ದಾವಣಗೆರೆ | ನೀರಿನ ಗುಣಮಟ್ಟ ಪರೀಕ್ಷಿಸಿ, ಕಲುಷಿತವಿದ್ದರೆ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ನೀಡಿ; ಸಚಿವ ಈಶ್ವರ ಖಂಡ್ರೆ.

Date:

Advertisements

“ನದಿ, ಕೆರೆ, ಕೊಳವೆಬಾವಿ ಸೇರಿದಂತೆ ಸಾರ್ವಜನಿಕರಿಗೆ ಪೂರೈಕೆ ಮಾಡುವ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ, ಕಲುಷಿತ ನೀರು ಪೂರೈಕೆ ಆಗುತ್ತಿದ್ದರೆ, ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್‌ ನೀಡಿ” ಎಂದು ದಾವಣಗೆರೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ ನಗರದ ಅರಣ್ಯ ಭವನದಲ್ಲಿ ಶನಿವಾರ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೆಡೆಸಿ ಮಾತನಾಡಿದ ಅವರು, “ನೋಟಿಸ್‌ ನೀಡಿದ ನಂತರವೂ ಕಲುಷಿತ ನೀರು ಪೂರೈಕೆ ಮಾಡುತ್ತಿದ್ದರೆ, ಅಂತಹ ಸ್ಥಳೀಯ ಸಂಸ್ಥೆಗಳ ವಿರುದ್ಧ ಜಲ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು. ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳದಂತೆ, ಜಲ ಮೂಲಕ್ಕೆ ಸಂಸ್ಕರಿಸದ ತ್ಯಾಜ್ಯ ನೀರು ಸೇರಿಕೊಳ್ಳದಂತೆ ಅಗತ್ಯ ಕ್ರಮಗಳನ್ನು ಅನುಸರಿಸಬೇಕು” ಎಂದು ನಿರ್ದೇಶನ ನೀಡಿದರು.

“ಅರಣ್ಯ ಇಲಾಖೆಯು ಇದೇ ವರ್ಷದ ಮುಂಗಾರಿನಲ್ಲಿ ನಡೆಸುವ ವನಮಹೋತ್ಸವದಲ್ಲಿ ರಸ್ತೆಯ ಬದಿಗಳಲ್ಲಿ ಉತ್ತಮ, ಎತ್ತರದ ಸಸಿಗಳನ್ನು ನೆಡಲು ಪ್ರಾಶಸ್ತ್ಯ ನೀಡಬೇಕು. ವನಮಹೋತ್ಸವದಲ್ಲಿ ಎತ್ತರದ ಸಸಿಗಳನ್ನು ನೆಟ್ಟರೆ, ಅವು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಇದು ಹಸಿರು ವಲಯ ಹೆಚ್ಚಿಸಲು ಸಹಾಯ ನೀಡುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Advertisements

“ಬಹುತೇಕ ಅರಣ್ಯ ಪ್ರದೇಶಗಳಲ್ಲಿ ಒತ್ತುವರಿ ಆರೋಪ ಕೇಳಿ ಬಂದಿದೆ. ಅರಣ್ಯ ಪ್ರದೇಶದ ಒತ್ತುವರಿ ಆಗದಂತೆ ಮೇಲುಸ್ತುವಾರಿ, ಎಚ್ಚರಿಕೆ ವಹಿಸಬೇಕು. ಅವರು, 2015ಕ್ಕೂ ಮೊದಲು ಪಟ್ಟಾಭೂಮಿ ಸೇರಿ 3 ಎಕರೆಗಿಂತ ಕಡಿಮೆ ವಿಸ್ತೀರ್ಣದ ಅರಣ್ಯ ಒತ್ತುವರಿ ಮಾಡಿರುವ ಪ್ರಕರಣ ಹೊರತು ಪಡಿಸಿ ಉಳಿದ ಎಲ್ಲಾ ಅರಣ್ಯ ಒತ್ತುವರಿ ತೆರವಿಗೆ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗಂಡು ಮಗುವಿಗೆ ಜನ್ಮ ನೀಡದಕ್ಕೆ ಪತ್ನಿ ಮೇಲೆ ಗಂಭೀರ ಹಲ್ಲೆ.

“ದಾವಣಗೆರೆ ಜಿಲ್ಲೆಯಲ್ಲಿ 2ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿರುವ ಒತ್ತುವರಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಹರಿಹರ ಬಳಿಯ ಪಾಲಿಫೈಬರ್ಸ್‌ ಕಾರ್ಖಾನೆಯಿಂದ ಪರಿಸರ ಮಾಲಿನ್ಯ ಉಂಟು ಮಾಡುತ್ತಿದೆ ಎಂಬ ದೂರುಗಳಿದ್ದು, ಈ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ವರದಿ ನೀಡಿ. ಒಂದೊಮ್ಮೆ ಜಲ, ವಾಯು ಮಾಲಿನ್ಯ ಉಂಟಾಗುತ್ತಿದ್ದರೆ ಕಾನೂನಿನ ರೀತ್ಯ ಕ್ರಮ ಜರುಗಿಸಿ” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರಿಸರ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲಿ ಪಾಲ್ಗೊಂಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X