ಎಸ್‌ಎಸ್‌ಎಲ್‌ಸಿ ಫಲಿತಾಂಶ; ದಾವಣಗೆರೆ ಜಿಲ್ಲೆಗೆ ಪ್ರಥಮ ರ್ಯಾಂಕ್, ಶೇ 94.64 ಸಾಧನೆ 19ನೇ ಸ್ಥಾನ

Date:

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಏಳು ವಿದ್ಯಾರ್ಥಿಗಳು 625/625 ಅಂಕ ಗಳಿಸಿದ್ದು, ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಯೊಬ್ಬರಿಗೆ ಪ್ರಥಮ ರ್ಯಾಂಕ್ ದೊರೆತಿದ್ದು, ಜಿಲ್ಲೆಗೆ ಈ ಬಾರಿ ಒಟ್ಟಾರೆ ಶೇ. 94.64 ಫಲಿತಾಂಶ ಪಡೆದು 19ನೇ ಸ್ಥಾನದಲ್ಲಿದೆ. ಮದ್ಯ ಕರ್ನಾಟಕದ ಶಿಕ್ಷಣ ಕಾಶಿ ಎಂದೇ ಗುರುತಿಸಿಕೊಂಡಿದ್ದ ದಾವಣಗೆರೆ ಪಿಯುಸಿ ಫಲಿತಾಂಶದಲ್ಲಿ ಯಾವುದೇ ಅಗ್ರ ಶ್ರೇಣಿ ಇಲ್ಲದೇ ಫಲಿತಾಂಶ ಪಡೆದಿತ್ತು. ಹತ್ತನೇ ತರಗತಿ ಫಲಿತಾಂಶದಲ್ಲಿ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಕೊರತೆ ನೀಗಿಸಿಕೊಂಡಿದೆ.‌

- Advertisement -
1004181616
625/625 ಪಡೆದು ಅಗ್ರ ಶ್ರೇಣಿ ಪಡೆದ ವಿದ್ಯಾರ್ಥಿ ಭರತ್

ಈ ಬಾರಿ ಜಿಲ್ಲೆಯಲ್ಲಿ 19823 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದು, 18760 ವಿದ್ಯಾರ್ಥಿಗಳು ವಿವಿಧ ಶ್ರೇಣಿಗಳಲ್ಲಿ ಉತ್ತೀರ್ಣರಾಗಿದ್ದಾರೆ. ಜಿಲ್ಲೆ ಕಳೆದ ಬಾರಿ 78.25 ಫಲಿತಾಂಶ ಪಡೆದಿತ್ತು. ಈ ಬಾರಿ ಉತ್ತಮ ಫಲಿತಾಂಶ ದಾಖಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ, ಶ್ರೀ ವಿದ್ಯಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಭರತ್ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

1004181978
ವಿದ್ಯಾರ್ಥಗೆ ತಂದೆ ತಾಯಿಗಳು, ಶಾಲಾ ಶಿಕ್ಷಕರು ಸಿಹಿ ತಿನ್ನಿಸಿ ಶುಭಾಶಯ ಕೋರಿ ಸಂಭ್ರಮ ವ್ಯಕ್ತಪಡಿಸಿದರು

ಈದಿನ ಡಾಟ್ ಕಾಂ ನೊಂದಿಗೆ ಮಾತನಾಡಿದ ರ್ಯಾಂಕ್ ವಿದ್ಯಾರ್ಥಿ ಜಿ ಭರತ್ “ನಾನು ಅಗ್ರ ಸ್ಥಾನ ಪಡೆಯುವಲ್ಲಿ ನಮ್ಮ ಶಾಲೆಯ ಶಿಕ್ಷಕರು, ಮುಖ್ಯೊಪಾಧ್ಯಾಯರು, ತಂದೆ ತಾಯಿಗಳು ಹಾಗೂ ಸ್ನೇಹಿತರು ಉತ್ತಮ ಸಹಕಾರ ನೀಡಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ಉತ್ತಮ ಬೋಧನೆ ಜೊತೆಗೆ ಆಗಿಂದಾಗ್ಗೆ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ನಮಗೆ ಉತ್ತಮ ಸಲಹೆ ಮತ್ತು ಯಾವ ಯಾವ ಪಠ್ಯಗಳನ್ನು ಹೆಚ್ಚುಹೆಚ್ಚಾಗಿ ಓದಿಕೊಳ್ಳಬೇಕು ಎಂದು ಸಲಹೆ ನೀಡುತ್ತಿದ್ದರು. ಅಲ್ಲದೆ ಮಾದರಿ ಪರೀಕ್ಷೆ ನಡೆಸುತ್ತಿದ್ದರು. ಪ್ರತಿದಿನ ಮುಂಜಾನೆಯಿಂದ ಸಂಜೆವರೆಗೂ ಶಾಲಾ ಅವಧಿ ಹೊರತುಪಡಿಸಿ ಆರೇಳು ಗಂಟೆಗಳ ಅಭ್ಯಾಸ ನಡೆಸುತ್ತಿದೆ. ಮುಂಜಾನೆ ಐದಕ್ಕೆ ಎದ್ದು ಅಭ್ಯಾಸ ನಡೆಸುತ್ತಿದ್ದೆ. ಮುಂದೆ ವಿಜ್ಞಾನ ಅಧ್ಯಯನ ಮಾಡಿ ನಂತರ ನೀಟ್ ಪರೀಕ್ಷೆ ತೆಗೆದುಕೊಳ್ಳುವ ಗುರಿ ಇದೆ” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ ಮಾದರಿ ರಾಜಕಾರಣ; ಎಚ್ಚರಿಕೆ ಕಾಂಗ್ರೆಸಿಗೋ, ಮುಸ್ಲಿಂರಿಗೋ? ಮುಸ್ಲಿಂರ ಮುಂದಿನ ನಡೆಯೇನು?

ವಿದ್ಯಾರ್ಥಿ ತಂದೆ ಗಿರೀಶ್ ಮಾತನಾಡಿ “ಉತ್ತಮ ಫಲಿತಾಂಶದೊಂದಿಗೆ ಶಾಲೆ ಮತ್ತು ತಂದೆ ತಾಯಿಗಳಿಗೆ ಕೀರ್ತಿ ತಂದಿದ್ದಾನೆ. ಅವನ ಸಾಧನೆ ಹೆಮ್ಮೆ ಎನಿಸುತ್ತಿದೆ. ಮುಂದೆ ನೀಟ್ ಪರೀಕ್ಷೆ ಬರೆದು ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಆಶಯವಿದೆ ಅವನ ವಿದ್ಯಾಭ್ಯಾಸಕ್ಕೆ ಬೆಂಬಲವಾಗಿ ಇರುತ್ತೇವೆ” ಎಂದು ಹರ್ಷ ತಿಳಿಸಿದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...