2026-27ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಿರುವ ಸಂಸ್ಥೆಗಳು, ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ವೈಯಕ್ತಿಕ ಪ್ರಶಸ್ತಿ, ವಿಕಲಚೇತನರ ಕ್ಷೇತ್ರದಲ್ಲಿ ವಿಶೇಷ ಶಿಕ್ಷಣ ಪಡೆದ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನವೆಂಬರ್ 06 ರ ಸಂಜೆಯೊಳಗೆ ಸಲ್ಲಿಸಬಹುದು. ಅರ್ಜಿಗಳನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ತಿಳಿಸಿದ್ದಾರೆ.





