ಧರ್ಮಸ್ಥಳ ಪ್ರಕರಣ | ಕೋರ್ಟಿನಲ್ಲಿ 1 ಗಂಟೆ 20 ನಿಮಿಷ ಹೇಳಿಕೆ ನೀಡಿದ ವ್ಯಕ್ತಿ: ಅಸ್ಥಿಪಂಜರ ಪೊಲೀಸರಿಗೆ ಹಸ್ತಾಂತರ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ 1995 ರಿಂದ 2014ರವರೆಗೆ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯು ಇಂದು(ಜು.11) ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರಾಗಿದ್ದು, ಸುಮಾರು 1 ಗಂಟೆ 20 ನಿಮಿಷ ಆತ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ವ್ಯಕ್ತಿ ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದರು. ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNSS) ನ ಸೆಕ್ಷನ್ 183 ರ ಅಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ದಾಖಲಿಸಿದ್ದಾನೆ.

ನ್ಯಾಯಾಲಯಕ್ಕೆ ಬರುವಾಗ ಕೈಯಲ್ಲಿ ಕಪ್ಪು ಬ್ಯಾಗ್ ಕಾಣಿಸಿಕೊಂಡಿದ್ದು, ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತ್ತು. ಸದ್ಯ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ತಾನು ದೂರಿನಲ್ಲಿ ಉಲ್ಲೇಖಿಸಿದ್ದ ಶವದ ಅಸ್ಥಿಪಂಜರವನ್ನು ನ್ಯಾಯಾಧೀಶರಿಗೆ ತೋರಿಸಲು ತಂದಿದ್ದ ಎಂದು ತಿಳಿದುಬಂದಿದೆ. ಅಲ್ಲದೇ, ಈ ಅಸ್ಥಿಪಂಜರವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾನೆ.

Advertisements

ಇನ್ನು ಈ ನಡುವೆ ಹೇಳಿಕೆ ಬಿಡುಗಡೆ ಮಾಡಿರುವ ಪಾಪ ಪ್ರಜ್ಞೆ ಕಾಡಿದ್ದ ವ್ಯಕ್ತಿಯ ಪರ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶ್‌ಪಾಂಡೆ, “ದೂರುದಾರ ವಿದ್ಯಾವಂತನಲ್ಲದ ಕಾರಣ ಕಾನೂನು ಪ್ರಕ್ರಿಯೆಗಳ ಬಗ್ಗೆ ತಿಳಿದಿಲ್ಲ. ಹಾಗಾಗಿ ಕೋರ್ಟ್‌ನಲ್ಲಿ ಹೇಳಿಕೆ ನೀಡುವಾಗ ತನ್ನೊಂದಿಗೆ ವಕೀಲರೂ ಇರಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದೆವು. ಆದರೆ ನ್ಯಾಯಾಧೀಶರು ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏನಿದು ಪ್ರಕರಣ?

“ನನಗೆ ನಿರಂತರ ಪ್ರಾಣ ಬೆದರಿಕೆಯೊಡ್ಡಿ, ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊಲೆಗೊಳಗಾದ ಹಾಗೂ ಅತ್ಯಾಚಾರಕ್ಕೊಳಗಾಗಿ ಕೊಲೆಗೊಳಗಾದ ಅನೇಕ ಮೃತ ದೇಹಗಳು ಮತ್ತು ಸಾಕ್ಷ್ಯಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಿದ್ದಾರೆ. ನನ್ನಿಂದ ಹೂತು ಹಾಕಿಸಿರುವ ಮೃತ ದೇಹಗಳ ಕಳೇಬರಗಳನ್ನು ಪೊಲೀಸರ ಸಮ್ಮುಖದಲ್ಲಿ ಹೊರತೆಗೆಸುವಂತೆ ಮನವಿ ಮಾಡುತ್ತಿದ್ದೇನೆ. ತಕ್ಷಣದ ಪ್ರಥಮ ವರ್ತಮಾನ ವರದಿ ಹಾಗೂ ಸಾಕ್ಷಿ ಸಂರಕ್ಷಣೆಯ ವಿನಂತಿ ಮಾಡುತ್ತಿದ್ದೇನೆ ಎಂದು ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ 1995 ರಿಂದ 2014ರವರೆಗೆ ಕೆಲಸ ಮಾಡುತ್ತಿದ್ದ ಅನಾಮಧೇಯ ವ್ಯಕ್ತಿಯು ದ.ಕ. ಎಸ್‌ಪಿಯವರಿಗೆ ಸಲ್ಲಿಸಿದ್ದ ಆರು ಪುಟಗಳ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣವು ಈಗ ದೇಶದ ಗಮನ ಸೆಳೆದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X