ದಾವಣಗೆರೆ | ಎಸ್ಐಆರ್ ಕರ್ತವ್ಯ, ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಗೌರವಧನಕ್ಕೆ ಆಗ್ರಹ

Date:

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಅಂಗವಾಗಿ ಬಿಎಲ್‌ಒ (BLO)ಗಳಿಗೆ ಸಹಾಯಕರಾಗಿ ಹೆಚ್ಚುವರಿ ಸಿಬ್ಬಂದಿಯನ್ನಾಗಿ ನಿಯೋಜಿಸಲಾಗಿರುವ ಆಶಾ ಕಾರ್ಯಕರ್ತೆಯರಿಗೆ ₹5 ಸಾವಿರ ಗೌರವಧನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ರಿ), ಎಐಯುಟಿಯುಸಿ ಸಂಯೋಜಿತ ದಾವಣಗೆರೆ ಜಿಲ್ಲಾ ಸಮಿತಿ ಒತ್ತಾಯಿಸಿದೆ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

- Advertisement -

ಈ ವೇಳೆ ಮಾತನಾಡಿದ ಮುಖಂಡರು “ಬಿಎಲ್‌ಒಗಳಿಗೆ ಸಹಾಯಕರಾಗಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ನೀಡಬೇಕಾದ ಗೌರವಧನದ ಬಗ್ಗೆ ಸರ್ಕಾರದ ಅಧಿಕೃತ ಆದೇಶದಲ್ಲಿ ಯಾವುದೇ ಸ್ಪಷ್ಟ ಉಲ್ಲೇಖ ಇಲ್ಲ. ಈಗಾಗಲೇ ಅಲ್ಪ ಗೌರವಧನಕ್ಕೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಚುನಾವಣಾ ಎಸ್ಐಆರ್ ಕುರಿತ ಕರ್ತವ್ಯಕ್ಕಾಗಿ ಪ್ರತ್ಯೇಕವಾಗಿ ₹5 ಸಾವಿರ ಗೌರವಧನ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಆಶಾ ಕಾರ್ಯಕರ್ತೆಯರು ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳ ಆರೈಕೆ, ಲಸಿಕೀಕರಣ ಹಾಗೂ ವಿವಿಧ ಸರ್ಕಾರಿ ಆರೋಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುವ ಚುನಾವಣಾ ಕರ್ತವ್ಯ ನೀಡುವುದರಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಾರ್ವಜನಿಕ ಆರೋಗ್ಯ ಸೇವೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಸಂಘ ತಿಳಿಸಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಆದ್ದರಿಂದ ಆಶಾ ಕಾರ್ಯಕರ್ತೆಯರು ಚುನಾವಣಾ ಕರ್ತವ್ಯ ನಿರ್ವಹಿಸಲು ಅಗತ್ಯ ಸಮಯಾವಕಾಶ ಕಲ್ಪಿಸುವಂತೆ ಹಾಗೂ ಆರೋಗ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾ ಆರೋಗ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವಜನರಿಗಾಗಿ ನಾಯಕತ್ವ ಮತ್ತು ಸಾಮಾಜಿಕ ನ್ಯಾಯ ಕುರಿತ ಕಾರ್ಯಾಗಾರ

ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಐಯುಟಿಯುಸಿ (AIUTUC) ಜಿಲ್ಲಾ ಕಾರ್ಯದರ್ಶಿ ತಿಪ್ಪೇಸ್ವಾಮಿ ಅಣಬೇರು, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ ಲಲಿತಮ್ಮ ಹಾಗೂ ಮುಖಂಡರಾದ ರೀತಾ, ಇಂದಿರಾ, ಲೀಲಾವತಿ, ನೇತ್ರಾವತಿ, ಕೌಸಲ್ಯಾ, ರಾಧಾ, ಗೀತಾ, ಜ್ಯೋತಿ ಸೇರಿದಂತೆ ಹಲವು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...