ದಾವಣಗೆರೆ | ದೇಶ ಎಂದಾಗ ಒಗ್ಗಟ್ಟಿರಬೇಕು, ಆಪರೇಷನ್ ಸಿಂಧೂರ ಪರವಿದ್ದೇವೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.

Date:

“ರಾಹುಲ್ ಗಾಂಧಿ ಅವರ ಆಪರೇಷನ್ ಸಿಂಧೂರ ಹೇಳಿಕೆಯಂತೆ ಎಲ್ಲರೂ ಒಂದೇ ಮಾತಿನ ಮೇಲೆ ನಿಲ್ಲಬೇಕು. ರಾಷ್ಟ್ರೀಯ ನಾಯಕರ ಮಾತಿನಂತೆ ನೆಡೆಯಬೇಕು. ದೇಶ ಅಂತ ಬಂದಾಗ ನಾವೆಲ್ಲ ಒಗ್ಗಟ್ಟಾಗಿರಬೇಕು” ಎಂದು ದಾವಣಗೆರೆ ಜಿಲ್ಲೆ ಭೇಟಿಯ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಪ್ರತಿಪಾದಿಸಿದರು.

- Advertisement -

ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರ ಆಪರೇಷನ್ ಸಿಂಧೂರ ವಿಚಾರದ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಶಾಸಕರ ಮಾತು ಸರಿಯಲ್ಲ” ಎಂದು ಖಂಡನೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...
1001999446

“ಹಲವಾರು ವರ್ಷಗಳಿಂದ ಕಂದಾಯ ರಹಿತ ಗ್ರಾಮಗಳ‌ ಜನರಿಗೆ ಕಂದಾಯ ಗ್ರಾಮಗಳನ್ನು ಮಾಡಬೇಕು ಹಾಗೂ ಹಕ್ಕುಪತ್ರ ವಿತರಣೆ ಮಾಡಬೇಕು ಎನ್ನುವುದು ಸುಮಾರು ವರ್ಷಗಳ ಬೇಡಿಕೆಯಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ಅವರ ಬೇಡಿಕೆಯನ್ನು ಈಡೇರಿಸುತ್ತಿದೆ” ಎಂದರು.

ಕಾಂಗ್ರೆಸ್‌ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಈಡೇರಿಸುತ್ತೇವೆ ಎಂದು ಜನರಿಗೆ ಭರವಸೆ ನೀಡಿದ್ದೆವು. ಅದರಂತೆ ಇಂದು ನಾವು ನಡೆದುಕೊಳ್ಳುತ್ತಿದ್ದೇವೆ. ಪ್ರತಿಯೊಂದು ಗ್ಯಾರಂಟಿಯನ್ನು ಮನೆಬಾಗಿಲಿಗೆ ತಲುಪಿಸಿದ್ದೇವೆ. ಕಾಂಗ್ರೆಸ್ ಸರ್ಕಾರದಲ್ಲಿ ನುಡಿದಂತೆ ನಡೆದಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

1001999459

ಗ್ರೇಟರ್ ಬೆಂಗಳೂರು ವಿಚಾರಕ್ಕೆ ಆರ್. ಅಶೋಕ್ ವ್ಯಂಗ್ಯದ ಬಗ್ಗೆ ಪ್ರತಿಕ್ರಿಯಿಸಿ, “ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ” ಅನ್ನೋ ರೀತಿ ವಿರೋಧ ಪಕ್ಷದವರು ವಿರೋಧಿಸುತ್ತಿದ್ದಾರೆ. ಗ್ರೇಟರ್ ಗೂ ಕ್ವಾರ್ಟರ್ ಗೂ ವ್ಯತ್ಯಾಸ ಗೊತ್ತಿಲ್ಲದಿರುವಷ್ಟು ಬುದ್ದಿವಂತ ಅಶೋಕಣ್ಣ” ಎಂದು ವ್ಯಂಗ್ಯವಾಡಿದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಸಾಕ್ಷಿಯಾಗಿ ಮಾದರಿ ಮದುವೆ; ಬುದ್ಧ, ಬಸವ, ಅಂಬೇಡ್ಕರ್ ತತ್ವಗಳ ಪಾಲನೆಗೆ ಕಂಕಣಬದ್ದ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕೊಲೆ ಸುಲಿಗೆ ಜಾಸ್ತಿಯಾಗಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿದ ಹೆಬ್ಬಾಳ್ಳರ್, ಅವರು ಸಿಎಂ ಆದಂತವರು ಅವರಿಗೆ ನಾನೇನು ಹೇಳಲ್ಲ ಪ್ರತಿಕ್ರಿಯಿಸಲು ನಿರಾಕರಿಸಿದರು.

ಇದನ್ನೂ ಓದಿ; ಚಿತ್ರದುರ್ಗ | ಸಾಲಬಾಧೆ, ಬೆಳೆ ಕೈಕೊಟ್ಟದ್ದರಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

ಕರ್ನಲ್ ಸೋಪಿಯಾ ಖುರೇಷಿ ವಿಚಾರಕ್ಕೆ ಬಿಜೆಪಿ ಸಚಿವರ ಲೇವಡಿ ಖಂಡಿಸಿದ ಲಕ್ಷ್ಮಿ ಹೆಬ್ಬಾಳ್ಳರ್, “ಇಂತಹ ಮನಸ್ಥಿತಿ ಇರುವಂತ ಗಂಡಸರನ್ನು ಕಟುವಾಗಿ ಟೀಕಿಸುತ್ತೇನೆ ಮತ್ತು ಇಂತ ರಾಜಕಾರಣಿಗಳ ಹೇಳಿಕೆ ಪ್ರತಿಯೊಬ್ಬರೂ ಖಂಡಿಸಬೇಕಾಗಿದೆ” ಎಂದರು.

1001999467

ಆಪರೇಷನ್‌ ಸಿಂಧೂರ ನಡೆಸಿದ ಕೇಂದ್ರ ಸರ್ಕಾರದ ಪರವಾಗಿ ನಾವು ಸದಾ ಇರುತ್ತೇವೆ. ಇದರಲ್ಲಿ ಎರಡೂ ಮಾತಿಲ್ಲ ಎಂದು ಸ್ಪಷ್ಟಪಡಿಸಿದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...