ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ; ರಾಜ್ಯಮಟ್ಟದಲ್ಲಿ ದಾವಣಗೆರೆ 6ನೇ ಸ್ಥಾನ

Date:

‘ಕೇಂದ್ರ ಸರ್ಕಾರ ನಡೆಸುವ ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯ 2023ರ ವರದಿ ಪ್ರಕಟಗೊಂಡಿದ್ದು, ದಾವಣಗೆರೆ ನಗರವು 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳ ವಿಭಾಗದಲ್ಲಿ ರಾಜ್ಯದಲ್ಲಿ 6ನೇ ಸ್ಥಾನ ಪಡೆದಿದೆ’ ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು.

- Advertisement -

ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

“ದೇಶದ ನಗರಗಳಲ್ಲಿ ಯಾವುದು ಹೆಚ್ಚು ಸ್ವಚ್ಛ ಎಂಬುದನ್ನು ಈ ವರದಿಯು ನಿರ್ಧರಿಸಿದ್ದು, ಕಳೆದ ಬಾರಿ ರಾಜ್ಯ ಮಟ್ಟದಲ್ಲಿ 12ನೇ ಸ್ಥಾನ ಪಡೆದಿದ್ದ ದಾವಣಗೆರೆಯು ಈ ಬಾರಿ 6ನೇ ಶ್ರೇಯಾಂಕ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ” ಎಂದು ಹೇಳಿದರು.

“ರಾಷ್ಟ್ರೀಯ ಮಟ್ಟದಲ್ಲಿ ನಗರವು ಕಳೆದ ಬಾರಿ 220ನೇ ಶ್ರೇಯಾಂಕ ಪಡೆದಿತ್ತು. ಈ ಬಾರಿ 169ನೇ ಶ್ರೇಯಾಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದೆ. ಶಾಸಕರು, ಮೇಯರ್, ಜಿಲ್ಲಾಧಿಕಾರಿ, ಪಾಲಿಕೆಯ ವಿವಿಧ ಸಮಿತಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನಗರವು ಉತ್ತಮ ಶ್ರೇಯಾಂಕ ಪಡೆಯಲು ಸಹಕಾರಿಯಾಗಿದೆ. ಇದೇ ಮೊದಲ ಬಾರಿಗೆ ದಾವಣಗೆರೆ ನಗರಕ್ಕೆ ‘ಸ್ಟಾರ್ ರೇಟಿಂಗ್’ ಕೂಡ ದೊರೆತಿದೆ” ಎಂದು ಮಾಹಿತಿ ಹಂಚಿಕೊಂಡರು.

“ಸಾರ್ವಜನಿಕರು ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪೌರಕಾರ್ಮಿಕರಿಗೆ ನೀಡಬೇಕು. ಎಲ್ಲೆಂದರಲ್ಲಿ ಕಸ ಹಾಕುವವರಿಗೆ ₹500 ರಿಂದ ₹10,000 ದಂಡ ವಿಧಿಸಲು ಅವಕಾಶ ಇದೆ. ರಸ್ತೆಗಳು, ವೃತ್ತಗಳು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವವರಿಗೆ ಪಾಲಿಕೆಯ ಆರೋಗ್ಯ ನಿರೀಕ್ಷಕರು ಸ್ಥಳದಲ್ಲೇ ದಂಡ ವಿಧಿಸಲಿದ್ದಾರೆ” ಎಂದು ತಿಳಿಸಿದರು.

“ನಗರದಲ್ಲಿ ನಿತ್ಯ 170 ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಪಾಲಿಕೆಯಲ್ಲಿ ಕಸ ಸಂಗ್ರಹಿಸುವ 93 ಆಟೊಗಳಿವೆ. ನಗರದ ಜನಸಂಖ್ಯೆಗೆ ಅನುಗುಣವಾಗಿ 150 ಆಟೊಗಳ ಅಗತ್ಯವಿದೆ. ಹಂತ ಹಂತವಾಗಿ ಆಟೊಗಳನ್ನು ಖರೀದಿಸಲಾಗುವುದು. ನಗರದಲ್ಲಿ 1.61 ಲಕ್ಷ ಆಸ್ತಿ ಆನ್‌ಲೈನ್ ಆಗಿದೆ. ನಮೂನೆ 2ನ್ನು ಆನ್‌ಲೈನ್‌ನಲ್ಲೇ ಪಡೆಯಬಹುದಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಿಯಾಂಕ ಗಾಂಧಿ ಹೇಳಿದಂತೆ ಆರನೇ ಗ್ಯಾರಂಟಿ ಜಾರಿಗೆ ತರಬೇಕು; ಬಿಸಿಯೂಟ ತಯಾರಕರ ಆಗ್ರಹ

“ದಾವಣಗೆರೆ ನಗರದಲ್ಲಿ 45,000 ಖಾಲಿ ನಿವೇಶನಗಳಿವೆ. ಖಾಲಿ ನಿವೇಶನಗಳಲ್ಲಿ ಸ್ವಚ್ಛತೆ ಕಾಪಾಡುವುದು ಮಾಲೀಕರ ಜವಾಬ್ದಾರಿಯಾಗಿದೆ. ವರ್ಷಕ್ಕೊಮ್ಮೆ ಕಡ್ಡಾಯವಾಗಿ ಖಾಲಿ ನಿವೇಶನಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಬೇಕು. ಸ್ವಚ್ಛತೆ ಕಾಪಾಡದ ನಿವೇಶನಗಳ ಮಾಲೀಕರಿಗೆ ದಂಡ ವಿಧಿಸಲಾಗುವುದು” ಎಂದು ಎಚ್ಚರಿಸಿದರು.

ಸಬೆಯಲ್ಲಿ ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯರುಗಳಾದ ಅಬ್ದುಲ್ ಲತೀಫ್, ಗಡಿಗುಡಾಳ್ ಮಂಜುನಾಥ್, ಎ ನಾಗರಾಜ್ ಇದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಯ ಎಲ್ಲಾ ಹಗರಣಗಳ ವಿರುದ್ದ ನ.11 ರಂದು ಬೃಹತ್ ಹೋರಾಟ

ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ...

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...