ಮೈಸೂರು | ಓದುವ ಆಸಕ್ತಿಯಿಂದ ಬೌದ್ಧಿಕ ಮತ್ತು ಭಾವನಾತ್ಮಕ ವಿಕಾಸ

Date:

ಬೌದ್ಧಿಕ ಮತ್ತು ಭಾವನಾತ್ಮಕ ವಿಕಾಸದ ಮೂಲಕ ‘ಮನೋವಿಕಾಸ’ಕ್ಕೆ ನೆರವಾಗುವ ಸಾಹಿತ್ಯಾತ್ಮಕ ಪುಸ್ತಗಳನ್ನೂ ಹೆಚ್ಚು ಹೆಚ್ಚು ಓದುವ ಆಸಕ್ತಿ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಗ್ರಂಥಾಲಯದಲ್ಲಿನ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಇರುವ ಪುಸ್ತಕಗಳನ್ನು ಓದುವುದಕ್ಕಷ್ಟೇ ಸೀಮಿತವಾಗಬಾರದು ಎಂದು ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ ಸತೀಶ್ ಜವರೇಗೌಡ ಕರೆ ನೀಡಿದರು.

- Advertisement -

ಮೈಸೂರು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಮೈಸೂರು ನಗರ ಕೇಂದ್ರ ಗಂಥಾಲಯದ ಕುವೆಂಪು ನಗರ ಶಾಖೆಯಲ್ಲಿ ಗುರುವಾರ ನಡೆದ ‘ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ’ದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಸಾಹಿತ್ಯದ ವಿವಿಧ ಪ್ರಕಾರದ ಪುಸ್ತಕಗಳನ್ನು ಓದುವುದರಿಂದ ಪ್ರಬುದ್ಧ ಚಿಂತನೆ ಮತ್ತು ವೈಚಾರಿಕತೆಯ ಮನೋಭಾವ ಲಭಿಸುತ್ತದೆ” ಎಂದರು.

IMG 20241121 WA0037

“ಪ್ರಸ್ತುತ ಗ್ರಂಥಾಲಯವಿರುವುದು ನಿವೃತ್ತರಿಗೆ, ಗೃಹಿಣಿಯರಿಗೆ, ವೃದ್ಧರಿಗೆ ಮಾತ್ರವೆಂದು ತಪ್ಪಾಗಿ ಭಾವಿಸಲಾಗಿದೆ. ನಮ್ಮ ಮನದಲ್ಲಿನ ಮೌಢ್ಯತೆಯ ಕತ್ತಲನ್ನು ದೂಡಿ, ಬದುಕನ್ನು ಹಸನುಗೊಳಿಸುವ ಗ್ರಂಥಾಲಯದ ಒಡನಾಟ ಎಲ್ಲ ವಯೋಮಾನದವರಿಗೂ ತುಂಬ ಅಗತ್ಯವಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಯುವಜನರು, ಸರ್ಕಾರಿ ಉದ್ಯೋಗಾಂಕ್ಷಿಗಳು ನಿತ್ಯವೂ ಗ್ರಂಥಾಲಯಕ್ಕೆ ತೆರಳಿ ಓದುವ ಹವ್ಯಾಸವನ್ನು ‘ಒಂದು ಜೀವನ ಕ್ರಮ’ವಾಗಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ರಂಜನೆ ಮತ್ತು ಬೋಧನೆಯ ಗುರಿಯನ್ನು ಹೊಂದಿರುವ ಸಾಹಿತ್ಯದ ಪುಸ್ತಕಗಳಿಗಾಗಿ ಮನೆಯಲ್ಲಿ ಒಂದು ಕೊಠಡಿಯನ್ನು ಮೀಸಲಿಡುವ ಪರಿಪಾಠ ಜನತೆಯಲ್ಲಿ ಒಡಮೂಡಬೇಕು. ಈ ನಿಟ್ಟಿನಲ್ಲಿ ಹೊಸದಾಗಿ ಮನೆ ನಿರ್ಮಾಣ ಮಾಡುವಾಗ ಅಡುಗೆ ಮನೆ, ದೇವರ ಕೋಣೆ, ಶೌಚಾಲಯ, ಹೋಮ್ ಥಿಯೇಟರ್‌ಗೆ ನೀಡುವಷ್ಟೇ ಆದ್ಯತೆಯನ್ನು ‘ಮನೆ ಕಿರು ಗ್ರಂಥಾಲಯ’ಕ್ಕೂ ನೀಡುವ ಮೂಲಕ ಕುಟುಂಬದ ಎಲ್ಲ ಸದಸ್ಯರಲ್ಲೂ ‘ಓದುವ ರುಚಿ’ ಹತ್ತಿಸಬೇಕು” ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಸಚಿವ ಬಸವಾರಾಧ್ಯ ಮಾತನಾಡಿ, “ಜಿಲ್ಲೆಯ ಬಹುತೇಕ ಗ್ರಂಥಾಲಯಗಳು ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. ಇದನ್ನು ನಿವಾರಿಸುವ ದಿಕ್ಕಿನಲ್ಲಿ ಓದುಗರು ಪ್ರಯತ್ನಿಸಬೇಕು. ಇರುವುದರಲ್ಲಿ ಕುವೆಂಪುನಗರ ಗ್ರಂಥಾಲಯ ಶಾಖೆ ಎಲ್ಲ ಸೌಲಭ್ಯಗಳನ್ನು ಹೊಂದಿದ್ದು, ಇಲ್ಲಿನ ಸಿಬ್ಬಂದಿಯ ಕಾಳಜಿಯಿಂದ ಅಚ್ಚುಕಟ್ಟಾಗಿ ನಿರ್ವಹಣೆಯಾಗುತ್ತಿದೆ” ಎಂದು ಶ್ಲಾಘಿಸಿದರು.

