ದಾವಣಗೆರೆ | ವಿಶ್ವವಿದ್ಯಾನಿಲಯದ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಿಕೆ

Date:

Advertisements

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಎಂಎಸ್‌ಸಿ ಕೋರ್ಸ್ ಅಧ್ಯಯನ ಮಾಡುತ್ತಿರುವ ಅನೇಕ ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಕ್ಕಬೇಕಾದ ವಿದ್ಯಾರ್ಥಿವೇತನ (scholarship) ಇನ್ನೂ ಲಭ್ಯವಾಗದ ಕಾರಣದಿಂದಾಗಿ ಎಂಎಸ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮುಂದೂಡಲಾಗಿದೆ.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ತಾಹಿರ್ ಸಮೀರ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿನಿಧಿ ಮಂಡಳಿ ಕುಲಪತಿ ಹಾಗೂ ಕುಲಸಚಿವರನ್ನು ಭೇಟಿಯಾಗಿ ಕಾಲೇಜು ಶುಲ್ಕ ಪಾವತಿಸಲು ಅಸಾಧ್ಯ ಸ್ಥಿತಿಯಲ್ಲಿದ್ದೇವೆ ಎಂದು ವಿದ್ಯಾರ್ಥಿಗಳು ವಿವರಿಸಿದ ಬಳಿಕ  ಕುಲಪತಿಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ 5 ರಿಂದ  ನಡೆಯಬೇಕಿದ್ದ ಎಂಎಸ್‌ಸಿ ಪರೀಕ್ಷೆಯನ್ನು ಆ.11ರ ವರೆಗೆ ಮುಂದೂಡಲು ತಾತ್ಕಾಲಿಕ ನಿರ್ಧಾರ ತೆಗೆದುಕೊಂಡಿದ್ದಾರೆ.  

ದಾವಣಗೆರೆ ವಿವಿ 1

ಈ ಬಗ್ಗೆ ತಿಳಿಸಿದ ಕುಲಪತಿ ಪ್ರೊ. ಬಿಡಿ ಕುಂಬಾರ್ “ವಿದ್ಯಾರ್ಥಿಗಳು ಅನುಭವಿಸುತ್ತಿರುವ ಆರ್ಥಿಕ ಹಿನ್ನಡೆ ಹಾಗೂ ವಿದ್ಯಾರ್ಥಿವೇತನ ಬಾರದ ಪರಿಣಾಮವಾಗಿ ಉದ್ಭವಿಸಿದ ಸಮಸ್ಯೆಯನ್ನು ಪರಿಗಣಿಸಿ, ವಿದ್ಯಾರ್ಥಿಗಳ ಶಿಕ್ಷಣ ಹಕ್ಕುಗಳು ಹಾನಿಯಾಗದಂತೆ, ಅವರಿಗೆ ಅಗತ್ಯವಾದ ಸಹಕಾರವನ್ನು ನೀಡಲು ವಿಶ್ವವಿದ್ಯಾನಿಲಯ ಬದ್ಧವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ಶಾಲಾ ಮಕ್ಕಳು, ಪಾದಾಚಾರಿಗಳ ಸುರಕ್ಷತೆಗೆ ಸೇತುವೆ, ರಸ್ತೆ ಉಬ್ಬು ನಿರ್ಮಾಣಕ್ಕೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಕುಲಪತಿಗಳ ಭೇಟಿ ವೇಳೆ ಎಂಎಸ್ಸಿ ಸ್ನಾತಕೋತ್ತರ ವಿಭಾಗದ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.‌

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X