ದಾವಣಗೆರೆ | ಪ್ರಜಾಪ್ರಭುತ್ವ ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

Date:

ದಾವಣಗೆರೆಯಲ್ಲಿ ಪ್ರಜಾಪ್ರಭುತ್ವ ಮತ್ತು ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವನ್ನು ನ್ಯಾ. ಶಿವರಾಜ ವಿ. ಪಾಟೀಲ ಪ್ರತಿಷ್ಠಾನ,ರಾಯಚೂರು, ಬೆಂಗಳೂರಿನ ರಾಜ್ಯ ಬಾಲಭವನ ಸೊಸೈಟಿ, ದಾವಣಗೆರೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಬಾಲಭವನ ಸಮಿತಿ, ಧರ್ಮ ಪ್ರಕಾಶ ರಾಜನಹಳ್ಳಿ ರಾಮಶೆಟ್ಟಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ದಾವಣಗೆರೆ ಪಿ.ಬಿ. ರಸ್ತೆಯಲ್ಲಿರುವ ಡಿ.ಆರ್.ಆರ್. ಶಾಲೆಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

- Advertisement -
1003587395

ದಾವಣಗೆರೆ ಜಿಲ್ಲಾ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಎಲ್.ಹೆಚ್. ಅರುಣ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಭಾರತವು ಸಂವಿಧಾನ ಅಂಗೀಕರಿಸಿದ ಗಣರಾಜ್ಯವಾಗಿದೆ. ಎಲ್ಲಾ ಸ್ವತಂತ್ರ ರಾಷ್ಟ್ರಗಳು ಗಣರಾಜ್ಯಗಳಲ್ಲ, ಆದರೆ ಎಲ್ಲಾ ಗಣರಾಜ್ಯಗಳು ಸ್ವತಂತ್ರ ದೇಶಗಳಾಗಿವೆ” ಎಂದು ಅಭಿಪ್ರಾಯಪಟ್ಟರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಭಾರತವನ್ನು ವಸಾಹತುಶಾಹಿ ರಾಜಪ್ರಭುತ್ವ ವಂಶಪಾರಂಪರ್ಯ ಆಡಳಿತದಿಂದ ಮುಕ್ತಗೊಳಿಸಿ ಸ್ವಾತಂತ್ರ್ಯ ಪಡೆದು ಪ್ರಜಾಪ್ರಭುತ್ವದಲ್ಲಿ ಮುನ್ನಡೆದಿದ್ದೇವೆ. ಸಂವಿಧಾನದ ಅಡಿಯಲ್ಲಿ ಆರ್ಥಿಕ ಸ್ವಾತಂತ್ರ್ಯ, ಸಾಮಾಜಿಕ ಸ್ವಾತಂತ್ರ್ಯ, ರಾಜಕೀಯ ಸ್ವಾತಂತ್ರ್ಯಗಳನ್ನು ಹೊಂದಿದ್ದರೂ ಕಳೆದ 77 ವರ್ಷಗಳಲ್ಲಿ ರಾಜಕೀಯ ಸ್ವಾತಂತ್ರ್ಯವನ್ನು ಪಡೆಯುವಲ್ಲಿ ಮಾತ್ರ ನಾವು ಸಫಲರಾಗಿದ್ದು, ಇನ್ನೂ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳು ಮುಂದುವರೆದಿವೆ” ಎಂದು ವಿಷಾದಿಸಿದರು.

