ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ

Date:

ದಾವಣಗೆರೆಯ ಉದ್ಯಮಿಯೊಬ್ಬರ ಪುತ್ರ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಕೆಲ ಕ್ಷಣದಲ್ಲಿಯೇ ಮೃತಪಟ್ಟ ಘಟನೆ ದಾವಣಗೆರೆ ನಗರದ ಜಯನಗರದಲ್ಲಿ ನಡೆದಿದೆ.

- Advertisement -

ವ್ಯಾಪಾರೋದ್ಯಮಿಯೊಬ್ಬರ ಪುತ್ರ ಅಕ್ಷಯ್ ಎನ್ನುವ 22 ವರ್ಷ ವಯಸ್ಸಿನ ಯುವಕ ಹೃದಯಘಾತಕ್ಕೆ ಬಲಿಯಾಗಿದ್ದಾನೆ ಎನ್ನಲಾಗಿದ್ದು, ಮನೆಯಲ್ಲಿದ್ದ ವೇಳೆ ಅಕ್ಷಯ್‌ ಇದ್ದಕ್ಕಿದ್ದಂತೆ ಎದೆ ನೋವಿನಿಂದ ಕುಸಿದು ಬಿದ್ದಿದ್ದರು ಎಂದು ತಿಳಿದು ಬಂದಿದೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಅಕ್ಷಯ್‌ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸೋಮವಾರವಷ್ಟೇ ಆಟೋದಲ್ಲಿ ಕುಳಿತಿದ್ದ ಆಟೋ ಚಾಲಕ ನಗರದ ಎಸ್‌ಒಜಿ ಕಾಲೋನಿಯ ಎ ಬ್ಲಾಕ್‌ನ ಸಂಗಪ್ಪ ಹೃದಯಾಘಾತದಿಂದ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಮೃತಪಟ್ಟಿದ್ದರು. ಎಂದಿನಂತೆ ಆಟೋ ಓಡಿಸಲು ಬಂದಿದ್ದ ಅವರು ಬೆಳಗ್ಗೆ ರೈಲ್ವೆ ನಿಲ್ದಾಣದಲ್ಲಿ ಆಟೋ ನಿಲುಗಡೆ ಮಾಡಿದ್ದರು. ಈ ವೇಳೆ ಆಟೋದಲ್ಲಿ ಕುಳಿತಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದಾವಣಗೆರೆಯಲ್ಲಿ ಒಂದೇ ದಿನದ ಅಂತರದಲ್ಲಿ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.‌

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎನ್ನುವ ಆರೋಪ ಕೇಳಿ ಬಂದಿತ್ತು. ಆದರೆ ಜಯದೇವ ವೈದ್ಯರ ನೇತೃತ್ವದ ತಜ್ಞರ ಸಮಿತಿ ಹೃದಯಘಾತಗಳಿಗೆ ಲಸಿಕೆ ಕಾರಣವಲ್ಲ. ಕೋವಿಡ್ ನಂತರ ಹೆಚ್ಚುತ್ತಿರುವ ಮಧು ಮೇಹ ಹೃದಯಾಘಾತಕ್ಕೆ ಕಾರಣವಾಗಿದೆ. ಅಲ್ಲದೆ ರಕ್ತದೊತ್ತಡ ಹೆಚ್ಚಿನ ಮಟ್ಟದಲ್ಲಿದ್ದರೆ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಆಧುನಿಕ ಆಹಾರ ಪದ್ಧತಿ ಮತ್ತು ಜೀವನಶೈಲಿ, ಕಡಿಮೆ ಶ್ರಮದಾನ, ದೇಹದ ಚಟುವಟಿಕೆ ಕಡಿಮೆಯಿರುವುದು, ವ್ಯಾಯಾಮ ಮಾಡದಿರುವುದು, ಕಂಪ್ಯೂಟರ್ ಮತ್ತು ಮೊಬೈಲ್ ನಲ್ಲಿ ಹೆಚ್ಚಿನ ಸಮಯ ಕಳೆಯುವುದು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಚಾರ ಸುರಕ್ಷತೆಗೆ ರಸ್ತೆಗಿಳಿದ ಜಿಲ್ಲಾಧಿಕಾರಿ; ಸಂಚಾರ ನಿಯಮ ಪಾಲಿಸದ ವಾಹನಗಳ ವಶ, ನೋಟೀಸ್ ಜಾರಿ

ಆದರೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತಜ್ಞರ ವರದಿ ಮತ್ತು ಶಿಫಾರಸುಗಳ ಮೇಲೆ ಹಲವು ಕ್ರಮಗಳನ್ನು , ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆಸ್ಪತ್ರೆಯ ಹೊರಗೆ ಸಂಭವಿಸುವ ಹಠಾತ್ ಮರಣಗಳು ಮತ್ತು ಹೃದಯಾಘಾತ ಪ್ರಕರಣಗಳಲ್ಲಿ ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...