ದಾವಣಗೆರೆ | ಭಯೋತ್ಪಾದನೆ ಹಾಗೂ ಮಾದಕ ದ್ರವ್ಯ ವ್ಯಸನ ಪ್ರಪಂಚದ ದೊಡ್ಡ ಸಮಸ್ಯೆಗಳು; ಪೊಲೀಸ್ ಮಹಾನಿರೀಕ್ಷಕ ಡಾ.ರವಿಕಾಂತೇಗೌಡ

Date:

“ಪ್ರಪಂಚದಲ್ಲಿ ಪ್ರಮುಖವಾಗಿ ಭಯೋತ್ಪಾದನೆ ಮತ್ತು ಮಾದಕ ದ್ರವ್ಯ ವ್ಯಸನ ಈ ಎರಡು ಪ್ರಮುಖ ಸಮಸ್ಯೆಗಳನ್ನು ಕಾಣಬಹುದು. ಭಯೋತ್ಪಾದನೆ ಎಂಬುದು ಒಂದು ಪಿಡುಗು. ಇದು ಯಾವುದೋ ಒಂದು ಸ್ಥಳ, ಸಂಸ್ಥೆ, ಪ್ರದೇಶವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತದೆ. ಇದರಿಂದ ಮಾನವ ಸಂಪನ್ಮೂಲ ಮೂಲಭೂತ ಸೌಕರ್ಯಗಳು ಸಂಪೂರ್ಣವಾಗಿ ನಾಶವಾಗುತ್ತದೆ. ಆದರೆ ಮಾದಕ ದ್ರವ್ಯ ವ್ಯಸನ ಇಡೀ ಪ್ರಪಂಚವನ್ನೇ ಕಾಡುತ್ತಿರುವ ಮತ್ತೊಂದು ದೊಡ್ಡ ಸಾಮಾಜಿಕ ಪಿಡುಗಾಗಿದೆ” ಎಂದು ದಾವಣಗೆರೆಯಲ್ಲಿ ಪೂರ್ವವಲಯ ಪೊಲೀಸ್ ಮಹಾನಿರೀಕ್ಷಕ ಡಾ.ರವಿಕಾಂತೇಗೌಡ ಅಭಿಪ್ರಾಯಪಟ್ಟರು.

- Advertisement -
1002218946
ಮಾದಕವಸ್ತು ವಿರೋಧಿ ದಿನಾಚರಣೆಯಲ್ಲಿ ಐಜಿಪಿ ಡಾ.ರವಿಕಾಂತೇಗೌಡ ಮಾತನಾಡಿದರು.

ದಾವಣಗೆರೆ ನಗರದ ದೊಡ್ಡಬಾತಿ ಸಮೀಪದ ತಪೋವನ ಆಯುರ್ವೇದಿಕ್ ಮತ್ತು ಮೆಡಿಕಲ್ ಕಾಲೇಜ್ ಆವರಣದಲ್ಲಿ ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜ್ ಹಾಗೂ ಹರಿಹರದ ಸ್ಪಂದನ ಮದ್ಯವ್ಯಸನಿಗಳ ಪುನರ್ವಸತಿ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುವಿನ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುವಿನ ವ್ಯಸನವನ್ನು ತಡೆಗಟ್ಟುವ ಕುರಿತು ಆಯೋಜಿಸಿದ್ದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಯುವ ಪೀಳಿಗೆ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಬಾರದು. ಯುವ ಸಮುದಾಯ ಮದ್ಯ, ಮಾದಕ ವಸ್ತುಗಳ ಸೇವನೆಗೆ ಪ್ರೇರೇಪಣೆಗೆ, ದುಶ್ಚಟಗಳಿಗೆ ಬಲಿಯಾಗದಿರಿ” ಎಂದು ಪೂರ್ವವಲಯ ಐಜಿಪಿ ಡಾ.ರವಿಕಾಂತೇಗೌಡ ಕರೆ ನೀಡಿದರು. .

