ಉಡುಪಿ | ದೇವನಹಳ್ಳಿ ರೈತರ ಮೇಲೆ ಪೋಲಿಸ್ ದೌರ್ಜನ್ಯ ಖಂಡಿಸಿ ಕುಂದಾಪುರದಲ್ಲಿ ಪ್ರತಿಭಟನೆ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ 1777 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತದ ಭೂಸ್ವಾದೀನ ವಿರೋದಿಸಿ ಪ್ರತಿಭಟನಾ ನಿರತ ರೈತರು, ರೈತ ಕಾರ್ಮಿಕ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಕುಂದಾಪುರ ತಾಲುಕು ಸಮಿತಿ ಇಂದಿಲ್ಲಿ ಶಾಸ್ತ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸುವ ಮುಖಾಂತರ ಖಂಡಿಸಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖಂಡರಾದ ಎಚ್ .ನರಸಿಂಹ ರಾಜ್ಯದ ಮುಖ್ಯಮಂತ್ರಿ ಆಗುವ ಮುನ್ನ ರೈತರ ಹೋರಾಟ ಬೆಂಬಲಿಸಿ ಭರವಸೆ ನೀಡಿದ ಸಿದ್ದರಾಮಯ್ಯನವರು ಇದೀಗ ಕಾರ್ಪೊರೇಟ್ ಕಂಪನಿಗಳ ಪರ ವಹಿಸಿದ್ದಾರೆ. ರೈತರಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದರು.

1005964098

ಪಕ್ಷದ ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ದೇಶದಾದ್ಯಂತ ಸಿಪಿಎಂ ಜನರ ಸಮಸ್ಯೆಗಳನ್ನು ಪರಿಹರಿಸಲು ದೇಶದಾದ್ಯಂತ ಪ್ರಚಾರಾಂದೋಲನ ನಡೆಸುತ್ತಿದೆ. ಕೇಂದ್ರ ಸರ್ಕಾರದ ಕಾರ್ಪೋರೇಟ್ ಪರವಾದ ನೀತಿಗಳು ಬೆಲೆ ಏರಿಕೆ, ನಿರುದ್ಯೋಗ ವ್ಯಾಪಕಗೊಳ್ಳುತ್ತಿದೆ ಈ ನೀತಿಗಳು ಗ್ರಾಮೀಣ,ನಗರಗಳ ಅಭಿವೃದ್ಧಿಗಳ ಹಾಗೂ ಜನಜೀವನದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಈ ಹಿನ್ನೆಲೆಯಲ್ಲಿ ಸಿಪಿಎಂ ಪಕ್ಷವು ಸ್ಥಳೀಯ ಬೇಡಿಕೆಗಳನ್ನು ಸರಕಾರಗಳ ಮುಂದೆ ಮಂಡಿಸುತ್ತಿದೆ ಎಂದು ಹೇಳಿದ ಅವರು ತಾಲೂಕಿನ ಸರ್ವತೋಮುಖ ಅಭಿವೃದ್ದಿ ದೃಷ್ಟಿಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಸ್ ಮಾರ್ಗಗಳನ್ನು ರಾಷ್ಟ್ರೀಕರಣ ಗೊಳಿಸಬೇಕು. ಮಹಿಳೆಯರು, ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆ ದೊರೆಯುವಂತಾಗಬೇಕು, ಕುಂದಾಪುರದಿಂದ ಬೆಂಗಳೂರಿಗೆ ಹೆಚ್ಚುವರಿ ರೈಲು ಓಡಿಸಲು, ಎಲ್ಲ ಗ್ರಾಮದಲ್ಲೂ ಸುಸಜ್ಜಿತ ಆರೋಗ್ಯ ಕೇಂದ್ರ ತೆರೆಯಲು, ತಾಲೂಕಿನಾದ್ಯಂತ ಸರಕಾರಿ ಪಿಯುಸಿ, ಪದವಿ, ಡಿಪ್ಲೊಮಾ ಕಾಲೇಜು ಆರಂಭಿಸಲು ಒತ್ತಾಯಿಸಿದರು. ಈ ಮೂಲಕ ಖಾಸಗಿ ಬಸ್, ಖಾಸಗಿ ಆಸ್ಪತ್ರೆಗಳ, ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿ ತಡೆಯಬೇಕಾಗಿದೆ. ಪುರಸಭೆಯ ಒಳಚರಂಡಿ ಯೋಜನೆ ಶೀಘ್ರ ಪೂರ್ಣ ಗೊಳಿಸಲು ಹಾಗು ಪುರಸಭೆ ನಲ್ಲಿ ನೀರಿನ ನಿರ್ವಹಣೆ ಪುರಸಭೆಯೇ ಮಾಡಬೇಕು ಎಂಬುದಾಗಿ ಒತ್ತಾಯಿಸಿದರು.

Advertisements

ಕಾರ್ಯಕ್ರಮದ ನೇತೃತ್ವವನ್ನು ಪಕ್ಷದ ಮುಖಂಡರಾದ ಸುರೇಂದ್ರ, ಚಿಕ್ಕಮೊಗವೀರ, ರವಿ ವಿ ಎಂ, ಲಕ್ಷಣ ಡಿ, ಪ್ರಕಾಶ್ ಕೋಣಿ, ಚಂದ್ರ ಪೂಜಾರಿ ವಹಿಸಿದ್ದರು.
ಪಕ್ಷದ ಹಿರಿಯ ಮುಖಂಡರಾದ ಕೆ ಶಂಕರ್, ಮಹಾಬಲ ವಡೇರ ಹೋಬಳಿ ಉಪಸ್ಥಿತರಿದ್ದರು ಜಿಲ್ಲಾ ಸಮಿತಿ ಸದಸ್ಯರಾದ ಸುರೇಂದ್ರ ಎಚ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X