ದಾವಣಗೆರೆ | ತರಳಬಾಳು ಬಡಾವಣೆಯಲ್ಲಿ ಶಿವಸಂಚಾರ-25 ನಾಟಕೋತ್ಸವ ಪ್ರದರ್ಶನ

Date:

ಸಾಣೇಹಳ್ಳಿಯ ಶಿವಕುಮಾರ ಕಲಾ ಸಂಘ ಹಾಗೂ ತರಳಬಾಳು ಸೇವಾ ಟ್ರಸ್ಟ್ ಸಹಯೋಗದೊಂದಿಗೆ ‘ಶಿವಸಂಚಾರ-25 ನಾಟಕೋತ್ಸವ, ಶಿವಸಂಚಾರ ನಾಟಕಗಳ ಪ್ರದರ್ಶನವನ್ನು ದಾವಣಗೆರೆ ನಗರದ ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಫೆ. 27 ಶುಕ್ರವಾರದಿಂದ ಮಾರ್ಚ್ 1ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

- Advertisement -

ತರಳಬಾಳು ಬಡಾವಣೆಯ ಶ್ರೀ ಶಿವಕುಮಾರ ಸ್ವಾಮಿ ಮಹಾಮಂಟಪದಲ್ಲಿ ಫೆ. 27ರ ಶುಕ್ರವಾರ ಸಂಜೆ 6 ಗಂಟೆಗೆ ಸಿರಿಗೆರೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಹೆಚ್.ವಿ. ವಾಮದೇವಪ್ಪ ಶಿವಸಂಚಾರ ನಾಟಕೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಾವಣಗೆರೆ ತರಳಬಾಳು ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಬಿ. ಸಂಗಮೇಶ್ವರ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಾವಣಗೆರೆ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಹಾಗೂ ತರಳಬಾಳು ಸೇವಾ ಟ್ರಸ್ಟ್ ನಿರ್ದೇಶಕ ಶಿವನಳ್ಳಿ ರಮೇಶ್ ಭಾಗವಹಿಸಲಿದ್ದಾರೆ.

ಮಾರ್ಚ್ 1ರ ಭಾನುವಾರ ಸಂಜೆ 6 ಗಂಟೆಗೆ ಸಮಾರೋಪ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮಂಜುನಾಥ ಕುರ್ಕಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಟ್ರಸ್ಟ್ ನಿರ್ದೇಶಕ ಗಡಿಗುಡಾಳ್ ಮಂಜುನಾಥ್ ಉಪಸ್ಥಿತರಿರಲಿದ್ದಾರೆ.

ಶಿವಸಂಚಾರದ ಕಲಾವಿದರಿಂದ 2026, ಶುಕ್ರವಾರ ಫೆ. 27 ಸಂಜೆ 6-30ಕ್ಕೆ ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ರಚಸಿರುವ ಜಗದೀಶ್ ನಿರ್ದೇಶನದ “ಜಂಗಮದೆಡೆಗೆ” ಪ್ರದರ್ಶನಗೊಳ್ಳಲಿದೆ. ಫೆ. 28 ಸಂಜೆ 6-30ಕ್ಕೆ ಕೃಷ್ಣಮೂರ್ತಿ ಮೂಡಬಾಗಿಲು ರಚನೆ ನಿರ್ದೇಶನದ “ಕಳ್ಳರ ಸಂತೆ”, ಮಾರ್ಚ್ 1ರ ಸಂಜೆ 6-30ಕ್ಕೆ
ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ ವಿರಚಿತ ವೈಡಿ ಬದಾಮಿ ನಿರ್ದೇಶನದ “ಶಿವಯೋಗಿ ಶ್ರೀ ಸಿದ್ದರಾಮೇಶ್ವರ” ನಾಟಕ ಪ್ರದರ್ಶನಗೊಳ್ಳಲಿವೆ.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಕೇಂದ್ರ ಸಚಿವ ವಿ. ಸೋಮಣ್ಣರಿಂದ ತುಮಕೂರು ಹೊಸ ರೈಲ್ವೆ ಮಾರ್ಗ ಪರಿಶೀಲನೆ

ಸಾಂಸ್ಕೃತಿಕ ಹಬ್ಬದಲ್ಲಿ ಬಸವಪರ ಭಕ್ತರು, ಅನುಯಾಯಿಗಳು ಭಾಗಿಯಾಗಿ ಯಶಸ್ವಿಗೊಳಿಸಬೇಕೆಂದು ಸಂಘಟಕರಾದ ಶಿರಗುಂಬಿ, ಅವರಗೆರೆ ರುದ್ರಮುನಿ, ಕೆ.ನಾಗಪ್ಪ ಮತ್ತು ಮಂಜುನಾಥ ಕುರ್ಕಿ ಕೋರಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...