“ವ್ಯಸನಗಳಿಗೆ ಬಲಿಯಾದ ವ್ಯಕ್ತಿ ಪ್ರತಿಯೊಂದು ಕ್ಷಣವೂ ಜೀವನ್ಮರಣ ಹೋರಾಟ ನಡೆಸುತ್ತಾನೆ. ಭಯೋತ್ಪಾದನೆ ನಡೆಸಿದ ಕೃತ್ಯಕ್ಕೆ ಆ ಭಯೋತ್ಪಾದಕ ಬಲಿಯಾಗುತ್ತಾನೆ. ಆದರೆ ಯಾವುದೇ ಒಂದು ದೇಶವನ್ನು ನಾಶ ಮಾಡಲು ಯುದ್ದ ಮಾಡುವ ಅವಶ್ಯಕತೆ ಇಲ್ಲಾ, ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಯುವಕರಿಗೆ ಮದ್ಯ, ಮಾದಕ ದ್ರವ್ಯಗಳು ಲಭ್ಯವಾಗುವಂತೆ ಮಾಡುವ ಮೂಲಕ ಕೆಲವು ದೇಶಗಳು ದೇಶವನ್ನು ನಾಶಪಡಿಸುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.‌

1002218948
ದಾವಣಗೆರೆ ಹೊರವಲಯದ ತಪೋವನ ಆಯುರ್ವೇದ ಕಾಲೇಜಿನಲ್ಲಿ ಮಾದಕದ್ರವ್ಯ ವಿರೋಧಿ ದಿನಾಚರಣೆ

“ಭವಿಷ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿದ್ದೀರಿ, ಸಮಾಜದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವ ಶಕ್ತಿ ನಿಮ್ಮಲ್ಲಿದೆ. ಮನಸ್ಸಿನ ಆರೋಗ್ಯ ಕಾಪಾಡಿಕೊಂಡಲ್ಲಿ ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಈ ಹಿನ್ನೆಲೆಯಲ್ಲಿ ದೇಶವು ವ್ಯಸನಮುಕ್ತ ರಾಷ್ಟ್ರವಾಗಲಿ. ಯಾವ ದೇಶ ವ್ಯಸನಮುಕ್ತ ರಾಷ್ಟ್ರವಾಗುವುದೋ, ಆ ದೇಶ ಪ್ರಗತಿಶೀಲ ರಾಷ್ಟ್ರವಾಗುವುದು. ನಮ್ಮ ದೇಶವು ಮತ್ತಷ್ಟು ಬಲಿಷ್ಠವಾಗಿ ಬೆಳೆಯಬೇಕಾದರೆ ಇಂತಹ ದುಶ್ಚಟ, ವ್ಯಸನಗಳಿಗೆ ಬಲಿಯಾಗದೇ ಇದರ ವಿರುದ್ಧ ಹೋರಾಡೋಣ” ಎಂದು ಕರೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, “ಮದ್ಯ, ಮಾದಕ ವ್ಯಸನದಿಂದ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯ ಮೇಲೆ ದುಷ್ಪರಿಣಾಮ ಬೀರದೆ, ಇಡೀ ಕುಟುಂಬವೇ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇಂತಹ ಕಾರ್ಯಕ್ರಮ ಈ ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ಕರ್ತವ್ಯದಲ್ಲಿ ತೊಡಗಿಸಿಕೊಂಡು ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ತಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸೋಣ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಲೋಕಸಭಾ ಚುನಾವಣೆಯಲ್ಲಿ ಹಣ ಪಡೆದು ರೇಣುಕಾಚಾರ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ

ಕಾರ್ಯಕ್ರಮದಲ್ಲಿ ಮದ್ಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕುರಿತು ಪ್ರತಿಜ್ಞಾವಿಧಿ ಭೋಧಿಸಲಾಯಿತು. ತಪೋವನ ಸಮೂಹ ಸಂಸ್ಥೆಯ ನಿರ್ದೇಶಕ ಡಾ.ಶಶಿಕುಮಾರ್ ವಿ ಮೆಹರ್ವಾಡೆ, ವಿಶೇಷಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಡಾ. ಕೆ ಕೆ.ಪ್ರಕಾಶ್, ನಗರ ಸಿಇಎನ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಸಿ.ವಸಂತ್, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ. ಕೆ. ಆರ್. ಅಶ್ವಿನಿ, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲೆ ಡಾ. ಸುಮನಾ ಭಟ್, ತಪೋವನ ಇನ್ಸ್ಟಿಟ್ಯೂಟ್ ಆಫ್ ನಸಿರ್ಂಗ್ ಕಾಲೇಜ್ ಶೈಲಜಾ ಬಿ. ಆರ್. ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...