ದಾವಣಗೆರೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿಪಿಐ) ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಉಂಟಾದ ಬೆಂಕಿಗೆ ಕಛೇರಿಯ ಕಡತ ಹಾಗೂ ಕಂಪ್ಯೂಟರ್ ಭಸ್ಮವಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ವಿದ್ಯುತ್ ತಂತಿಯ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕಟ್ಟಡದ ಷಟರ್ಸ್ ಮೂಲಕ ಹೊರಬರುತ್ತಿದ್ದ ಹೊಗೆಯನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬಾಗಿಲು ಮುರಿದು ಬೆಂಕಿ ನಂದಿಸಿದ್ದಾರೆ.

“ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಉಂಟಾಗಿ ಕಚೇರಿಗೆ ಹಾನಿಯಾಗಿದೆ. ಕಡತ, ಕಂಪ್ಯೂಟರ್ ಹಾಗೂ ಪ್ರಿಂಟರ್ ಬೆಂಕಿಗಾಹುತಿಯಾಗಿವೆ. ನಷ್ಟದ ಪ್ರಮಾಣ ಇನ್ನಷ್ಟೇ ತಿಳಿಯಬೇಕಿದೆ” ಎಂದು ಡಿಡಿಪಿಪಿ ಜಿ.ಕೊಟ್ರೇಶ್ ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಆಸ್ತಿ ಗಳಿಕೆ ಆರೋಪ, ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ.
ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾ ಅಧಿಕಾರಿ ಪ್ರೇಮಾನಂದ ಶೇಟ್, ಸಿಬ್ಬಂದಿಗಳಾದ ಮಹಾಲಿಂಗ ಪಾಟೀಲ, ನಾಗರಾಜ್ ಟಿ.ಸಿ, ಮುನಿಸ್ವಾಮಿ ನಾಯಕ, ಸತೀಶ್ ಪಾಲ್ಗೊಂಡಿದ್ದರು.