ದೇವರ ಹಿಪ್ಪರಗಿ | ಭಾರೀ ಮಳೆಯಿಂದ ಬೆಳೆಹಾನಿ; ಶೀಘ್ರ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

Date:

ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಪ್ರತಿ ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಬಹುತೇಕ ಬೆಳೆಗಳು ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಕೊಡಬೇಕೆಂದು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಗ ಹಾಗೂ ಹಸಿರು ಸೇನೆಗಳು ಆಗ್ರಹಿಸಿವೆ.

- Advertisement -

ದೇವರ ಹಿಪ್ಪರಗಿ ತಾಲೂಕು ದಂಡಧಿಕಾರಿ ಪ್ರಕಾಶ ಸಿಂದಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಗಳ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, “ವಿಪರೀತ ಮಳೆಯಿಂದಾಗಿ ತೊಗರಿ, ಹತ್ತಿ, ಮೆಕ್ಕೆಜೋಳ, ಸಜ್ಜೆ, ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳು ಹಾಳಾಗಿವೆ. ಆದ್ದರಿಂದ ಯಾವುದೇ ಜಂಟಿ ಸಮೀಕ್ಷೆ, ವೈಮಾನಿಕ ಸಮೀಕ್ಷೆ ಎಂದು ನೆಪ ಹೇಳದೆ 15 ದಿನಗಳ ಒಳಗಾಗಿ ಜಿಲ್ಲೆಯ ಎಲ್ಲರಿಗೂ ಪರಿಹಾರ ನೀಡಲೇಬೆಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ತಾಲೂಕು ಅಧ್ಯಕ್ಷ ಈರಪ್ಪ ಕುಳೆಕುಮಟಗಿ ಮಾತನಾಡಿ, “ಭೀಮೆ, ಕೃಷ್ಣಾ ಹಾಗೂ ದೋಣಿಯ ಪ್ರವಾಹದಿಂದಾಗಿ ಸಾಕಷ್ಟು ರೈತರ ಕೃಷಿ ಭೂಮಿಗಳ ಬೆಳೆಗಳು ಹಾಳಾಗಿರುವ ಜೊತೆಗೆ ಮನೆ ಮಠಗಳು ಕೂಡ ಬಿದ್ದಿರುವ ಉದಾಹರಣೆಗಳಿವೆ ಜೊತೆಗೆ ಹಲವಾರು ಪ್ರಾಣಿಗಳು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಇದಕ್ಕೆಲ್ಲ ಪರಿಹಾರ ನೀಡಬೇಕೆಂದು ಆಗ್ರಹ ಮಾಡುತ್ತಿದ್ದೇವೆ ಒಂದು ವೇಳೆ ತಡವಾದರೆ ಉಗ್ರ ಹೋರಾಟ ಮಾಡಲಾಗುವುದು” ಎಂದರು.

ಇದನ್ನೂ ಓದಿ: ವಿಜಯಪುರ | ನೆರೆ ಹಾವಳಿ ವೀಕ್ಷಿಸಿದ ಬಿಜೆಪಿ ತಂಡ

ಬಸಗೊಂಡಪ್ಪ ಉಮ್ರಾಣಿ ಮಾತನಾಡಿ, “ದೇವರ ಹಿಪ್ಪರಗಿ ತಾಲೂಕಿನ ಎಲ್ಲಾ ರೈತರ ಜಮೀನಿನ ಸಮಸ್ತ ಬೆಳೆಗಳು ಕೂಡ ನಷ್ಟಗೊಂಡಿರುವ ಹಿನ್ನೆಲೆಯಲ್ಲಿ ಯಾರಿಗೂ ತಾರತಮ್ಯ ಮಾಡದೆ ಎಲ್ಲರಿಗೂ ನಷ್ಟ ಪರಿಹಾರವನ್ನು ನೀಡಬೇಕು. ಜತೆಗೆ ಫಸಲು ಭೀಮಾ ಯೋಜನೆಯ ವಿಮೆಯನ್ನೂ ಆದಷ್ಟು ಬೇಗನೆ ಕೊಡಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಕಾರ್ಯಾಧ್ಯಕ್ಷ ಪ್ರಕಾಶ ತೇಲಿ, ದೇವರ ಹಿಪ್ಪರಗಿ ತಾಲೂಕ ಗೌರವಾಧ್ಯಕ್ಷ ಶಿವಾನಂದಯ ಹಿರೇಮಠ, ಮಹಿಳಾ ಘಟಕದ ಅಧ್ಯಕ್ಷೆ ಗಿರಿಜಾ ಮೈತ್ರಿ, ಸುನಂದ ಸೊನ್ನಳ್ಳಿ, ಅಂಬವ್ವ ಬಿರಾದಾರ, ಎಂ ಡಿ ಮನಹಳ್ಳಿ, ರಮೇಶ್ ಚಾಂದ ಕವಟಗಿ, ಸಂಗಪ್ಪಗೌಡ ಬಿರಾದಾರ, ಶಿವಪ್ಪ ತಾಳಿಕೋಟಿ, ಮಹಾಂತಪ್ಪ ಸುಂಬಡ, ಕಾಶೀನಾಥ ಬಿರಾದಾರ್, ಪುಜಪ್ಪ ಗುಡ್ಡಳ್ಳಿ, ಅಶೋಕ್ ಬಿರಾದಾರ, ಸಿದ್ದಪ್ಪ ಪೂಜಾರಿ, ಶಿವಶಂಕರ ಬಿರಾದಾರ, ಶಿಖಂದರ್ ತೋನಶ್ಯಾಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...