ನೂರು ದಿನದಲ್ಲಿ ಸರ್ಕಾರ ಎಡವಿದ್ದೇ ಹೆಚ್ಚು, ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ನಿಂತು ಹೋಗಿದೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ

Date:

  • ‘ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’
  • ‘ಬರಗಾಲಕ್ಕೆ ರೈತ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ’

ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

- Advertisement -

ಸರ್ಕಾರ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿ, “ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರಂಟಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಹರಿಹಾಯ್ದಿದ್ದಾರೆ.

“ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ ಐದು ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

“ಈ ಮಧ್ಯ ಗ್ಯಾರಂಟಿಗಾಗಿ ಎಸ್ಸಿ ಎಸ್ಟಿ ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂಪಾಯಿ ಬಳಕೆ ಮಾಡಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಜನರಿಗೆ ಸರ್ಕಾರ ಮೋಸ ಮಾಡಿದೆ. ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ವಿಫಲವಾಗಿದೆ. ನಮ್ಮ ಡ್ಯಾಮುಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕೊಲೆ ಸುಲಿಗೆ ಸಾಮಾನ್ಯವಾಗಿದೆ” ಎಂದು ಆರೋಪಿಸಿದರು.

“ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು‌ ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ. ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ. ಸರ್ಕಾರದ ವಿರುದ್ಧ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ತುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನ. ಇದು ಪ್ರಜಾಪ್ರಭುತ್ವ ವಿರೊಧಿ, ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತವೆಂದು ನೂರು ದಿನಗಳಲ್ಲಿ ತೋರಿಸಿಕೊಟ್ಟಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...