ದೇವನಹಳ್ಳಿ | ಪೋಕ್ಸೋ ಪ್ರಕರಣದ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ; ಪಿಎಸ್‌ಐ ಜಗದೇವಿಗೆ ಜಾಮೀನು ನಿರಾಕರಿಸಿದ ಕೋರ್ಟ್‌

Date:

ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಠಾಣೆಯ ಮಹಿಳಾ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

- Advertisement -

ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿಯು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಲೋಕಾಯುಕ್ತ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

“ಪೊಕ್ಸೋ ಪ್ರಕರಣದಂತಹ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಲು ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆದು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪಿ ಪಿಎಸ್‌ಐ ನಡೆಯೂ ಅತ್ಯಂತ ಅಮಾನವೀಯ ಹಾಗೂ ಕ್ಷಮಿಸಲು ಸಾಧ್ಯವಾಗದ ಕೃತ್ಯವಾಗಿದೆ. ಸರಕಾರಿ ಅಧಿಕಾರಿಯ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆದೇಶದಲ್ಲಿ ಕಟುವಾಗಿ ಟೀಕಿಸಿದ್ದಾರೆ.

ಏನಿದು ಪ್ರಕರಣ?
ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಿರುವ ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಮಗಳ ಮೇಲೆ ಜಾನ್ಸನ್‌ ಎಂಬುವವನು ಲೈಂಗಿಕ ದೌರ್ಜನ್ಯ ಎಸಗಿದ್ದ ಸಂಬಂಧ ದೂರು ನೀಡಿದ್ದರು. ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿ, ಪ್ರಕರಣದ ಪ್ರತಿ ಹಂತದಲ್ಲಿಯೂ ಸಂತ್ರಸ್ತೆ ತಾಯಿ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಆರೋಪಿ ಜಾನ್ಸನ್‌ನನ್ನು ಕರೆತರಲು ಕಾರು ಬಾಡಿಗೆ ಹಾಗೂ ಇತರೆ ಖರ್ಚುಗಳಿಗೆ 25 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟು ಪಡೆದಿದ್ದರು. ಇದಾದ ಬಳಿಕ ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು 1 ಲಕ್ಷ ರೂ.ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 75 ಸಾವಿರ ರೂ.ಗಳಿಗೆ ಒಪ್ಪಿಕೊಂಡು ಮುಂಗಡವಾಗಿ 5 ಸಾವಿರ ರೂ.ಲಂಚ ಪಡೆದಿದ್ದರು.

ಕಳೆದ ಸೆ.2ರಂದು ದೂರುದಾರೆಗೆ ಕರೆ ಮಾಡಿದ್ದ ಪಿಎಸ್‌ಐ ಬಾಕಿ ಲಂಚ 70 ಸಾವಿರ ರೂ.ಗಳನ್ನು ಠಾಣಾ ಬರಹಗಾರ ಹಾಗೂ ಮತ್ತೊಬ್ಬ ಕಾನ್ಸ್‌ಟೇಬಲ್‌ಗೆ ತಲುಪಿಸುವಂತೆ ಒತ್ತಡ ಹೇರಿದ್ದರು.

ಇದನ್ನು ಓದಿದ್ದೀರಾ? ಹಾಸನ | ವಾಸದ ಮನೆಯಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ

ಅಧಿಕಾರಿಗಳ ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಸೆ.3ರಂದು ಪಿಎಸ್‌ಐ ಜಗದೇವಿ ಪರವಾಗಿ 50 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಠಾಣಾ ಬರಹಗಾರ ಕಾನ್ಸ್‌ಟೆಬಲ್‌ ಅಮರೇಶ್‌ ಅವರನ್ನು ಟ್ರ್ಯಾಪ್‌ ಮಾಡಿ ಬಂಧಿಸಿದ್ದರು. ಮತ್ತೊಬ್ಬ ಆರೋಪಿ ಕಾನ್ಸ್‌ಟೆಬಲ್‌ ಮಂಜುನಾಥ್‌ ಹಾಗೂ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದರು.

ಕಳೆದ 27 ದಿನಗಳಿಂದ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆಹೋಗಿದ್ದರು. ಆದರೆ, ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಕಲಗೂಡು | ನ.26ರಂದು ‘ಸಹಬಾಳ್ವೆ ಉದ್ಯಾನವನ’ ಲೋಕಾರ್ಪಣೆ: ಎ.ಟಿ. ರಾಮಸ್ವಾಮಿ

ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಸಾಮಾಜಿಕ ಸಹಬಾಳ್ವೆಯ ಮಹತ್ವವನ್ನು...

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...

ರಾಯಚೂರು | ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ನೇಮಕ

ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ಅವರನ್ನು ನೇಮಕ...

ಜನರ ಬಳಿಗೆ ಸರ್ಕಾರ: ಪ್ರಜಾಸೇವಾ ಅಭಿಯಾನದಲ್ಲಿ ಅಹವಾಲು ಸ್ವೀಕಾರ

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ...