ದಾವಣಗೆರೆ ವಿಶ್ವವಿದ್ಯಾನಿಲಯ, ಮಾನವ ಹಕ್ಕುಗಳ ವೇದಿಕೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ದಾವಣಗೆರೆ ಜಿಲ್ಲಾ ಘಟಕದ ಸಹಯೋಗದಲ್ಲಿ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಅಯೋಗದ ಅಧ್ಯಕ್ಷರು ಹಾಗೂ ರಾಜ್ಯ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರಿಂದ ನವೆಂಬರ್ 7ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕುಲಸಚಿವ ಎಸ್.ಬಿ.ಗಂಟಿ ತಿಳಿಸಿದ್ದಾರೆ.
ಪ್ರಕಟಣೆಯಲ್ಲಿ ತಿಳಿಸಿರುವ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ಅಪರಾಹ್ನ 2.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು “ಭಾರತೀಯ ಸಂವಿಧಾನ: 75 ವರ್ಷಗಳ ಸಾರ್ಥಕ ಪಯಣ” ಕುರಿತು ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಇ.ರಂಗಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಎಸ್.ಬಿ.ಗಂಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಜೆ.ಕೆ.ರಾಜು, ಹಣಕಾಸು ಅಧಿಕಾರಿ ಪ್ರೊ. ಆರ್.ಶಶಿಧರ್, ಜಿಲ್ಲಾ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಎಲ್.ಎಚ್.ಅರುಣಕುಮಾರ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಘಟಕದ ನಿಕಟಪೂರ್ವ ಕಾರ್ಯದರ್ಶಿ ಎಂ.ಗುರುಸಿದ್ಧಸ್ವಾಮಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.

ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು




