ಚಾಕೊಲೇಟ್​​​ ಪಾನ್​ಗೆ​​​​​ ಗಾಂಜಾ ಬೆರೆಸಿ ಮಾರಾಟ, ತಂದೆ-ಮಗ ಬಂಧನ

Date:

ಚಾಕೊಲೇಟ್​​​ ಪಾನ್​ಗೆ​​​​​ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ಆರೋಪಿಯ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದು ಬಾಲಪರಾಧಿಗಳ ಕೇಂದ್ರಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರೋಪಿಯು ದಾವಣಗೆರೆ ನಗರದ ರಾಮ್​ ಅಂಡ್​ ಕೋ ಸರ್ಕಲ್​ಲ್ಲಿ ರಾಜು ಪಾನ್‌ ಶಾಪ್​ ಹೆಸರಿಲ್ಲಿ ಅಂಗಡಿ ನಡೆಸುತ್ತಿದ್ದ. ಈತ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಿಶ್ರಿತ ಚಾಕೋಲೇಟ್​ ಪಾನ್​ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ತನ್ನ ಅಪ್ರಾಪ್ತ ಮಗನ ಕೈಯಲ್ಲಿ ಗಾಂಜಾ ಮಿಶ್ರಿತ ಪಾನ್​ ಕೊಟ್ಟು ಕಾಲೇಜುಗಳ ಬಳಿ ಮಾರಾಟ ಮಾಡಿಸುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾಶಪಡಿಸಿದ ಮಾದಕ ದ್ರವ್ಯದ ಮಾಹಿತಿ

2023ರಿಂದ 2025ರ ಇಲ್ಲಿಯವರೆಗೆ ಒಟ್ಟು ಸುಮಾರು 34,78,424 ರೂ. ಬೆಲೆಬಾಳುವ 57 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಕಳೆದ 03 ವರ್ಷಗಳಲ್ಲಿ 5,50,000 ರೂ. ಮೌಲ್ಯದ 72.64 ಗ್ರಾಂ ಎಂಡಿಎಂಎ ಪೌಡರ್ ಹಾಗೂ 1,21,000 ರೂ. ಬೆಲೆಯ 42 ಗ್ರಾಂ ಅಫೀಮು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕಳೆದ 03 ವರ್ಷಗಳಲ್ಲಿ ಒಟ್ಟು 41,49,424 ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ 06 ವರ್ಷಗಳಿಂದ ಇಲ್ಲಿಯವರೆಗೆ ಡ್ರಗ್ಸ್ ಡಿಸ್‌ಪೋಸಲ್ ಕಮಿಟಿಯ ಮೂಲಕ ನ್ಯಾಯಾಲಯದ ಆದೇಶ ಪಡೆದು, 323 ಕೆಜಿ 565 ಗ್ರಾಂ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಎಸ್​​ಪಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...