ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಅಭ್ಯರ್ಥಿ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.‌ ಉಪಚುನಾವಣೆಯಲ್ಲಿ ಎಸ್ ಡಿ ಪಿ ಐ ಅಭ್ಯರ್ಥಿ ಕಣಕ್ಕೆ ಇಳಿಯುವುದರೊಂದಿಗೆ ಒಟ್ಟು 14 ಅಲ್ಪಸಂಖ್ಯಾತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಕುತೂಹಲ ಕೆರಳಿಸಿದೆ.

- Advertisement -
1003953811

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಖ್ತರ್ ರಝಾ ಸರ್ಕಲ್‌ನಿಂದ ಎಸ್ ಟಿ ಪಿ ಐ ಕಾರ್ಯಕರ್ತರು ಮತ್ತು ಮುಖಂಡರು ಮೆರವಣಿಗೆ ಪ್ರಾರಂಭಿಸಿ ಪ್ರಮುಖ ಬೀದಿಗಳಲ್ಲಿ ಹಾದು ಮಹಾನಗರ ಪಾಲಿಕೆ ಆವರಣದ ಚುನಾವಣಾ ಕಚೇರಿಗೆ ತಲುಪಿ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ನಾಮಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಭಾಗವಹಿಸಿದ್ದರು. ಈ ವೇಳೆ “ಸ್ವಾಭಿಮಾನದ ರಾಜಕೀಯಕ್ಕಾಗಿ ಒಂದಾಗೋಣ”, ಭಯ ಮುಕ್ತ ಸಮಾಜ ನಿರ್ಮಿಸೋಣ, ಕುಟುಂಬ ರಾಜಕಾರಣಕ್ಕೆ ತಿಲಾಂಜಲಿ ಹಾಡೋಣ” ಎಂಬ ಘೋಷಣೆಗಳು ಮೊಳಗಿದವು.

1003953818
ನಾಮಪತ್ರ ಸಲ್ಲಿಕೆ ವೇಳೆ ಬೈಕ್ ರ್ಯಾಲಿ

ದಾವಣಗೆರೆ ಉಪಚುನಾವಣೆಗೆ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಮುಸ್ಲಿಂ ಸಮುದಾಯ ತಮ್ಮ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ಗೆ ಬೇಡಿಕೆ ಇಟ್ಟಿದ್ದರು. ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೇರಿದಂತೆ ವಿವಿಧ ಅಲ್ಪಸಂಖ್ಯಾತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

ಮೆರವಣಿಗೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ತಾಹೀರ್, ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಅಬ್ದುಲ್ ಹನ್ನನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಹಾಗೂ ರಾಜ್ಯ ಸಮಿತಿ ಸದಸ್ಯ ಫಯಾಜ್ ಅಹಮದ್ ಮತ್ತು ಅಬ್ರಾರ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...