ಪೌರಕಾರ್ಮಿಕರ ಧ್ವನಿಯಾಗಿರುವ ನಾರಾಯಣರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ವಿಧಾನ ಪರಿಷತ್ ಸದಸ್ಯ(ಎಂಎಲ್ಸಿ) ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಅವರು ಒತ್ತಾಯ ಮಾಡಿದ್ದಾರೆ.
ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಅವರು ಹಾವೇರಿಯಲ್ಲಿ ಪ್ರಕಟಣೆಗೆ ತಿಳಿಸಿದ್ದು, “ಕಳೆದ ಮೂರು ದಶಕದಿಂದ ನಾಡಿನ ಪೌರಕಾರ್ಮಿಕರ, ಶೋಷಿತರ ಸಮಾಜದ ಧ್ವನಿಯಾಗಿ ಚಳುವಳಿ ಮೂಲಕ ಗುರುತಿಸಿಕೊಂಡಿರುವ ಕಾಂಗ್ರೆಸ್ನ ನಿಷ್ಠಾವಂತ ಮುಖಂಡ ನಾರಾಯಣ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಂಎಲ್ಸಿ ಸ್ಥಾನ ನೀಡಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ವಿಶ್ವಾಸ ಇಟ್ಟು ಕಾಂಗ್ರೆಸ್ ಸೇರುವವರನ್ನು ತಡೆಯುವುದಿಲ್ಲ: ಡಿಕೆ ಶಿವಕುಮಾರ್
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡು ಸದಾಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡು ರಾಜ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಹಗಲಿರುಳು ದುಡಿದಿದ್ದಾರೆ ಹಾಗೂ ಮಾಜಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿರುವ ಅವರು ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಂತ್ರಿಮಂಡಲದಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ನಾರಾಯಣ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ದೊರಕಿಸಿಕೊಡಬೇಕು” ಎಂದು ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು.