ದೇವನಹಳ್ಳಿ | ಎಲ್ಲ ಸರ್ಕಾರಗಳು ಜನ ವಿರೋಧಿ, ರೈತ ವಿರೋಧಿ: ಬಹುಭಾಷಾ ನಟ ಪ್ರಕಾಶ್ ರಾಜ್

Date:

Advertisements

ಎಲ್ಲ ಸರಕಾರಗಳು ಜನ ವಿರೋಧಿ ಹಾಗೂ ರೈತ ವಿರೋಧಿಯೇ ಆಗಿವೆ. ನಮಗೇನು ಬೇಕು, ಅವರೇ ಬರ್ತಾರೆ, ನೀವು ಸುಮ್ಮನಿರಿ ಎಂಬುದು ಅವರ ಅಹಂಕಾರ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಹೋರಾಟವು 1000 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಧರಣಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ನಾನು ರೈತ ಅಲ್ಲ. ಭೂಮಿ ಜತೆ ಮಾತಾಡ್ತೀನಿ. ರೈತ ನನಗಿಂತ ದೊಡ್ಡೋನು. ರೈತನ ಋಣ ನಮ್ಮ ಮೇಲಿದೆ. ಹಾಗಾಗಿ ಈ ಹೋರಾಟಕ್ಕೆ ಬಂದಿದ್ದೇನೆ. ರೈತರ ಹೋರಾಟ ಎಂದೆಂದಿಗೂ ನಡೆಯುತ್ತಲೇ ಇವೆ. ಇಷ್ಟು ವರ್ಷ ಹೋರಾಟ ನಡೆದರೂ ಇದಕ್ಕೆ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಯಾವ ಅಹಂಕಾರ ಇದನ್ನು ಬದಲಿಸಬೇಕು” ಎಂದು ಪ್ರಶ್ನಿಸುವ ಮೂಲಕ ಸರ್ಕಾರಗಳ ನಡೆಯನ್ನು ಖಂಡಿಸಿದರು.

Advertisements
ಹೋರಾಟ 1

“ಈ ಹಿಂದಿನ ಸರ್ಕಾರ ಅವರು ರೈತರೇ ಅಲ್ಲ. ಹೊಡೆಯಿರಿ ಎಂದು ಹೇಳಿತ್ತು. ಆದರೆ, ನೀವು ಬಂದು ಒಂದು ವರ್ಷದ ಮೇಲಾಯಿತು. ನಿಮ್ಮ ಭರವಸೆ ಎಲೆಕ್ಷನ್ ಗಿಮಿಕ್ ಅಷ್ಟೇ. ಈ ಹೋರಾಟದ ಗೆಲುವು ಮುಖ್ಯ. ನಿಮ್ಮೆಲ್ಲಾ ರಾಜಕಾರಣಿಗಳಿಗೆ ರೈತರು ಮತ ನೀಡುವ ಬಟನ್‌ಗಳಷ್ಟೇ. ಸರಕಾರಗಳು ಭೂಸ್ವಾಧೀನ ಯಾಕೆ ಮಾಡುತ್ತಿವೆ. ನಿಮ್ಮ ಸರಕಾರ ರೈತರಿಗೆ ಕೆಲಸ ಕೊಡುತ್ತಿಲ್ಲ. ಅವರು ಸ್ವಂತ ಕೆಲಸ ಮಾಡಿಕೊಂಡು, ಅವರ ಭೂಮಿ ಜತೆ ಮಾತಾಡಿಕೊಂಡು ಇರುವವರು. ಅವರ ಭವಿಷ್ಯ ನೋಡಿಕೊಳ್ಳುತ್ತಿರುವ. ನಿಮಗೆ ಮತ ನೀಡಿದ್ದಕ್ಕೆ ನಮ್ಮ ಕೆಲಸ ಕಿತ್ತುಕೊಂಡರೆ, ಏನು ಮಾಡೋದು ಎಂಬುದು ಅವರ ಹೋರಾಟ. ಇಂತಹ ಆತಂಕ ಮತ್ತು ಹೋರಾಟದ ಜತೆ ಇಡೀ ರಾಜ್ಯದ ಜನತೆ ನಿಮ್ಮ ಜತೆ ನಿಲ್ಲಬೇಕು” ಎಂದು ಹೇಳಿದರು.

WhatsApp Image 2024 12 30 at 3.45.34 PM

ಫಲವತ್ತಾದ ಭೂಮಿ ಮೇಲೆ ಕೈಗಾರಿಕೆಗಳನ್ನು ಎಲ್ಲಿವರೆಗೆ ಕಟ್ಟುತ್ತಿರಿ. ಹೀಗೆ ಕಟ್ಟಿ ಹೊಟ್ಟೆಗೆ ಏನು ತಿನ್ನುತ್ತೀರಿ. ರೈತರನ್ನು ಗೌರವಿಸಿ, ಅವರನ್ನು ಉಳಿಸದಿದ್ದರೆ ಎಲ್ಲರೂ ನಾಶವೇ ಎಂಬ ಸತ್ಯವನ್ನು ಅರಿತು ಮುಂದೆಜ್ಜೆ ಇಡಬೇಕು ಎಂದು ಹೇಳಿದರು.

