ಹರಿಹರ | ಒಳಮೀಸಲಾತಿಗೆ ಆಗ್ರಹಿಸಿ ಅರೆಬೆತ್ತಲೆ ಮೆರವಣಿಗೆ; ದಸಂಸ ಬೃಹತ್‌ ಪ್ರತಿಭಟನೆ

Date:

ನ್ಯಾ. ಹೆಚ್ ಎನ್ ನಾಗಮೋಹನದಾಸ್ ಆಯೋಗದ ವರದಿಯಂತೆ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಾವಣಗೆರೆಯ ಹರಿಹರ ನಗರದಲ್ಲಿ ಇಂದು (ಮಾ.27) ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಹಾಗೂ ಮಾನವ ಸರಪಳಿ ರಚಿಸಿ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಜಿ ಸಂತೋಷ್ ಕುಮಾರ್‌ಗೆ ಮನವಿ ನೀಡಿದರು.

- Advertisement -

ಕದಸಂಸ ತಾಲೂಕು ಸಂಚಾಲಕ ಪಿ ಜೆ ಮಹಾಂತೇಶ್ ಮಾತನಾಡಿ, “ಸಂವಿಧಾನದ ಆಶಯಕ್ಕೆ ಪೂರಕವಾಗಿರುವ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲು ಜಾರಿಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಒಳಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ನ 7 ನ್ಯಾಯಾಧೀಶರ ಪೀಠ ಆದೇಶ ನೀಡಿ 2 ವರ್ಷ ಕಳೆದಿದೆ. ಆಯೋಗದ ವರದಿಯನ್ನು ಸಚಿವ ಸಂಪುಟ ಅನುಮೋದಿಸಿದೆ. ರಾಜ್ಯಪಾಲರ ಅಂಕಿತವೂ ಸಿಕ್ಕಿದೆ. ಆದರೂ, ಒಳಮೀಸಲಾತಿ ಕಲ್ಪಿಸದೆ ಉದ್ಯೋಗ ನೇಮಕಾತಿಯ ಸುತ್ತೋಲೆ ಹೊರಡಿಸಿರುವುದು ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಎಸಗಿದ ಘೋರ ದ್ರೋಹವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

“ಫೆ.26 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಳೆ ಮೀಸಲಾತಿ ಪ್ರಕಾರವೆ ಎಡಗೈ ಮಾದಿಗ ಸಮುದಾಯಕ್ಕೆ ಮರಣ ಶಾಸನ ಎನಿಸಿದ 56,432 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹೊರಟಿರುವುದು ಅತ್ಯಂತ ಖಂಡನೀಯ. ರಾಜ್ಯದ ಬಹುಸಂಖ್ಯಾತ ಸಮಾಜವಾಗಿರುವ ಎಡಗೈ ಮಾದಿಗ ಸಮಾಜಕ್ಕೆ ಆಡಳಿತ ಸರ್ಕಾರವು ಬಗೆದ ಮಹಾ ದ್ರೋಹವಾಗಲಿದೆ. ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮೂಲೆಗುಂಪು ಮಾಡುವುದು ನಿಶ್ಚಿತ. ಒಳಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿದ್ದ ಕೋಡಿಹಳ್ಳಿ ಆದಿಜಾಂಬವ ಗುರುಪೀಠದ ಷಡಕ್ಷರಮುನಿ ದೇಶೀಕೇಂದ್ರ ಸ್ವಾಮೀಜಿಯವರು ಹಾಗೂ ಪಾದಯಾತ್ರಿಗಳನ್ನು ಬಂಧಿಸಿರುವ ಸರ್ಕಾರದ ಕ್ರಮ ಅಕ್ಷಮ್ಯ” ಎಂದರು.

WhatsApp Image 2026 03 27 at 6.37.20 PM 1

ಕದಸಂಸ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಮಾತನಾಡಿ, “ಒಳ ಮೀಸಲಾತಿ ಜಾರಿಗೊಳಿಸುವ ಕುರಿತು ಚರ್ಚಿಸಿ ಕ್ರಮಕೈಗೊಳ್ಳಲು ಮಾ.27 ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಸಚಿವ ಸಂಪುಟದ ಸಭೆಯನ್ನು ಉಪ ಚುನಾವಣೆಯ ಕುಂಟು ನೆಪ ಹೇಳಿ ಮುಂದೂಡಿರುವುದನ್ನೂ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ತಕ್ಷಣವೆ ಸದರಿ ನೇಮಕಾತಿ ಆದೇಶವನ್ನು ರದ್ದುಪಡಿಸಿ, ಒಳಮೀಸಲಾತಿ ಸಂಪೂರ್ಣವಾಗಿ ಜಾರಿ ಮಾಡಿದ ನಂತರವೇ ಸರ್ಕಾರಿ ಹುದ್ದೆಗಳ ನೇಮಕಾತಿ ಆದೇಶ ಜಾರಿ ಮಾಡಬೇಕು. ಅತಿ ಹಿಂದುಳಿದವರಲ್ಲೆ ಅತಿ ಹಿಂದುಳಿದವರ ಹಿತವನ್ನು ಕಾಯುವ ಮಹತ್ವದ ಕಾಯಕವನ್ನು ಮಾಡಬೇಕೆಂದು ಈ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇವೆ” ಎಂದರು.

ಇದನ್ನೂ ಓದಿ: ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಗಾಂಧಿ ಸರ್ಕಲ್ ನಲ್ಲಿ ಪ್ರತಿಭಟನಾಕಾರರು ಕೆಲ ಸಮಯ ಮಾನವ ಸರಪಳಿ ರಚಿಸಿದರು. ಈ ಸಂದರ್ಭದಲ್ಲಿ ಕೊಕ್ಕನೂರು ಗ್ರಾಮದ ಎಂ.ಎಸ್.ಮಂಜುನಾಥ್, ಆಂಜಿನಪ್ಪ, ಗ್ರಾಪಂ ಸದಸ್ಯ ಹನುಮಂತಪ್ಪ, ಹಿಂಡಸಘಟ್ಟದ ಡಿ.ಎಸ್.ರಮೇಶ್, ಮರಿಯಾ, ಅರುಣ್, ಧನುಷ್, ಗುಳದಹಳ್ಳಿಯ ಮಂಜಪ್ಪ, ಹನುಮಂತ, ಕೆಂಚನಹಳ್ಳಿಯ ಸುರೇಶ್ ಡಿ., ಆನಂದಪ್ಪ, ಚಂದ್ರಪ್ಪ, ನಿಂಗಪ್ಪ, ಕೆಂಚಪ್ಪ, ರಮೇಶ್, ವಾಸನದ ಗದಿಗೆಪ್ಪ ಬಿ., ಹನುಮಂತಪ್ಪ, ಕಡ್ಲೆಗೊಂದಿ ತಿಮ್ಮಣ್ಣ, ಲೋಕೇಶ್, ಕೆ.ಬೇವಿನಹಳ್ಳಿ ವಿಜಯ್ ಕುಮಾರ್, ಭಾನುವಲ್ಳಿಯ ಚೌಡಪ್ಪ ಸಿ.ರಾಜಪ್ಪ, ಜಿಗಳಿಯ ಜಯಪ್ಪ, ಚೌಡಪ್ಪ, ಬೇತೂರು ಹನುಮಂತ, ಪರಶುರಾಮ ಹೊಸಪಾಳ್ಯ, ಮಂಜುನಾಥ ನಡುವಲಕೇರಿ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...