ದೇವರ ಹಿಪ್ಪರಗಿ | ವಿವಿಧತೆಯಲ್ಲಿ ಏಕತೆ ಸಂದೇಶ ಸಾರಿದ ಅಂತರ್ ಧಾರ್ಮಿಕ ಸಮ್ಮೇಳನ

Date:

ವಿಜಯಪುರ ಜಿಲ್ಲೆಯ ಜೆಎಂಜೆ ಸಾಮಾಜಿಕ ಸೇವಾ ಕೇಂದ್ರ ದೇವರಹಿಪ್ಪರಗಿ ಘಟಕದ ವತಿಯಿಂದ ವೈವಿಧ್ಯದಲ್ಲಿ ಏಕತೆ ಎಂಬ ವಿಷಯದ ಮೇಲೆ ಅಂತರ್ ಧಾರ್ಮಿಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು.

- Advertisement -

ಮಾನವಕುಲವನ್ನು ಒಗ್ಗೂಡಿಸುವ ಹಾಗೂ ಸಾಮಾನ್ಯ ಮೌಲ್ಯಗಳನ್ನು ಆಳವಾಗಿ ಚರ್ಚಿಸುವ ಉದ್ದೇಶದಿಂದ ವಿವಿಧ ಧರ್ಮಗಳ ಧಾರ್ಮಿಕ ನಾಯಕರು, ಸಾಮಾಜಿಕ ಕಾರ್ಯಕರ್ತರು, ಶಿಕ್ಷಕರು, ಯುವಕರು ಹಾಗೂ ಸ್ಥಳೀಯ ಸಮುದಾಯದ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ವಿಭಿನ್ನ ಧರ್ಮಗಳ ನಡುವೆ ಬಾಂಧವ್ಯ, ಅರಿವು ಮತ್ತು ಸಂವಾದವನ್ನು ಉತ್ತೇಜಿಸುವುದು. ಸಮುದಾಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಗೌರವವನ್ನು ಬೆಳೆಸುವುದು, ಎಲ್ಲ ಪ್ರಮುಖ ಧಾರ್ಮಿಕ ಪರಂಪರೆಗಳಲ್ಲಿರುವ ಸಾಮಾನ್ಯ ನೈತಿಕ ಮೌಲ್ಯಗಳನ್ನು ಹೈಲೈಟ್ ಮಾಡುವುದು, ಯುವ ಹೆಜ್ಜೆ ಗುರುವರಿಗೆ ಏಕತೆಯ ರಾಯಭಾರಿಗಳಾಗಲು ಪ್ರೇರೇಪಣೆ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಇಂದಿನ ವಿಭಜನೆಯ ಜಗತ್ತಿನಲ್ಲಿ ಅಂತರ್ ಧಾರ್ಮಿಕ ಸಂವಾದದ ಅಗತ್ಯತೆಯನ್ನು‌ ಮುಖಂಡರು ಒತ್ತಿ ಹೇಳಿದರು.

ಮುಸ್ಲಿಂ ಪ್ರತಿನಿಧಿ ಬೇಗಮ್ ಬಿಜಾಪುರ್, ಸ್ವಾಮೀಜಿ ಸತೀಶ ಮತ್ತು ಪ್ರಾಂತಾಧಿಕಾರಿ ತ್ರೆಸಿಯಮ್ಮ ತಮ್ಮ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಶಾಂತಿ ಗೀತೆಗಳು, ಭಾರತದ ಸಂವಿಧಾನದ ಪ್ರಸ್ತಾವಿಕೆಯ ಪಠಣ, ವೈವಿಧ್ಯದಲ್ಲಿ ಏಕತೆಯ ಮಹತ್ವದ ಕುರಿತು ಚಿಂತನೆಗಳ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಉಲ್ಲಾಸ ಮತ್ತು ಭರವಸೆಯನ್ನು ನೀಡಲಾಯಿತು.

ಇದನ್ನೂ ಓದಿ: ವಿಜಯಪುರ | ಸೂಕ್ತ ಪರಿಹಾರ ನೀಡುವುದಾಗಿ ಅಧಿಕಾರಿಗಳ ಭರವಸೆ: ಧರಣಿ ಹಿಂಪಡೆದ ನಿರಾಶ್ರಿತರು

ಭಗವದ್ಗೀತೆ, ಪವಿತ್ರ ಬೈಬಲ್, ಪವಿತ್ರ ಕುರಾನ್ ಧಾರ್ಮಿಕ ಸಂದೇಶಗಳನ್ನು ಪಠಿಸಿ ಶಾಂತಿ, ಏಕತೆ ಮತ್ತು ಪರಸ್ಪರ ಗೌರವ ಸೇರಿದಂತೆ ಮಾನವೀಯ ಮೌಲ್ಯಗಳನ್ನು ಒತ್ತಿ ಹೇಳಲಾಯಿತು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಮಕ್ಕಳು, ಯುವಕರು, ದೇವದಾಸಿ ಮಹಿಳೆಯರು, ಹೊಲಿಗೆ ತರಬೇತಿ ವಿದ್ಯಾರ್ಥಿಗಳು ಹಾಗೂ HIV ಸಹಾಯ ಗುಂಪಿನ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...