ಸೌಜನ್ಯ ಪ್ರಕರಣ | ಮರುತನಿಖೆಗೆ ಮೇಲ್ಮನವಿ ಅಗತ್ಯವಿಲ್ಲ; ಸಿಎಂ ಹೇಳಿಕೆಗೆ ವಕೀಲ ಪ್ರತಿಕ್ರಿಯೆ

Date:

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಆದೇಶಿಸಲು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಸೌಜನ್ಯ ಪ್ರಕರಣದಲ್ಲಿ ಸೌಜನ್ಯ ಕುಟುಂಬದ ಪರವಾಗಿ ವಕಾಯತ್ತು ವಹಿಸಿದ್ದ ವಕೀಲ ಶ್ರೀನಿವಾಸ್ ಅವರು ಪ್ರತಿಕ್ರಿಯೆ ನೀಡಿದ್ದು, “ಪ್ರಕರಣವನ್ನು ಮರುತನಿಖೆಗೆ ನೀಡಲು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅತ್ಯವಿಲ್ಲ” ಎಂದು ಹೇಳಿದ್ದಾರೆ.

- Advertisement -

ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಕೀಲ ಶ್ರೀನಿವಾಸ್, “ಮುಖ್ಯಮಂತ್ರಿಗಳು ಕೋರ್ಟ್‌ ತೀರ್ಪು ಓದುವುದು ಸ್ವಾಗತಾರ್ಹ. ಅವರು ವಕೀಲರಾಗಿದ್ದು, ತೀರ್ಪು ಓದುವುದರಿಂದ ಪ್ರಕರಣದ ಸ್ಪಷ್ಟತೆ ಅವರಿಗೆ ಸಿಗುತ್ತದೆ. ಆದರೆ, ಪ್ರಕರಣವನ್ನು ಮರುತನಿಖೆಗೆ ನೀಡಲು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ. ಅವರು ಖುದ್ದು ಮರುತನಿಖೆಗೆ ಆದೇಶ ನೀಡಬಹುದು” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಪ್ರಕರಣದಲ್ಲಿ ನಿರಪರಾಧಿ ಸಂತೋಷ್‌ ರಾವ್ ಅವರನ್ನು ಬಂಧಿಸಿ, ಅವರೇ ತಪ್ಪಿತಸ್ಥರೆಂದು ಸಾಬೀತು ಮಾಡುವುದರ ಸುತ್ತಲೇ ಪೊಲೀಸರು, ತನಿಖಾಧಿಕಾರಿಗಳು ತನಿಖೆ ಮಾಡಿದ್ದಾರೆ. ಆದರೆ, ಸಂತೋಷ್ ನಿರಪರಾಧಿ ಎಂದು ಕೋರ್ಟ್‌ ಹೇಳಿದೆ. ಸೌಜನ್ಯ ಕುಟುಂಬವೂ ಅದನ್ನೇ 11 ವರ್ಷಗಳಿಂದ ಹೇಳುತ್ತಾ ಬಂದಿದೆ. ಈಗ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆಂದರೆ, ಸಿಬಿಐ ಕೋರ್ಟ್‌ ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಸಂತೋಷ್ ವಿರುದ್ಧ ಮತ್ತೆ ತನಿಖೆ ನಡೆಸಬೇಕು ಎಂದಾಗುತ್ತದೆ” ಎಂದು ಅವರು ವಿವರಿಸಿದ್ದಾರೆ.

“ಸಂತೋಷ್‌ ನಿರಪರಾಧಿ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರೆ, ಅದು ಸಿಬಿಐ ಕೋರ್ಟ್‌ ತೀರ್ಪಿನ ವಿರುದ್ಧದ ಮೇಲ್ಮನವಿ ಆಗುತ್ತದೆ. ಆಗ ಪ್ರಕರಣದ ವಿಚಾರಣೆ ಮತ್ತೆ ಸಂತೋಷ್‌ ಸುತ್ತಲೇ ನಡೆಯುತ್ತದೆ. ಈಗಾಗಲೇ 11 ವರ್ಷ ನೋವುಂಡಿರುವ ಸಂತೋಷ್‌ಗೆ ಮತ್ತಷ್ಟು ನೋವು ಕೊಟ್ಟಂತಾಗುತ್ತದೆ. ಈ ಪ್ರಕರಣದಲ್ಲಿ ಆಗಬೇಕಿರುವುದು ನಿಜವಾದ ಅಪರಾಧಿಗಳನ್ನು ಹಿಡಿದು, ತನಿಖೆ ನಡೆಸಿ, ಶಿಕ್ಷೆಗೆ ಗುರಿಪಡಿಸುವುದು. ಅದಕ್ಕಾಗಿ, ಪ್ರಕರಣವನ್ನು ಮತ್ತೆ ಮೊದಲಿನಿಂದ ತನಿಖೆ ನಡೆಸಬೇಕು. ನಿಜವಾದ ಅಪರಾಧಿಗಳನ್ನು ಬಂಧಿಸಬೇಕು. ಅದಕ್ಕಾಗಿ ಸರ್ಕಾರ ಮರುತನಿಖೆಗೆ ಆದೇಶಿಸಬೇಕು. ಇದಕ್ಕೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿಲ್ಲ” ಎಂದು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸೌಜನ್ಯ ಪ್ರಕರಣ ಮರುತನಿಖೆ | ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಮಂಗಳವಾರ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ, “ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರುತನಿಖೆಗೆ ನೀಡಬೇಕೆಂದು ಸೌಜನ್ಯ ಅವರ ಪೋಷಕರು ಹಾಗೂ ಹೋರಾಟಗಾರರು ಒತ್ತಾಯಿಸಿದ್ದಾರೆ. ಪ್ರಕರಣವು ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಪ್ರಕರಣವನ್ನು ಮರುತನಿಖೆಗೆ ನೀಡಬೇಕೆಂದರೆ ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಸಿಬಿಐ ಕೋರ್ಟ್‌ನ ತೀರ್ಪು ಓದಿದ ನಂತರ, ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...