ಉಡುಪಿ | 11 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ, ನನ್ನ ಪರವಾಗಿ ಯಾರೂ ಮಾತನಾಡಿಲ್ಲ : ದೇವೇಂದ್ರ ಸುವರ್ಣ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಅಕ್ಷತಾ ಪೂಜಾರಿ ಅವರು ಮಾಡಿದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ವಾಸ್ತವಕ್ಕೆ ದೂರವಾಗಿವೆ ಎಂದು ದೇವೇಂದ್ರ ಸುವರ್ಣ ಅವರು ಆರೋಪಿಸಿದ್ದಾರೆ. ಈ ಕುರಿತು ಅವರು ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ನೋವು, ಅಸಮಾಧಾನ ಮತ್ತು ಪ್ರಕರಣದ ಸಂಪೂರ್ಣ ಹಿನ್ನೆಲೆಯನ್ನು ಮಾಧ್ಯಮಗಳ ಮುಂದೆ ವಿವರಿಸಿದರು.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಕ್ಷತಾ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಸಂಘಟನೆಗಳು, ನಾಯಕರು ಮತ್ತು ಸಾರ್ವಜನಿಕರು ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವುದನ್ನು ಗಮನಿಸಿದ ದೇವೇಂದ್ರ ಸುವರ್ಣ, “ನನಗೆ ಕಳೆದ 11 ವರ್ಷಗಳಿಂದ ನ್ಯಾಯ ಸಿಗದೆ ಇದ್ದರೂ ಯಾರೂ ಮಾತನಾಡಿಲ್ಲ. ಆದರೆ ಈಗ ಒಂದು ಪ್ರಕರಣಕ್ಕೆ ಮಾತ್ರ ಇಷ್ಟೊಂದು ಗಮನ ನೀಡಲಾಗುತ್ತಿದೆ. ಇದು ನನಗೆ ತೀವ್ರ ನೋವು ತಂದಿದೆ” ಎಂದು ಹೇಳಿದರು.

ಇದನ್ನು ಓದಿ : https://eedina.com/karnataka/akshatha-poojary-udupi-case-protest-brahmawara-police-station/2025-12-17/

ಪೊಲೀಸರು ಯಾವುದೇ ರೀತಿಯ ದೌರ್ಜನ್ಯ ಅಥವಾ ದುರ್ವರ್ತನೆ ತೋರಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಪೊಲೀಸರು ಆಶೀಕ್ ಮನೆಗೆ ಹೋಗಿದ್ದು ಕೇವಲ ಆರೋಪಿಯ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಮಾತ್ರ. ಅಲ್ಲಿ ಮಾನವೀಯ ನೆಲೆಯಲ್ಲಿ ನಡೆದುಕೊಂಡಿದ್ದಾರೆ. ಯಾವುದೇ ಹಲ್ಲೆ, ಅವಾಚ್ಯ ಶಬ್ದ ಅಥವಾ ಅಸಭ್ಯ ವರ್ತನೆ ನಡೆದಿಲ್ಲ” ಎಂದು ಹೇಳಿದರು.

ತಮ್ಮ ಮೇಲೂ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ದೇವೇಂದ್ರ ಸುವರ್ಣ, “ನಾನು ಕೋರ್ಟ್ ಆದೇಶದಂತೆ ಪೊಲೀಸರೊಂದಿಗೆ ಅಲ್ಲಿಗೆ ಹೋಗಿದ್ದೇನೆ. ಪೊಲೀಸರೇ ಕರೆ ಮಾಡಿ ಆಶೀಕ್ ಇಂತಹ ಲೊಕೇಷನ್‌ನಲ್ಲಿ ಇದ್ದಾನೆ ಎಂದು ಮಾಹಿತಿ ನೀಡಿದ ಕಾರಣ ನಾನು ಅವರ ಜೊತೆ ಹೋದೆ. ಇದನ್ನು ಹೊರತುಪಡಿಸಿ ನಾನು ಯಾರ ಮೇಲೂ ಹಲ್ಲೆ ಮಾಡಿಲ್ಲ, ಹುಡುಗಿಯೊಂದಿಗೆ ಯಾವುದೇ ರೀತಿಯ ಮಾತುಕತೆಯನ್ನೂ ನಡೆಸಿಲ್ಲ. ನನ್ನ ವಿರುದ್ಧ ದಾಖಲಿಸಿರುವ ಆರೋಪಗಳು ಸಂಪೂರ್ಣ ಸುಳ್ಳು” ಎಂದು ತಿಳಿಸಿದರು.

ಅಕ್ಷತಾ ಪೂಜಾರಿ ಅವರು ಮಾಡಿರುವ ಆರೋಪಗಳಿಂದಾಗಿ ಪೊಲೀಸರು ಹಾಗೂ ನನ್ನ ಮೇಲೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಅವರು, “ಸತ್ಯ ಮತ್ತು ಧರ್ಮ ಇದ್ದರೆ ಅದು ನನ್ನನ್ನು ಕಾಪಾಡುತ್ತದೆ ಎಂಬ ನಂಬಿಕೆ ನನಗಿದೆ. ನ್ಯಾಯ ಎಲ್ಲರಿಗೂ ಸಮಾನವಾಗಿ ದೊರಕಬೇಕು. ಒಂದು ಜಾತಿ ಅಥವಾ ಸಂಘಟನೆಯ ಬೆಂಬಲ ಇದ್ದವರಿಗೆ ಮಾತ್ರ ನ್ಯಾಯ ಸಿಗುವ ಸ್ಥಿತಿ ನಿರ್ಮಾಣವಾಗಬಾರದು” ಎಂದು ಹೇಳಿದರು.

ತಮಗೂ ನ್ಯಾಯ ದೊರಕಬೇಕಾದರೆ ಜಾತಿ ಅಥವಾ ಸಂಘಟನೆಯ ಹೆಸರಿನಲ್ಲಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ದೇವೇಂದ್ರ ಸುವರ್ಣ, “ನಾನು ಸತ್ಯದ ಮೇಲೆ ನಿಂತಿದ್ದೇನೆ. ಸಂವಿಧಾನದ ಕಾನೂನ್ನು ನಂಬಿದ್ದೇನೆ ನನಗೆ ನ್ಯಾಯ ಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...