ದಾವಣಗೆರೆ | ಸಮಾಜ ಮುನ್ನಡೆಸುವ ಶಕ್ತಿಯಿರುವ ಮಹಿಳೆಗೆ ಅವಕಾಶ ನೀಡಬೇಕು: ನಾಗಲಕ್ಷ್ಮಿ ಚೌಧರಿ

Date:

“ಹೆಣ್ಣು ಮಕ್ಕಳಿಗೆ, ಮಹಿಳೆಯರಿಗೆ ಅವಕಾಶಗಳು ಸಿಗುವುದು ಕಡಿಮೆ. ಅವಕಾಶ ಸಿಕ್ಕಾಗ ಮಹಿಳೆ ಕ್ರಾಂತಿಯನ್ನೇ ಮಾಡಬಲ್ಲಳು. ಸಮಾಜ, ದೇಶವನ್ನು ಮುನ್ನಡೆಸಬಲ್ಲಳು. ಇದಕ್ಕೆ ಉದಾಹರಣೆಯಾಗಿ ಕಿತ್ತೂರಿನಲ್ಲಿ ಚೆನ್ನಮ್ಮನಂತಹ ಅಂದಿನ ಕಾಲದಿಂದಲೂ ಹಿಡಿದು ಇಂದಿನ ಅನೇಕ ಮಹಿಳೆಯರ ಉದಾಹರಣೆ ನಮ್ಮ ಮುಂದಿದೆ” ಎಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರೆಯಲ್ಲಿ ಆಯೋಜಿಸಿದ್ದ ಬುಡಕಟ್ಟು ಮಹಿಳೆಯರ ಕುರಿತ ವಿಚಾರಗೋಷ್ಠಿಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅಭಿಪ್ರಾಯಪಟ್ಟರು.

- Advertisement -

ಹರಿಹರ ಸಮೀಪದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುತ್ತಿರುವ 28ನೇ ವರ್ಷದ ಮಠದ ವಾರ್ಷಿಕೋತ್ಸವ, ಪುರುಷೋತ್ತಮಾನಂದ ಶ್ರೀಗಳ ಪುಣ್ಯ ಸ್ಮರಣೆ, ಎಂಟನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಹೆಣ್ಣು ಮಕ್ಕಳಿಗೆ ಇಂದಿನ ದಿನಮಾನಗಳಲ್ಲಿ ಸಾಕಷ್ಟು ಅವಕಾಶಗಳನ್ನು ಎಲ್ಲ ಸಮಾಜಗಳು ನೀಡಬೇಕಿದೆ. ಪುರುಷ ಪ್ರಧಾನ ಸಮಾಜದಲ್ಲಿ ಹಿಂದಿನಿಂದಲೂ ಮಹಿಳೆಯರನ್ನು ದೌರ್ಜನ್ಯದಿಂದ ಕೀಳಾಗಿ ಕಾಣುವ ಸ್ಥಿತಿ ಬೆಳೆದು ಬಂದಿದೆ. ರಾಜಕಾರಣಿಗಳು, ರಾಜಕೀಯ ಮುಖಂಡರು ಸೇರಿದಂತೆ ಎಲ್ಲ ವರ್ಗದ ಪುರುಷರು ತಾಯಿ, ಅಕ್ಕ ತಂಗಿ, ಹೆಂಡತಿ ಸೇರಿದಂತೆ ಎಲ್ಲಾ ಮಹಿಳೆಯರಿಗೆ ಗೌರವ ನೀಡುವುದನ್ನು ಕಲಿಯಬೇಕು” ಎಂದು ಕರೆ ನೀಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಹಿಳಾ ಅಭಿವೃದ್ಧಿಗೆ ಜನನಿ ಸುರಕ್ಷಾ, ಉದ್ಯೋಗಿನಿ, ಗೃಹ ಲಕ್ಷಿ ಸೇರಿದಂತೆ ಸರ್ಕಾರ ನೀಡುವ ಅನೇಕ ಯೋಜನೆಗಳನ್ನು ಕುರಿತು ಅವರಿಗೆ ತಿಳಿಸಬೇಕಿದೆ. ಮನೆ, ಹಳ್ಳಿ ಸಮಾಜ ಸೇರಿದಂತೆ ದೇಶವನ್ನು ಮುನ್ನಡೆಸುವ ಶಕ್ತಿ ಸ್ತ್ರೀಯರಿಗಿದೆ. ಹೆಣ್ಣಿನ್ನು ಕೀಳಾಗಿ ನೋಡದೇ ಗೌರವದಿಂದ ಅವಕಾಶ ನೀಡಬೇಕು” ಎಂದು ಅಭಿಪ್ರಾಯಪಟ್ಟರು.

