ದಾವಣಗೆರೆ | ಭೂಸ್ವಾಧೀನ ರದ್ದು, ದೇವನಹಳ್ಳಿ ರೈತರು, ಸರ್ಕಾರಕ್ಕೆ ಎಸ್ ಕೆ ಎಂ ಮತ್ತು ಜೆಸಿಟಿಯು ಅಭಿನಂದನೆ

Date:

ನರಗುಂದ, ನವಲಗುಂದ ಹೋರಾಟದ ರೈತ ಹುತಾತ್ಮರ ಸ್ಮರಣೆ ಮತ್ತು ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ವಿಜಯೋತ್ಸವವನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ರೈತ ಸಂಘಟನೆಗಳ ಸಂಯುಕ್ತ ಹೋರಾಟ ಸಮಿತಿ (ಎಸ್ ಕೆ ಎಂ) ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಆಚರಣೆ ಮಾಡಲಾಯಿತು.

- Advertisement -
1002358705

ನರಗುಂದ, ನವಲಗುಂದ ರೈತ ಹೋರಾಟದಲ್ಲಿ ಹುತಾತ್ಮರಾದ ರೈತರ ಸ್ಮರಣೆ ಮಾಡಿ, ಕಳೆದ ಮೂರು ವರ್ಷಗಳಿಂದ ರೈತರು ತಮ್ಮ ಜಮೀನುಗಳನ್ನು ಕೊಡುವುದಿಲ್ಲ ಎಂದು ಹೋರಾಟ ಮಾಡಿದ ಬೆಂಗಳೂರು ಜಿಲ್ಲೆಯ ದೇವನಹಳ್ಳಿ ರೈತರ ಜಮೀನುಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಪಂದಿಸಿ ವಶಪಡಿಸಿಕೊಳ್ಳುವುದನ್ನು ಕೈಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಬಹಿರಂಗ ಸಭೆಯಲ್ಲಿ ಮುಖಂಡರು ಅಭಿನಂದನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ವೇಳೆ ಮಾತನಾಡಿದ ಮುಖಂಡರು, “ಸುಮಾರು ಮೂರುವರೆ ವರ್ಷಗಳ ನಿರಂತರ ಹೋರಾಟದಿಂದ ದೇವನಹಳ್ಳಿ ರೈತರು ತಮ್ಮ ಭೂಮಿ ಜಮೀನುಗಳನ್ನು ಉಳಿಸಿಕೊಂಡಿದ್ದಾರೆ. ನಿರಂತರ ಹೋರಾಟ ನೆಡೆಸುವುದು ಸಾಮಾನ್ಯವಲ್ಲ. ಮಳೆ, ಬಿಸಿಲು ಗಾಳಿಗೆ ಹೆದರದೆ ನಿರಂತರ ಹೋರಾಟಕ್ಕೆ 1777 ಎಕರೆ ಭೂಸ್ವಾಧೀನ ಕೈಬಿಟ್ಟು ಅಭಿನಂದನೆಗೆ ಅರ್ಹವಾಗಿದೆ. ಈ ಕಾರಣದಿಂದ ದೇವನಹಳ್ಳಿ ರೈತರು ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ” ಎಂದು ತಿಳಿಸಿದರು.

1002358703

ಎಸ್ ಕೆ ಎಂ ಸಂಚಾಲಕ ಹೆಚ್ ಜಿ ಉಮೇಶ್, ಆನಂದ ರಾಜ್, ಬುಳ್ಳಾಪುರದ ಹನುಮಂತಪ್ಪ, ಆವರೆಗೆರೆ ಚಂದ್ರು, ಈ ಶ್ರೀನಿವಾಸ್, ಸತೀಶ್ ಅರವಿಂದ್, ಜಬೀನ ಖಾನಂ ರವರು ಅಭಿನಂದನೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರತ್ಯೇಕ ಲಿಂಗಾಯತ ಧರ್ಮ ಬೆಂಬಲಿಸಿ, ಅವರ ಮೇಲೆಯೇ ಈ ಸರ್ಕಾರ ಲಾಠಿ ಪ್ರಹಾರ ನೆಡೆಸಿದೆ;ರಂಭಾಪುರಿ ಶ್ರೀ

ವಿಜಯೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಸಂಘಟನೆಗಳ ಮುಖಂಡರುಗಳಾದ ಜಿ ಯಲ್ಲಪ್ಪ, ಭರಮಪ್ಪ, ಶ್ರೀನಿವಾಸಮೂರ್ತಿ, ಸರೋಜ, ನರೇಗಾ ರಂಗನಾಥ್, ಸಿ ರಮೇಶ್ ದಾಸರ, ಶಿರಿನ್, ಕೆರನಹಳ್ಳಿ ರಾಜು, ಮೊದಲ ಹದಡಿ ಸುರೇಶ್, ನಾಗಮ್ಮ, ಮಲ್ಲಶೆಟ್ಟಿಹಳ್ಳಿ ಹನುಮೇಶ್, ಪವಿತ್ರ, ಚಿಕ್ಕನಹಳ್ಳಿ ಸದಾನಂದ ಸೇರಿದಂತೆ ರೈತ ಮುಖಂಡರುಗಳು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...