ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದ ಮೂರು ಬೂತ್ ಗಳ ಎಣಿಕೆ ಬಾಕಿ ಇದ್ದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ 5027 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ತಿ. ದಾಸಕರಿಯಪ್ಪ ವಿರುದ್ಧ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದ್ದಾರೆ.
19ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 5224 ಮುನ್ನಡೆ ಕಾಯ್ದುಕೊಂಡಿದ್ದರು. ಕಾಂಗ್ರೆಸ್ 64039, ಬಿಜೆಪಿ 58215, ಎಸ್ ಡಿ ಪಿ ಐ 18440 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ ಅಭ್ಯರ್ಥಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. 20ನೇ ಸುತ್ತಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 4900 ಮತ ಮುನ್ನಡೆ ಕಾಯ್ದುಕೊಂಡಿದ್ದಾರೆ.





