ಪಂಚ ರಾಜ್ಯಗಳ ಫಲಿತಾಂಶ: ಕೇರಳದಲ್ಲಿ ನಿರೀಕ್ಷೆಗೂ ಮೀರಿ ಸ್ಥಾನ ಗಳಿಸಿದ್ದೇವೆ ಎಂದ ಸಿದ್ದರಾಮಯ್ಯ

Date:

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಕೇರಳದಲ್ಲಿ ನಿರೀಕ್ಷೆಗೂ ಮೀರಿ ಸ್ಥಾನ ಗಳಿಸಿದ್ದೇವೆ. ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಿಸಿದರು.

ಇಂದು ಮಾಜಿ ಮುಖ್ಯಮಂತ್ರಿ ಶ್ರೀ ದಿವಂಗತ ಕೆ.ಸಿ. ರೆಡ್ಡಿ ಯವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು

ಇದನ್ನೂ ಓದಿ> 5 ರಾಜ್ಯ ಚುನಾವಣೆ ಫಲಿತಾಂಶ

ಪಂಚ ರಾಜ್ಯ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು “ಅಸ್ಸಾಂನಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದ್ದು, ಅದನ್ನು ಒಪ್ಪಿಕೊಳ್ಳುತ್ತೇವೆ. ಕೇರಳದಲ್ಲಿ ನಮ್ಮ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ. ಸುಮಾರು 76 ರಿಂದ 80 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆವು, ಆದರೆ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು ಎಂದು ಭಾವಿಸಿದ್ದೇನೆ” ಎಂದರು.

- Advertisement -

ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಮುನ್ನಡೆ ಸಾಧಿಸಿರುವ ಬಗ್ಗೆ ಮಾತನಾಡಿ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...