ದಾವಣಗೆರೆ | ಹೊನ್ನಾಳಿಯಲ್ಲಿ ನೀರಿನ ಬಾಯ್ಲರ್ ಸ್ಫೋಟ: ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಸಾವು

Date:

ಮನೆಯ ನೀರಿನ ಬಾಯ್ಲರ್ ಸ್ಫೋಟಗೊಂಡು ಹನ್ನೂಂದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ನಗರದ ದುರ್ಗೀಗುಡಿ ಸಮೀಪದ ಮನೆಯಲ್ಲಿ ನಡೆದಿದೆ. ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌

- Advertisement -

ಸ್ವೀಕೃತಿ ಮೃತಪಟ್ಟ ಬಾಲಕಿಯಾಗಿದ್ಧು, ಮಂಗಳವಾರ ಬೆಳಗ್ಗೆ ಬಾಯ್ಲರ್ ಸ್ಫೋಟಗೊಂಡಿದ್ದು, ಸಮೀಪದಲ್ಲೇ ಇದ್ದ ಸ್ವೀಕೃತಿ ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಬುಧವಾರ ಕೊನೆಯುಸಿರೆಳೆದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತೀರ್ಥಿಬಾಯಿ (72) ವಯೋವೃದ್ಧೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.‌ ಬಾಲಕಿ ತಂದೆ ಹೂವನಾಯ್ಕ್‌ ಮತ್ತು ತಾಯಿ ಸುನಿತಾ ಬಾಯಿಗೂ ಗಾಯಗಳಾಗಿದ್ದು, ಅವರಿಗೂ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಬಾಯ್ಲರ್ ಸ್ಫೋಟಗೊಂಡ ವೇಳೆ ಬಾಲಕಿ ಸ್ವೀಕೃತಿಗೆ ಬೆಂಕಿ ಹತ್ತಿಕೊಂಡಿದೆ. ತನ್ನ ಮೊಮ್ಮಗಳಿಗೆ ಹತ್ತಿರುವ ಬೆಂಕಿಯನ್ನು ನಂದಿಸಲು ಹೋದ ಅಜ್ಜಿ ತೀರ್ಥಿಬಾಯಿಗೂ ಗಂಭೀರ ಗಾಯಗಳಾಗಿದೆ. ವಾಲ್ಮೀಕಿ ಜಯಂತಿಯಂದು ಸರ್ಕಾರಿ ರಜೆ ಇದ್ದ ಪರಿಣಾಮ ಎಲ್ಲರೂ ಮನೆಯಲ್ಲೇ ಇದ್ದರು. ಹೂವಾನಾಯ್ಕ್ ತಾಲೂಕಿನ ಬೆನಕನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ನಿರೀಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಘಟನೆ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...