ಬೀದರ್‌ | ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ : ಶಾಸಕ ಶೈಲೇಂದ್ರ ಬೆಲ್ದಾಳೆ

Date:

ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯ ಮಾಡುವುದಕ್ಕೆ ಸದಾ ಬದ್ಧನಾಗಿದ್ದೇನೆ. ಅಧಿಕಾರಕ್ಕಿಂತ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಧ್ಯೇಯ. ಸ್ವಚ್ಛ ಆಡಳಿತ ನೀಡುವುದು ನನ್ನ ಗುರಿ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

- Advertisement -

ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ ಗ್ರಾಮದಿಂದ ಮಲ್ಕಾಪುರ ವಾಯಾ ದೇವ-ದೇವ ವನ ತನಕ ಸುಮಾರು ₹1ಕೋಟಿ ವೆಚ್ಚದ  ಡಾಂಬರೀಕರಣ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ʼನನ್ನ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಕೊಠಡಿ, ಶೌಚಾಲಯ, ಕಾಂಪೌಂಡ್ ನಿರ್ಮಾಣ, ಸಮುದಾಯ ಭವನ, ಸಾರ್ವಜನಿಕ ಶೌಚಾಲಯ, ಯಾತ್ರಿ ನಿವಾಸ ನಿರ್ಮಾಣ ಹಾಗೂ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆಗಳು ಮಹತ್ವದ ಪಾತ್ರ ವಹಿಸುತ್ತವೆ. ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಅಭಿವೃದ್ಧಿಯಾಗುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಜನರ ಋಣ ತೀರಿಸುವಂತಹ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು. ರಸ್ತೆ ಕಾಮಗಾರಿ ಗುಣಮಟ್ಟದಿಂದ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸೇವಂತಿಗೆʼ ಕೃಷಿಯಲ್ಲಿ ಯಶಸ್ಸು ಕಂಡ ಯುವ ರೈತ : ತಿಂಗಳಿಗೆ ಒಂದು ಲಕ್ಷ ಆದಾಯ!

ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಬಾಬುರಾವ ಮಲ್ಕಾಪುರೆ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ ಸುಲ್ತಾನಪುರ, ಗ್ರಾಪಂ ಸದಸ್ಯರಾದ ದಾವುದು ತೇಲಿ, ಮಲ್ಲಮ್ಮ ಹೂಗಾರ, ಸಚೀನ ಮಲ್ಕಾಪುರ, ಮುಖಂಡರಾದ ಸಂತೋಷ್ ಸಣ್ಣಗೊಂಡ, ಬಾಬು ಬರಿದಬಾದೆ,  ಓಂಕಾರ, ಸಂಜು ಭಂಡೆ, ಅನೀಲ ತಿಪ್ಪರಗಿ, ನಾಗಮ್ಮ ಹೂಗಾರ, ಸುಧಾಕರ,  ಗುಂಡಪ್ಪ,  ರಾಹುಲ್, ಸಂಗಮೇಶ ಹಳ್ಳಿ, ಶಿವಕುಮಾರ ನಾಗಲಗಿದ್ದಿ, ಕುಶಲರಾವ, ದೀಲಿಪ್ ಗುಮ್ಮಾ, ಶೇಖರ್ ಕೋಳಾರ, ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...