ದಾವಣಗೆರೆ | ಮಹಿಳೆಯರು ಮೌಢ್ಯದ ಆಚರಣೆ ಬಿಡಬೇಕು; ವಿಶ್ವೇಶ್ವರಯ್ಯ, ಶರಣ ಸಾಹಿತ್ಯ ಪರಿಷತ್

Date:

Advertisements

“ಮಹಿಳೆಯರು ಪುರೋಹಿತಶಾಹಿ ವ್ಯವಸ್ಥೆ ನಿರ್ಮಿಸಿರುವ ಮೌಢ್ಯದ ಆಚರಣೆಗಳನ್ನು ಬಿಟ್ಟು ಹೊರಗೆ ಬರಬೇಕು” ಎಂದು ದಾವಣಗೆರೆ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶರಣ ವಿಶ್ವೇಶ್ವರಯ್ಯ ಬಿ.ಎಂ. ಹೆಮ್ಮನಬೇತೂರು ಅವರು ಅಭಿಪ್ರಾಯಪಟ್ಟರು.

ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳದಲ್ಲಿ ನಡೆದ ಹಡಪದ ಅಪ್ಪಣ್ಣನವರ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಬಸವಣ್ಣನವರು ದೇವರು, ಧರ್ಮದ ಬಗ್ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ, ಹಾಗಾಗಿ ವಚನ ಸಾಹಿತ್ಯ ಓದಿದರೆ ಪುರೋಹಿತರ ಕಪಿಮುಷ್ಠಿಯಿಂದ ಹೊರಗೆ ಬರಲು ಸಹಾಯವಾಗುತ್ತದೆ. ಹಾಗೂ ನಾಳೆಯಿಂದ ನಿಮ್ಮ ನಿಮ್ಮ ಊರುಗಳಲ್ಲಿ ನಡೆಯುವ ನಾಗರ ಪಂಚಮಿ ಹಬ್ಬದ ದಿನ ಹಾವಿಗೆ ಹಾಲು ಹಾಕುವ ಸಂಪ್ರದಾಯ ಅತ್ಯಂತ ಅವೈಜ್ಞಾನಿಕವಾದ ಆಚರಣೆ.
ಇಂಥಹ ಮೌಢ್ಯದ ವಿರುದ್ಧ ಹೋರಾಟ ಮಾಡಿದವರು ಬಸವಣ್ಣನವರು. ಅವರ ನೆರಳಿನಂತೆ ಬಸವಣ್ಣನವರ ಎಲ್ಲಾ ಕಾರ್ಯಗಳಿಗೆ ಬೆಂಬಲವಾಗಿ ನಿಂತವರು ಹಡಪದ ಅಪ್ಪಣ್ಣನವರು ಮತ್ತು ಲಿಂಗಮ್ಮ ತಾಯಿಯವರು” ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಗ್ರಾಮದ ಹಿರಿಯರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶರಣ ಕೆ. ಜಿ. ಬಸವನಗೌಡರ್ ಮಾತನಾಡಿ “ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ. ಹಾಗಾಗಿ ಎಲ್ಲರನ್ನೂ ನಾವು ಗೌರವದಿಂದ ಮಾತನಾಡಿಸಿದರೆ ಈ ಜಗತ್ತಿನಲ್ಲಿ ಯಾವ ಸಮಸ್ಯೆಗಳೂ ಇರುವುದಿಲ್ಲ” ಎಂದರು.

Advertisements

ಅಧ್ಯಕ್ಷತೆ ವಹಿಸಿದ್ದ ಗ್ರಾಮಪಂಚಾಯತ್ ಅಧ್ಯಕ್ಷೆ ಶರಣೆ ಆಶಾ ಸಿದ್ದೇಶ್ ಅವರು ಮಾತನಾಡಿ, “ಬಸವಣ್ಣನವರು ನಮ್ಮೆಲ್ಲರಿಗೂ ಆದರ್ಶ” ಎಂದರು. ಶರಣ ಕಲಿವೀರ ಕಳ್ಳಿಮನಿ ಅವರು ಮಾತನಾಡಿ “ವಿಜ್ಞಾನ ಸತ್ಯ ಅಂತಹ ಸತ್ಯವನ್ನು ಅರಿತು ಮೂಢನಂಬಿಕೆಯನ್ನು ಬಿಡಬೇಕು” ಎಂದು ತಿಳಿಸಿದರು. ಕೆ. ಜಿ. ಮಹಾಂತೇಶ ಅವರು ಮಕ್ಕಳಿಗೆ ಸಚ್ಚಾರಿತ್ರ್ಯ ಮುಖ್ಯ ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತುಂಗಾಭದ್ರಾ ನದಿ ಅಪಾಯದ ಮಟ್ಟ; ಜನ, ಜಾನುವಾರು ನದಿಗೆ ಇಳಿಸದಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ.

ಸಾಂಸ್ಕೃತಿಕ ನಾಯಕ ಬಸವಣ್ಣನವರ ವಿಷಯ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.ಸಮಾರಂಭದಲ್ಲಿ ಮಕ್ಕಳಿಗೆ ವಚನಗಳನ್ನು ಹೇಳಿಕೊಟ್ಟು, ಮಕ್ಕಳು ವಚನ ಪ್ರಾರ್ಥನೆ ಮಾಡಿದರು.

ಸಮಾರಂಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗೋಪನಾಳ್ ರುದ್ರೇಗೌಡ, ಪದಾಧಿಕಾರಿಗಳಾದ ಟಿ.ಎಂ. ಶಿವಮೂರ್ತಯ್ಯ, ಮಾನವ ಬಂಧುತ್ವ ವೇದಿಕೆಯ ಸಂಚಾಲಕರಾದ ಹನುಮಂತಪ್ಪ, ವಸತಿ ನಿಲಯದ ಮೇಲ್ವಿಚಾರಕರಾದ ಕವಿತಾ ಪೋರಮ್ಮನವರ್, ಪ್ರಕಾಶ, ನಾಗರಾಜ ಕಕ್ಕರಗೊಳ್ಳ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X