ಇದು ಕೇವಲ 23 ಹಳ್ಳಿಗಳ ಭೂ ಸ್ವಾಧೀನ ಸಮಸ್ಯೆ ಅಲ್ಲ. ಈ ಹೋರಾಟದ ಗೆಲುವು ಇಡೀ ಸ್ವಾಧೀನ ಪ್ರತಿಕ್ರಿಯೆಯನ್ನೇ ಬದಲಿಸಬೇಕು. ಸ್ವಾಧೀನ ಮಾಡಿ ನೀವು ಭೂಮಿ ಕೊಡುತ್ತಿರುವುದು ಭವಿಷ್ಯದ ಬಂಡವಾಳಶಾಹಿಗಳಿಗೆ. ಅವರು ಮರ ನೋಡದೆ ತೆಂಗಿನ ಕಾಯಿ ಕೀಳುತ್ತಾರೆ, ಗಿಡ ನೋಡದೇ ದೇವರಿಗೆ ಹೂ ಮುಡಿಸುತ್ತಾರೆ. ಭತ್ತ ನೋಡದೆ ಅನ್ನ ಉಂಡು, ರಾಗಿ ನೋಡದೆ ಮುದ್ದೆ ಹಿಚುಕುತ್ತಾರೆ. ಆದ್ದರಿಂದ, ಅವರಿಗೆ ಭೂಮಿ ಮತ್ತು ರೈತರ ನಡುವಿನ ಸಂಬಂಧ ಅರ್ಥವಾಗುವುದಿಲ್ಲ. ಭೂಮಿ ಎಂಬುದು ರೈತರ ಸ್ವಾಭಿಮಾನ, ಐಡೆಂಟಿಟಿ, ಅವರ ಹೆಮ್ಮೆ, ನಿರಂತರವಾದ ಮಾತು ಮತ್ತು ಸಂಭಾಷಣೆ. ಅದನ್ನೇ ನೀವು ಕಿತ್ತುಕೊಳ್ಳುತ್ತಿರುವುದು ಯಾಕೆ? ಎಂದು ಕೇಳಿದರು.

ಇದನ್ನು ಓದಿದ್ದೀರಾ? ದೇವನಹಳ್ಳಿ | ಸರ್ಕಾರ ಉಳಿಯಬೇಕಾದರೆ ರೈತರ ಮಾತು ಕೇಳಿ: ನಿವೃತ್ತ ನ್ಯಾ.ಗೋಪಾಲ ಗೌಡ ಎಚ್ಚರಿಕೆ

ಇಲ್ಲಿನ ರೈತರು ತಮ್ಮ ತುಂಡು ಭೂಮಿಯಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸರ್ಕಾರ ಅವರಿಗೆ ಕೆಲಸ ಕೊಟ್ಟಿಲ್ಲ. ತಲೆತಲಾಂತರದಿಂದ ಅವರೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಪಟ್ಟಣದವರೆಲ್ಲಾ ರೈತರಾಗಬೇಕಿಲ್ಲ; ಆದರೆ ಸಹಮನುಷ್ಯರು ಹಾಗೂ ರೈತರ ಆತಂಕ, ಕಣ್ಣೀರಿನ ಜೊತೆಗೆ ನಿಲ್ಲಬೇಕಾಗಿರುವುದು ನಮ್ಮ ಕರ್ತವ್ಯ. ಮಾಧ್ಯಮಗಳ ಮೂಲಕ ಈ ದೇಶದ ರಾಜಕಾರಣಿಗಳಿಗೆ ಹಾಗೂ ಪಟ್ಟಣ ನಿವಾಸಿಗಳಿಗೆ ಸಂದೇಶ ನೀಡುವುದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಜೊತೆಗೆ ನಿಲ್ಲುವುದರಿಂದ ನನಗೆ ಗೌರವ ಸಿಗುತ್ತದೆ; ರೈತರ ಋಣ ನನ್ನ ಮೇಲೆ ಇದೆ. ಫಲವತ್ತಾದ ಭೂಮಿ ಮೇಲೆ ಕೈಗಾರಿಕೆ ಕಟ್ಟುತ್ತಾ ಹೋದರೆ, ನೀವು ಮುಂದೆ ಹೊಟ್ಟೆಗೆ ತಿನ್ನುವುದಾದರೂ ಏನು? ರೈತ ನಶಿಸಿದರೆ ನಾವ್ಯಾರೂ ಇರುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X