1003587392

“ಸಂವಿಧಾನದ ಆಶಯಗಳೇ ಪ್ರಜಾಪ್ರಭುತ್ವದ ಮಾನದಂಡಗಳಾಗಿದ್ದು, ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಪ್ರಜಾಪ್ರಭುತ್ವದ ಮೌಲ್ಯ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳು ಸಫಲಗೊಳ್ಳಲು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳು ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಬೇಕಾಗಿದೆ. ಭಾರತವು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಿದೆ. ಶಿಕ್ಷಣದ ಹಕ್ಕಿನ ಜೊತೆಗೆ ಉದ್ಯೋಗದ ಹಕ್ಕು ಮತ್ತು ವಸತಿ ಹಕ್ಕು ಮೂಲಭೂತ ಹಕ್ಕುಗಳಾಗಬೇಕಿದೆ” ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಭಿಕುಮಾ‌ರ್ ಜಿಎಸ್. ಮಾತನಾಡಿ, “ಮಕ್ಕಳಲ್ಲಿರುವ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸುವ ಬಾಲಭವನವು ಹಮ್ಮಿಕೊಂಡಿರುವ ಕಲಾಪ್ರತಿಭೆ ಕಾರ್ಯಕ್ರಮ ಯಶಸ್ವಿಯಾಗಿದ್ದು, ಮುಂದಿನ ಪ್ರಜೆಗಳಾದ ಮಕ್ಕಳು ರೂಪುಗೊಳ್ಳಲು ಮಕ್ಕಳ ಹಕ್ಕುಗಳು ನಿರಂತರವಾಗಿ ಜಾರಿಗೊಳ್ಳಬೇಕಾಗಿದೆ” ಎಂದು ತಿಳಿಸಿದರು.

1003587394

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯದರ್ಶಿ ಎಂ. ಗುರುಸಿದ್ದ ಸ್ವಾಮಿ, “ವಿಜ್ಞಾನ ಪರಿಷತ್ತು ಜಿಲ್ಲಾ ಬಾಲಭವನ ಸಮಿತಿ ಮಕ್ಕಳಲ್ಲಿ ವೈಜ್ಞಾನಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ” ಎಂದು ತಿಳಿಸಿದರು.

ಡಿ.ಆರ್.ಆರ್.ಶಾಲೆಗಳ ಆಡಳಿತಾಧಿಕಾರಿ ಎಂ. ಬಸವರಾಜಪ್ಪ, ಜಿಲ್ಲಾ ಬಾಲಭವನ ಸಮಿತಿಯ ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಎಸ್.ಬಿ. ಶಿಲ್ಪಾ, ಡಿಸಿಎಂ ಶಾಲೆಗಳ ಮುಖ್ಯೋಪಾಧ್ಯಾಯರಾದ ಆರ್. ಭೋಜರಾಜ ಯಾದವ್‌, ಡಿಆರ್‌ಆರ್ ಪ್ರೌಢಶಾಲೆಯ ಕನ್ನಡ ಮಾಧ್ಯಮದ ಮುಖ್ಯೋಪಾಧ್ಯಾಯ ಹೆಚ್.ಎಸ್. ಹಾಲೇಶ್, ಡಿಆರ್‌ಆರ್ ಪ್ರೌಢಶಾಲೆಯ ಆಂಗ್ಲಮಾಧ್ಯಮದ ಮುಖ್ಯೋಪಾಧ್ಯಾಯ ಎ.ಎಂ. ಬಸವನಗೌಡ, ಡಿಆರ್‌ಆರ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಮತಿ ಕೆ.ಎಲ್. ರಾಧ ವೇದಿಕೆಯಲ್ಲಿ ಉಪಸ್ಥಿತರಿದ್ದರು.

1003587395 1

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಉಪಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಸಿಗುವುದೇ ರಾಜಕೀಯ, ಸಾಮಾಜಿಕ ನ್ಯಾಯ?

ಕಲಾ ಪ್ರತಿಭೆ ಕಾರ್ಯಕ್ರಮದಲ್ಲಿ ಡಿ.ಆರ್‌.ಆರ್ ಶಾಲೆಯ 7ನೇ ತರಗತಿಯ ಮಕ್ಕಳು ಸಂವಿಧಾನ ಪೀಠಿಕೆಯ ನೃತ್ಯ ಸಂಯೋಜನೆ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಮತ್ತು ಭಾಗವಹಿಸಿದ ಮಕ್ಕಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ...