ಮಕ್ಕಳ ಪಾಲನೆಗೆ ಸಂಬಂಧಿಸಿದ ಕೌಟುಂಬಿಕ ಸಮಸ್ಯೆ ಇತ್ಯರ್ಥಕ್ಕೆಂದು ಬಾಲ ನ್ಯಾಯಮಂಡಳಿಗೆ ಆಗಮಿಸಿದ್ದ ವೇಳೆ ಗಂಡನೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಂಗಳವಾರ ದಾವಣಗೆರೆಯ ಎಂಸಿಸಿ ಬಡಾವಣೆಯ ಬಾಲ ನ್ಯಾಯಮಂಡಳಿ ಆವರಣದಲ್ಲಿ ನಡೆದಿದೆ.
ದಾವಣಗೆರೆ ತಾಲೂಕಿನ ಕಾಡಜ್ಜಿ ಗ್ರಾಮದ ಕಲೀಂವುಲ್ಲಾ ಪತ್ನಿ ಮುಷ್ಕಾನ್ ಬಾನು (26) ಕೊಲೆಯಾದವರು. ಪತಿ ಕಲೀಂವುಲ್ಲಾ (35) ಕೊಲೆ ಮಾಡಿದ ಆರೋಪಿಯಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರವಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾತುಕತೆ ಮೂಲಕ ವಿಚಾರ ಬಗೆಹರಿಸಿಕೊಳ್ಳಲು ಎಂಸಿಸಿ ಬಡಾವಣೆಯ ಬಾಲ ನ್ಯಾಯ ಮಂಡಳಿಗೆ ಬಂದಾಗ ಆವರಣದಲ್ಲಿಯೇ ಚಾಕುವಿನಿಂದ ಹಿರಿದು ಕೊಂದಿದ್ದಾನೆ ಎನ್ನಲಾಗಿದೆ. ಅಲ್ಲದೇ, ಜಗಳ ಬಿಡಿಸಲು ಮುಂದಾದ ಬಾನು ಅವರ ತಾಯಿ ಪರ್ಜಾನ್ (50) ಅವರಿಗೂ ಕೂಡ ಚಾಕು ಇರಿತಕ್ಕೆ ಒಳಗಾಗಿದ್ದಾರೆ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್ಚಿತ್ರದುರ್ಗ | ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ: ಭಂಗಿ ನಾಗರಾಜ್
ಮುಷ್ಕಾನ್ ಬಾನು ಹಾಗೂ ಕಲೀಂವುಲ್ಲಾ ದಂಪತಿ ಕೌಟುಂಬಿಕ ಕಲಹದ ಕಾರಣದಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಇಬ್ಬರು ಮಕ್ಕಳ ಪಾಲನೆಯ ವಿಚಾರದಲ್ಲಿ ಸೃಷ್ಟಿಯಾದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಬಾಲ ನ್ಯಾಯಮಂಡಳಿಗೆ ಆಗಮಿಸಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಹಿಳೆಗೆ ಆರೋಪಿ ಚಾಕುವಿನಿಂದ ಇರಿದಿದ್ದಾನೆ. ಘಟನೆಯಲ್ಲಿ ಗಾಯಗೊಂಡಿದ್ದ ಮುಷ್ಕಾನ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆದಲ್ಲೇ ಅವರು ಮೃತಪಟ್ಟರು ಎನ್ನಲಾಗಿದೆ