ದಾವಣಗೆರೆ | ಸ್ಮಶಾನ, ಕೆರೆ, ಗೋಮಾಳದಲ್ಲಿ ಅಕ್ರಮ ಮಣ್ಣು ಸಾಗಾಟ; ಕ್ರಮಕ್ಕೆ ದಸಂಸ ಆಗ್ರಹ.‌

Date:

ಕಬ್ಬೂರು ಗ್ರಾಮದ ಸ್ಮಶಾನದ ವಿರೂಪ, ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರ ನಾಶ ಮಾಡಿರುವವರ ಹಾಗೂ ಕೆರೆ ಮತ್ತು ಗೋಮಾಳವನ್ನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರೊ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ದಾವಣಗೆರೆ ತಾಲೂಕಿನ ಕಬ್ಬೂರಿನ ಗ್ರಾಮಸ್ಥರು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -
1001631670

ಕಬ್ಬೂರು ಗ್ರಾಮದಲ್ಲಿ ಸರ್ವೆ ನಂ.31-32ರಲ್ಲಿ ಸರ್ಕಾರಿ ಗೋಮಾಳದಲ್ಲಿ ಸರಿ ಸುಮಾರು 25-30 ವರ್ಷಗಳಿಂದ ಆದಿಕರ್ನಾಟಕ (ಎಸ್.ಸಿ), ನಾಯಕ ಜನಾಂಗ, ಮಡಿವಾಳ, ಗೊಲ್ಲ, ಭೋವಿ ಇತರೆ ಜನಾಂಗದ ನಮ್ಮ ಪೂರ್ವಜರ ಅಂತ್ಯ ಸಂಸ್ಕಾರ ಮಾಡಿಕೊಂಡು ಬಂದಿದ್ದೇವೆ. ನಮ್ಮ ಗ್ರಾಮಕ್ಕೆ ಸೇರಿದ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಒತ್ತುವರಿದಾರರು ಆ ಜಾಗದಲ್ಲಿ ಅಡಿಕೆ, ತೆಂಗು ಹಾಗೂ ಇತರೆ ಬೆಳೆಗಳ ತೋಟಗಳನ್ನಾಗಿ ಪರಿವರ್ತಿಸಿಕೊಂಡು ಒತ್ತುವರಿ ಮಾಡಿದ್ದು ಮತ್ತು ನಮ್ಮ ಗ್ರಾಮಕ್ಕೆ ಸೇರಿದ ಸರ್ಕಾರಿ ಗೋಮಾಳದಲ್ಲಿ ಕೆಲ ಮಣ್ಣು ಮಾಫಿಯ ದಂಧೆಕೋರರು ಕೆಲವಾರು ವರ್ಷಗಳಿಂದ ಜಾನುವಾರುಗಳಿಗೆ ಪಶು ಪಕ್ಷಿಗಳಿಗೆ, ಕುರಿ-ಮೇಕೆಗಳ ಮೇವಿಗೆ ಆಶ್ರಯವಾದ ಗೋಮಾಳದಲ್ಲಿ 8-10 ಅಡಿ ಆಳದವರೆಗೆ ಜೆ.ಸಿ.ಬಿ ಮತ್ತು ಟ್ರಾಕ್ಟರ್‌ನಿಂದ ಮಣ್ಣನ್ನು ಅಗೆದು ಸಾಗಾಟ ಮಾಡಿ ಮಾರಾಟ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜನವರಿ 10ರ ತಡರಾತ್ರಿಯಲ್ಲಿ ನಮ್ಮ ಪೂರ್ವಜರ ಸಮಾಧಿಗಳನ್ನು ಸಹ ನಾಶ ಮಾಡಿ ಅಲ್ಲಿನ ಅಸ್ಥಿಪಂಜರಗಳನ್ನು ಯಾವುದೇ ಕುರುಹುಗಳು ಸಿಗದಂತೆ ಮಾಡಿ ಅಲ್ಲಿನ ಮಣ್ಣನ್ನು ಸಾಗಾಟ ಮಾಡಿದ್ದಾರೆ. ಮರುದಿನ ಜನವರಿ 11ರ ಶನಿವಾರ ಬೆಳಿಗ್ಗೆ 9.00ಗಂಟೆಗೆ ಜೆ.ಸಿ.ಬಿ. ಮತ್ತು ಟ್ರಾಕ್ಟರ್‌ಗಳ ಮಾಲೀಕರನ್ನು ಕೇಳಿದಾಗ ನಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಂದೇ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡಿಲ್ಲ.

ಆದ್ದರಿಂದ ಈ ಕೂಡಲೇ ಸ್ಮಶಾನದಲ್ಲಿ, ಗೋಮಾಳ, ಕೆರೆಗಳಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಮಾಡಿರುವವರ ವಿರುದ್ಧ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಛೇರಿ ಎದುರು ಧರಣಿ ನಡೆಸಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮದುವೆ ಸಂಭ್ರಮ; ಹತ್ತಕ್ಕೂ ಹೆಚ್ಚು ಮನೆಗಳ ಸರಣಿ ಕಳ್ಳತನ

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಮಂಜು ಕಬ್ಬೂರು, ಗ್ರಾಮಸ್ಥರಾದ ಕುಮಾರಪ್ಪ, ಮಲ್ಲಿಕಾರ್ಜುನ, ಶೇಖರಪ್ಪ, ಎಂ ರಾಮಚಂದ್ರಪ್ಪ, ಸಂದೀಪ್, ವಿಜಯಲಕ್ಷ್ಮಿ,‌ ಎನ್ಎಂ ಕೋಟಿ, ಅಂಜನಪ್ಪ, ಗೋವಿಂದಪ್ಪ, ಬಸವರಾಜಪ್ಪ, ಮಂಜಪ್ಪ, ಮಹೇಶ್, ಯಲ್ಲೇಶ, ಮಂಜುನಾಥ‌ ಸೇರಿದಂತೆ ಕಬ್ಬೂರಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...