ದೇವರಹಿಪ್ಪರಗಿ | ಅತಿವೃಷ್ಟಿಯಿಂದ ಬೆಳೆ ನಾಶ: ಎಕರೆಗೆ ₹25,000 ಪರಿಹಾರಕ್ಕಾಗಿ ರೈತರ ಮನವಿ

Date:

Advertisements

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ರೈತರಿಗೆ ಎಕರೆಗೆ ₹25,000 ನೀಡುವಂತೆ ಆಗ್ರಹಿಸಿ ರಾಷ್ಟ್ರೀಯ ರೈತರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಪ್ರಕಾಶ್ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯಕ್ಕೆ ಆಗಮಿಸಿದ ರಾಷ್ಟ್ರೀಯ ರೈತರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತಾಲೂಕಿನ ಎಲ್ಲ ಹಳ್ಳಿಗಳಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಜಲಾವೃತವಾಗಿ ಹಾನಿಗೊಳಗಾದ ಬಗ್ಗೆ ತಹಶೀಲ್ದಾರರ ಗಮನ ಸೆಳೆದರು.

ರಾಜ್ಯ ಮಹಿಳಾ ಕಾರ್ಯದರ್ಶಿ ರೇಣುಕಾ ಪಾಟೀಲ ಮಾತನಾಡಿ, “ತೊಗರಿ ಬೆಳೆ ನೆಟೆ ರೋಗದಿಂದ, ಹತ್ತಿ ಬೆಳೆಗೆ ತಾಮ್ರ ರೋಗ ಹಾಗೂ ಕಾಂಡ ಕೊರೆಯುವ ಹುಳದ ಕಾರಣ ಹಾಗೂ ಮೆಕ್ಕೆಜೋಳ, ಹೆಸರು, ಉದ್ದು, ಅಲಸಂದಿ, ಶೇಂಗಾ, ಉಳ್ಳಾಗಡ್ಡಿ ಬೆಳೆಗಳು ಜಲಾವೃತವಾಗಿ ಸಂಪೂರ್ಣ ಹಾಳಾಗಿವೆ. ಬಿತ್ತಿದ ಬೆಳೆ ನಾಶದಿಂದ ಈಗ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ತಹಶೀಲ್ದಾರ್ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ಕೆಎಂಎಫ್‌ ಶಿಮುಲ್‌ನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್, “ತಾಲೂಕಿನಲ್ಲಿ ಈಗಾಗಲೇ ಹಾನಿಗೊಳಗಾದ ಬೆಳೆಯ ಸಮೀಕ್ಷೆ ಮಾಡಲಾಗಿದೆ. ಈಗ ನಿಮ್ಮ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು”‌ ಎಂದು ಭರವಸೆ ನೀಡಿದರು.

ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸಂಗಮೇಶ ಹುಣಸಗಿ, ಹಣಮಂತರಾಯ ಪೋ. ಪಾಟೀಲ, ಅಶೋಕ ನಾಯ್ಕೋಡಿ, ಆಕಾಶ ಹುಲಸೂರ, ಅಕ್ಬರ್ ಅರಬ್, ಬಸವರಾಜ ಮಾರಾಠಿ, ಗಣೇಶ ಕನ್ನಳ್ಳಿ, ಶಕೀರ ಹೆಬ್ಬಳ್ಳಿ, ಅಡಿವೆಪ್ಪ ಬನ್ನಿಕಟ್ಟಿ, ಪ್ರವೀಣ ಹರಸುರ, ಶಿವಾನಂದ ಹೂಲ್ಲಾಸೂರ, ಅಂಬಾಜಿ ಮರಾಠಿ, ಕಲ್ಲಪ್ಪ ಗೌಡ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X