರು, ತಾಲ್ಲೂಕು ಸಂಘಟನಾ ಸಂಚಾಲಕರು ಸೇರಿದಂತೆ ಕಾರ್ಯಕರ್ತರು ಹಾಜರಿರುವರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹರ್ಷಿ ವಾಲ್ಮೀಕಿ ಜಯಂತೋತ್ಸವ: ಐತಿಹಾಸಿಕ ಬೈಕ್‌ ರ‍್ಯಾಲಿ 

ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಸಂಚಾಲಕ ಆವರಗೆರೆ
ಚಂದ್ರಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ಜಿ.ಎಸ್. ಲೋಕೇಶ ಹಾಲೇಕಲ್ಲು, ಮುಖಂಡರಾದ ಸಮಾದಪ್ಪ, ಎಲ್. ಶಿವು, ಯು ಮಹಾಂತೇಶ, ಚನ್ನಬಸಪ್ಪ, ಶಿವಾನಂದ, ಗಿರೀಶ ಆರ್, ತಾಲ್ಲೂಕು ಸಂಘಟನಾ ಸಂಚಾಲಕರಾದ ಎಸ್. ಶಿವು, ಪ್ರವೀಣ ಎಸ್. ಉಪಸ್ಥಿತರಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...