ದೇವದುರ್ಗ | ರಾಜಾರೋಷ ಅವ್ಯವಹಾರ ಪ್ರಶ್ನಿಸಿದಕ್ಕೆ ಶಾಸಕಿ ಬೆಂಬಲಿಗರಿಂದ ಬೆದರಿಕೆ; ವಿಶ್ವನಾಥ ಆರೋಪ

Date:

ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ ನಡೆಯುತ್ತಿದ್ದು, ಇದರಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಮುಂದಾದಾಗ ಶಾಸಕಿ ಕರೆಮ್ಮ ನಾಯಕ ಅವರ ಬೆಂಬಲಿಗರಿಂದ ಜೀವ ಬೆದರಿಕೆ ಕರೆಗಳು ಹಾಗೂ ಸಂದೇಶಗಳು ಬರುತ್ತಿವೆ ಎಂದು ಭೀಮ್ ಆರ್ಮಿಯ ದೇವದುರ್ಗ ತಾಲೂಕು ಅಧ್ಯಕ್ಷ ವಿಶ್ವನಾಥ ಬಲ್ಲಿದೇವ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಅವರಿಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ,2023-24ನೇ ಸಾಲಿನ ಕಾಮಗಾರಿಗಳನ್ನು ಇನ್ನೂ ಪೂರ್ಣಗೊಳಿಸುತ್ತಿಲ್ಲ. ಕೆಲವು‌ ಕಾಮಗಾರಿಗಳು ಪೂರ್ಣಗೊಂಡರೂ ಕಳಪೆ ಮಟ್ಟದ್ದಾಗಿದೆ. ಈಗಲೂ ದೇವದುರ್ಗ ತಾಲೂಕಿನ ಅನೇಕ ಗ್ರಾಮಗಳಲ್ಲಿ ಶೌಚಾಲಯಗಳಿಲ್ಲದೇ ಮಹಿಳೆಯರು ಪರದಾಡುವಂತ ಸ್ಥಿತಿ ಇದೆ. ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಈ ರೀತಿಯ ಅಭಿವೃದ್ಧಿ ವಿಚಾರದ ಬಗ್ಗೆ ಪ್ರಶ್ನೆ ಮಾಡಿದರೆ ಶಾಸಕಿಯ ಬೆಂಬಲಿಗರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈಗಾಗಲೇ ಬೆದರಿಕೆ ಕರೆಗಳ ಕುರಿತು ಎಸ್‍ಪಿ, ಡಿಜಿಪಿ ಹಾಗೂ ಸಭಾಧ್ಯಕ್ಷರಿಗೆ ದೂರು ನೀಡಲಾಗಿದೆ. ಭರವಸೆಗಳನ್ನು ಈಡೇರಿಸುವವರೆಗೂ ಹೋರಾಟ ನಡೆಸುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಾನ್ವಿ | ಗಿಡಗಂಟಿಗಳ ಕಾಡಾಗಿ ಬದಲಾದ ಕುರ್ಡಿ ಶಾಲಾ ಆವರಣ; ಪೋಷಕರ ಆಕ್ರೋಶ

ಈ ಸಂದರ್ಭದಲ್ಲಿ ಪ್ರಮುಖರಾದ ದೀಪಕ್ ಭಂಡಾರಿ, ಬಾಬಾಖಾನ್, ಎಚ್‍ಎಂ ಬಾಬು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...