ಹರಿಹರ | ಕಾಲೇಜು ಆವರಣದಲ್ಲಿ ಪಟಾಕಿ ಅಂಗಡಿ ಬೇಡ; ಡಿಎಸ್‌ಎಸ್‌ ಮನವಿ

Date:

ಹರಿಹರ ನಗರದಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಹಾಕಲು ಎಸ್‌ಜೆವಿಪಿ ಕಾಲೇಜು ಆವರಣವನ್ನು ನಿಗದಿಪಡಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಆಗ್ರಹಿಸಿದೆ.

- Advertisement -

ನಗರಸಭೆ ಆಯುಕ್ತರಿಗೆ ನ.06ರಂದು ಮನವಿ ಸಲ್ಲಿಸಿ ಮಾತನಾಡಿದ ಡಿಎಸ್‌ಎಸ್ ತಾಲೂಕು ಸಂಚಾಲಕ ಮಂಜಪ್ಪ ಜಿ.ಎಂ, “ಎಸ್‌ಜೆವಿಪಿ ಕಾಲೇಜು ಅವರಣದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೆಟ್ರೋಲ್ ಬಂಕ್, ವಾಸೋಪಯೋಗಿ ಮನೆಗಳು ಇರುವುದರಿಂದ ಜನದಟ್ಟಣೆ ಹೆಚ್ಚಾಗಿರುತ್ತದೆ, ಇದು ಪಟಾಕಿ ಅಂಗಡಿಗಳಿಗೆ ಹೆಚ್ಚು ಸುರಕ್ಷಿತ ಸ್ಥಳವಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಶೈಕ್ಷಣಿಕವಾಗಿ ಬಳಕೆಯಲ್ಲಿದ್ದು ವಾಣಿಜ್ಯ ಉಪಯೋಗಕ್ಕಾಗಿ ಬಳಸಿರುವುದು ಖಂಡನೀಯ. ಪಟಾಕಿ ಅಂಗಡಿಗಳಿಗೆ ಅನುಮತಿ ಇಲ್ಲಿ ನೀಡದೆ, ಊರಿನ ಹೊರ ವಲಯದಲ್ಲಿಡಲು ಅನುಮತಿ ನೀಡಬೇಕು ಹಾಗೂ ಕೆಲ ಪಟಾಕಿ ಅಂಗಡಿಗಳಿಗೆ ಪರವಾನಿಗೆ ಇಲ್ಲದಿರುವುದು ಕಂಡುಬಂದಿರುವುದರಿಂದ ನಗರಸಭೆ ಆಧಿಕಾರಿಗಳು ಮತ್ತು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವೇಳೆ ಭಾಸ್ಕರ್‌  ಬಿ.ಎಂ, ವಿಶ್ವನಾಥ್ ಕೆ. ಬೇವಿನಹಳ್ಳಿ, ಕೀರ್ತಿ ಎನ್, ಹರೀಶ್ ರಾಜನಹಳ್ಳಿ, ವಿನಾಯಕ ಹಾಗೂ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...