1003644860

ಕಾರ್ಯಕ್ರಮದ ಮಹಿಳಾ ಗೋಷ್ಟಿ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ವಿ ಸೋಮಣ್ಣ,
“ಇಂದು ಮಹಿಳಾ ಗೋಷ್ಠಿಯಲ್ಲಿ ಬುಡಕಟ್ಟು ಸಮಾಜದ ಮಹಿಳೆಯರ ಬಗ್ಗೆ ಚರ್ಚೆ ನಡೆಯುತ್ತಿದ್ದು ಬುಡಕಟ್ಟು ಸಮಾಜದ ಮಹಿಳೆಯರ ಜೊತೆಗೆ ಎಲ್ಲ ಮಹಿಳೆಯರ ಅಭಿವೃದ್ಧಿಗೆ ನಾವು ಶ್ರಮಿಸಬೇಕಾಗಿದೆ. ಆ ನಿಟ್ಟಿನಲ್ಲಿ ಶ್ರೀಮಠ ಕೂಡ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರ ಕೂಡ ಈ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಅವುಗಳ ಉಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು. ರಾಮಾಯಣ ಬರೆದ ವಾಲ್ಮೀಕಿ, ಒಬ್ಬ ತಪಸ್ವಿಯಾಗಿ ಶ್ರೇಷ್ಠ ಸಂತನಾಗಿ ವಾಲ್ಮೀಕಿ ಪ್ರಪಂಚದಲ್ಲಿ ಅಜರಾಮರವಾಗಿದ್ದಾರೆ” ಎಂದು ಅಭಿಪ್ರಾಯಪಟ್ಟರು.

1003644861

ಇದೇ ವೇಳೆ ವಾಲ್ಮೀಕಿ ಸಮಾಜ ಹಾಗೂ ಪರಿಶಿಷ್ಟ ಪಂಗಡ, ಹಾಗೂ ಶ್ರೀಮಠದ ಪರವಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿರುವ ಶೇ. ಏಳರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲು ಕಾನೂನು ರಕ್ಷಣೆಯನ್ನು ನೀಡಲು ಕೇಂದ್ರ ಸರ್ಕಾರಕ್ಕೆ ತಿಳಿಸಿ, ಕೇಂದ್ರ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುವಂತೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳು ಸೋಮಣ್ಣನವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಕಾರ್ಯಕ್ರಮದಲ್ಲಿ ಫೆಬ್ರವರಿ 9ರವರೆಗೆ ಅನೇಕ ಗೋಷ್ಠಿಗಳು ಜರುಗಲಿದ್ದು ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳು ಸಾನಿಧ್ಯ ವಹಿಸುವರು.‌ ಇದೇ ವೇಳೆ ವಧುವರರ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ, ಹರಿಹರ ಶಾಸಕ ಬಿಪಿ ಹರೀಶ್, ಶಾಸಕ ಬಸವರಾಜ್ ದದ್ದಲ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಶಾಂತಲಾ ರಾಜಣ್ಣ, ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಮಹೇಂದ್ರ ಕುಮಾರ್ಸೇ ಸೇರಿದಂತೆ ಮಹಿಳೆಯರು, ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...