ಇದನ್ನು ಓದಿದ್ದೀರಾ? ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ

ಸಮಾರಂಭದ ಅಧ್ಯಕ್ಷತೆಯನ್ನು ಕುವೆಂಪುನಗರ ಶಾಖಾ ಗ್ರಂಥಾಲಯ ಅಭಿವೃದ್ಧಿ ಸಮಿತಿಯ ಸದಸ್ಯ ಎ ಜಿ ದೇವರಾಜು ವಹಿಸಿದ್ದರು. ಟಿಟಿಎಲ್ ಕಾಲೇಜಿನ ಉಪನ್ಯಾಸಕ ಶಿವಶಂಕರ್ ಸ್ಪರ್ಧಾ ವಿಹೇತರಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಶಾಖಾ ಗ್ರಂಥಾಲಯದ ಪ್ರಧಾನ ಧಾರಕ ಹೆಚ್ ವಿ ರಮೇಶ್, ಸಾಹಿತಿಗಳಾದ ಮೋಹನ್ ಪಾಳೇಗಾರ್, ಕೂಡ್ಲಾಪುರ ಮಹದೇವನಾಯಕ, ಸಂಶೋಧಾನಾರ್ಥಿ ಎನ್ ನವೀನ್ ಕುಮಾರ್‌ ಇದ್ದರು.

ಈ ವೇಳೆ ಮೈಸೂರು ವಿವಿಯ ನಿವೃತ್ತ ಉಪಕುಲ ಸಚಿವ ಬಸಾರಾಧ್ಯ, ನಿವೃತ್ತ ಪ್ರಾಂಶುಪಾಲ ಮಲ್ಲಿಕಾರ್ಜುನ ಪಂಡಿತ, ಲೆಕ್ಕ ಪರಿಶೋಧಕ ಶಿವಾನಂದ ಅವರಿಗೆ ‘ಉತ್ತಮ ಗ್ರಂಥಾಲಯ ಪೋಷಕರು ಹಾಗೂ ಓದುಗರು’ ಎಂದು ಗುರುತಿಸಿ ಗೌರವಿಸಲಾಯಿತು. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಕೆ ಎಂ ಉಮೇಶ್(ಪ್ರಥಮ), ಎಂ ಬಿ ರವಿ(ದ್ವಿತೀಯ), ಎನ್ ಲಿಖಿತ್ ರಾಜ್(ತೃತೀಯ) ಬಹುಮಾನ ವಿತರಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...