ದೇವನಹಳ್ಳಿ ಸರ್ಕಾರಿ ಶಾಲೆಯ ಕಿಟಕಿ ಮುರಿದುಬಿದ್ದು ವಿದ್ಯಾರ್ಥಿಗಳಿಗೆ ಗಾಯ: ಸಚಿವ ಮುನಿಯಪ್ಪ ಭೇಟಿ

Date:

Advertisements

ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿಧ್ಯಾರ್ಥಿಗಳು ಗಾಯಗೊಂಡಿದ್ದರು.

ಮೂವರಲ್ಲಿ ಭುವನ್ ಎಂಬ ವಿದ್ಯಾರ್ಥಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದರ್ಶನ್ ಎಸ್ ಎಂ ಎಂಬ ವಿದ್ಯಾರ್ಥಿ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ನೀಡಲು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಪಂಚಾಯತಿ ಸದಸ್ಯರಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ ಬಿ ಬಸವರಾಜು, ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ಶಾಲಾ ಶಿಕ್ಷಣ ಉಪನಿರ್ದೇಶಕರಾದ ಡಾ.ನಟರಾಜ್, ಇಲಾಖೆಯ ಬೈಲಾಂಜನಪ್ಪ ಪಿ, ವೈದ್ಯಾಧಿಕಾರಿ ದೀಪಕ್ ಹಾಗೂ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X