ದೇವನಹಳ್ಳಿ | ಪೋಕ್ಸೋ ಪ್ರಕರಣದ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ; ಪಿಎಸ್‌ಐ ಜಗದೇವಿಗೆ ಜಾಮೀನು ನಿರಾಕರಿಸಿದ ಕೋರ್ಟ್‌

Date:

ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಠಾಣೆಯ ಮಹಿಳಾ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

- Advertisement -

ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿಯು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಲೋಕಾಯುಕ್ತ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಪೊಕ್ಸೋ ಪ್ರಕರಣದಂತಹ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಲು ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆದು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪಿ ಪಿಎಸ್‌ಐ ನಡೆಯೂ ಅತ್ಯಂತ ಅಮಾನವೀಯ ಹಾಗೂ ಕ್ಷಮಿಸಲು ಸಾಧ್ಯವಾಗದ ಕೃತ್ಯವಾಗಿದೆ. ಸರಕಾರಿ ಅಧಿಕಾರಿಯ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ” ಎಂದು ಆದೇಶದಲ್ಲಿ ಕಟುವಾಗಿ ಟೀಕಿಸಿದ್ದಾರೆ.

ಏನಿದು ಪ್ರಕರಣ?
ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಿರುವ ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಮಗಳ ಮೇಲೆ ಜಾನ್ಸನ್‌ ಎಂಬುವವನು ಲೈಂಗಿಕ ದೌರ್ಜನ್ಯ ಎಸಗಿದ್ದ ಸಂಬಂಧ ದೂರು ನೀಡಿದ್ದರು. ಆರೋಪಿ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ ಭೀಮಾಶಂಕರ್‌ ಸಲೋಟಗಿ, ಪ್ರಕರಣದ ಪ್ರತಿ ಹಂತದಲ್ಲಿಯೂ ಸಂತ್ರಸ್ತೆ ತಾಯಿ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಆರೋಪಿ ಜಾನ್ಸನ್‌ನನ್ನು ಕರೆತರಲು ಕಾರು ಬಾಡಿಗೆ ಹಾಗೂ ಇತರೆ ಖರ್ಚುಗಳಿಗೆ 25 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟು ಪಡೆದಿದ್ದರು. ಇದಾದ ಬಳಿಕ ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು 1 ಲಕ್ಷ ರೂ.ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 75 ಸಾವಿರ ರೂ.ಗಳಿಗೆ ಒಪ್ಪಿಕೊಂಡು ಮುಂಗಡವಾಗಿ 5 ಸಾವಿರ ರೂ.ಲಂಚ ಪಡೆದಿದ್ದರು.

ಕಳೆದ ಸೆ.2ರಂದು ದೂರುದಾರೆಗೆ ಕರೆ ಮಾಡಿದ್ದ ಪಿಎಸ್‌ಐ ಬಾಕಿ ಲಂಚ 70 ಸಾವಿರ ರೂ.ಗಳನ್ನು ಠಾಣಾ ಬರಹಗಾರ ಹಾಗೂ ಮತ್ತೊಬ್ಬ ಕಾನ್ಸ್‌ಟೇಬಲ್‌ಗೆ ತಲುಪಿಸುವಂತೆ ಒತ್ತಡ ಹೇರಿದ್ದರು.

ಇದನ್ನು ಓದಿದ್ದೀರಾ? ಹಾಸನ | ವಾಸದ ಮನೆಯಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ

ಅಧಿಕಾರಿಗಳ ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಸೆ.3ರಂದು ಪಿಎಸ್‌ಐ ಜಗದೇವಿ ಪರವಾಗಿ 50 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಠಾಣಾ ಬರಹಗಾರ ಕಾನ್ಸ್‌ಟೆಬಲ್‌ ಅಮರೇಶ್‌ ಅವರನ್ನು ಟ್ರ್ಯಾಪ್‌ ಮಾಡಿ ಬಂಧಿಸಿದ್ದರು. ಮತ್ತೊಬ್ಬ ಆರೋಪಿ ಕಾನ್ಸ್‌ಟೆಬಲ್‌ ಮಂಜುನಾಥ್‌ ಹಾಗೂ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದರು.

ಕಳೆದ 27 ದಿನಗಳಿಂದ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆಹೋಗಿದ್ದರು. ಆದರೆ, ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ...

ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಎರಡು ದಿನದ ಕ್ರೀಡೆಗೆ ಕೋಟ್ಯಂತರ ರೂಪಾಯಿ; ಅನ್ನದಾತನಿಗೆ ಅಲ್ಪ ಪರಿಹಾರ! ದಸರಾ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...