ದಾವಣಗೆರೆ | ಗ್ರಾಮಗಳಿಗೆ ಬಸ್‌ ವ್ಯವಸ್ಥೆಗಾಗಿ ವಿದ್ಯಾರ್ಥಿಗಳ ಆಗ್ರಹ

Date:

ಬಸ್ ಸೇವೆಗೆ ಒತ್ತಾಯಿಸಿ ಜಗಳೂರು ತಾಲೂಕು ಕಚೇರಿ ಬಳಿ ತಾಲೂಕಿನ ಗೌಡಗೊಂಡನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಕರುನಾಡ ನವ ನಿರ್ಮಾಣ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿರಸ್ತೆದಾರ್ ಚಂದ್ರಪ್ಪ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪ್ರತಿಭಟನೆಯಲ್ಲಿ ಮಾತನಾಡಿದ ಕರುನಾಡ ನವ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಮಹಾಲಿಂಗಪ್ಪ ಜೆಎಚ್‌ಎಮ್ ಹೊಳೆ, “ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ಆದರೂ, ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸುಮಾರು ಮೂರು ನಾಲ್ಕು ಕಿಲೋ ಮೀಟರ್ ನೆಡೆದುಕೊಂಡು ಹೋಗುವ ಪರಿಸ್ಥಿತಿ ಇರುವುದು ದುರಂತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಮಾರು 50ರಿಂದ 60 ಜನ ವಿದ್ಯಾರ್ಥಿಗಳು ಪದವಿಪೂರ್ವ, ಪದವಿ, ವೃತ್ತಿಪರ ಶಿಕ್ಷಣ ಪಡೆಯಲು ಪ್ರತಿನಿತ್ಯ ಜಗಳೂರು ಪಟ್ಟಣಕ್ಕೆ ಬರುತ್ತಿದ್ದಾರೆ. ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಇನ್ನಾದರೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಕೇವಲ ಜಗಳೂರು ದಾವಣಗೆರೆ ಮಾರ್ಗದಲ್ಲಿ ಬಸ್ಸುಗಳನ್ನ ಸಂಚಾರ ಒದಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಗಾಣಗಟ್ಟೆ ಮಾರ್ಗದಲ್ಲಿ ಸಂಚಾರ ಮಾಡುವ ಸರ್ಕಾರಿ ಬಸ್ಸನ್ನು ಗೌರಿಪುರ, ಕ್ಯಾಸೆನಹಳ್ಳಿ, ತುಂಬಿನಕಟ್ಟೆ, ಮರಿಕಟ್ಟೆ ಹಾಗೂ ಗೌಡಗೊಂಡನಹಳ್ಳಿ ಮಾರ್ಗದಲ್ಲಿ ಸಂಚಾರ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧ್ಯಾರ್ಥಿ ಜಯಂತ್, ಅಜ್ಜಯ್ಯ, ಮಂಜುನಾಥ್, ಮನು, ಪಾತಲಿಂಗಪ್ಪ, ಮಧು, ಸಂಜನ, ಮೇಘಾನ, ಲತಾ, ಲಕ್ಷ್ಮೀ, ರಮ್ಯಾ, ರೇಖಾ, ಮೇಘಾನ, ಚಂದನ, ಮಧು, ಚೇತನ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...